ಮಾರ್ಚ್​ 22 ರಂದು ಕರ್ನಾಟಕ ಬಂದ್; ಅಂದು ಏನಿರುತ್ತೆ?, ಏನಿರಲ್ಲ?.. ವಾಟಾಳ್ ನಾಗರಾಜ್ ಕೊಟ್ಟ ಎಚ್ಚರಿಕೆ ಏನು?

author-image
Bheemappa
Updated On
ನಾಳೆ ಓಲಾ, ಉಬರ್ ರಸ್ತೆಗೆ ಇಳಿಯಲ್ಲ.. ಕರ್ನಾಟಕ ಬಂದ್​ಗೆ ಯಾರೆಲ್ಲ ಬೆಂಬಲ ಕೊಟ್ಟವ್ರೆ..?
Advertisment
  • ಕನ್ನಡ, ಕನ್ನಡಿಗರಿಗಾಗಿ, ಕನ್ನಡಿಗರ ಮರ್ಯಾದೆಗಾಗಿ ಹೋರಾಟ
  • ವಾಟಾಳ್​ ನಾಗರಾಜ್ ನೇತೃತ್ವದ ಸಭೆಯಲ್ಲಿ ಬಂದ್ ಘೋಷಣೆ
  • ಮರಾಠರಿಗೆ ಸರಿಯಾದ ಪಾಠ ಕಲಿಸಬೇಕಿದೆ- ವಾಟಾಳ್​ ನಾಗರಾಜ್

ಬೆಂಗಳೂರು: ಮರಾಠಿ ಪುಂಡರು ಮಿತಿ ಮೀರಿ ವರ್ತಿಸುತ್ತಿದ್ದು ಅವರ ವಿರುದ್ಧ ಸಮರ ಸಾರಲು ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ವಾಟಾಳ್​ ನಾಗರಾಜ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಾರ್ಚ್ 22 ರಂದು ಬೆಳೆಗ್ಗೆ 6 ಗಂಟೆಯಿಂದ ರಿಂದ ಸಂಜೆ 6 ರವರೆಗೆ ಕರ್ನಾಟಕ ಬಂದ್​ಗೆ ಕರೆ ನೀಡಲಾಗಿದೆ.

ಬೆಂಗಳೂರಿನ ವುಡ್ ಲ್ಯಾಂಡ್ಸ್ ಹೋಟೆಲ್‌ನಲ್ಲಿ ಸಭೆ ನಡೆಸಿ ಮಾತನಾಡಿದ ವಾಟಾಳ್ ನಾಗರಾಜ್ ಅವರು, ಕನ್ನಡಕ್ಕಾಗಿ, ಕನ್ನಡಿಗರಿಗಾಗಿ, ಕನ್ನಡಿಗರ ಮರ್ಯಾದೆಗಾಗಿ ಮಾರ್ಚ್ 22 ಅಖಂಡ ಕರ್ನಾಟಕ ಬಂದ್ ಮಾಡಲಾಗುತ್ತದೆ. ಕರವೇ ಪ್ರವೀಣ್ ಶೆಟ್ಟಿ ಹಾಗೂ ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣ ಗೌಡರಿಗೂ ಮನವಿ ಮಾಡಲಾಗುವುದು. ಮರಾಠಿಗರ ಪುಂಡಾಟಿಕೆ ಜಾಸ್ತಿ ಆಗಿದೆ. ಅದಕ್ಕೆ ಕಡಿವಾಣ ಹಾಕಲೇಬೇಕು ಎಂದು ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಕರೆದು ಮಾತನಾಡಿದರೂ ಈ ಬಂದ್ ಅನ್ನು ವಾಪಸ್ ಪಡೆಯಲ್ಲ. ನನ್ನ ಜೀವನದಲ್ಲಿ ಒಮ್ಮೆ ಜಾರಿದ್ದೇನೆ. ಇನ್ನು ಮುಂದೆ ಯಾರೇ ಹೇಳಿದರೂ ಇಟ್ಟ ಹೆಜ್ಜೆ ಹಿಂದೆಕ್ಕೆ ಇಡಲ್ಲ. ಮಾರ್ಚ್ 22 ರಂದು ಬೆಳಗ್ಗೆ ಟೌನ್ ಹಾಲ್​ನಿಂದ ಫ್ರೀಡಂ ಪಾರ್ಕ್​ವರೆಗೆ ಮೆರವಣಿಗೆ ಮಾಡುತ್ತೇವೆ. ಬೆಳಗಾವಿಯಲ್ಲಿ ಕೆಎಸ್​ಆರ್​​ಟಿಸಿ ಬಸ್ ಕಂಡಕ್ಟರ್ ಮೇಲೆ‌ ನಡೆದ ಹಲ್ಲೆ ಸಹಿಸಲ್ಲ, ಅದನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: BREAKING: ಕರ್ನಾಟಕ ಬಂದ್.. ವಾಟಾಳ್ ನಾಗರಾಜ್ ಮಹತ್ವದ ಘೋಷಣೆ; ಯಾವಾಗ?

publive-image

ಕರ್ನಾಟಕ ಬಂದ್​ಗೆ ಸಿಎಂ ಸಿದ್ದರಾಮಯ್ಯ ಅವರು ಸಂಪೂರ್ಣ ಬೆಂಬಲ ಕೊಡಬೇಕು. ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಇಲಾಖೆಯ ಎಲ್ಲಾ ಬಸ್​ಗಳನ್ನು ಮಾರ್ಚ್​ 22 ರಂದು ನಿಲ್ಲಿಸಬೇಕು. ಬಸ್​ಗಳನ್ನು ರಸ್ತೆಗೆ ಇಳಿಸಬಾರದು. ಹೋಟೆಲ್ ಮಾಲೀಕರು, ಸಿನಿಮಾ ರಂಗದವರು, ಸರ್ಕಾರಿ ನೌಕರರು, ದೊಡ್ಡ ಹಾಗೂ ಸಣ್ಣ ವಾಹನಗಳ (ಲಾರಿ, ಖಾಸಗಿ ಬಸ್, ಕಾರು, ವ್ಯಾನ್) ಮಾಲೀಕರು ನಮಗೆ ಬೆಂಬಲ ಸೂಚಿಸಬೇಕು ಎಂದು ಮನವಿ ಮಾಡಿದ್ದಾರೆ.

ಇನ್ನು ಔಷಧಿ ಅಂಗಡಿ, ಸರ್ಕಾರಿ, ಖಾಸಗಿ ಆಸ್ಪತ್ರೆಗಳು, ಮಕ್ಕಳ ಆಸ್ಪತ್ರೆ, ಆ್ಯಂಬುಲೆನ್ಸ್ ಸೇರಿ ತುರ್ತು ಸೇವೆ ಯಾವು ಇವೆ ಅವುಗಳಿಗೆ ನಿರ್ಬಂಧ ಇರಲ್ಲ. ಎಂದಿನಂತೆ ಕೆಲಸ ಮಾಡಬಹುದು. ಮಾಧ್ಯಮದವರಿಗೂ ಬಂದ್​ನಿಂದ ವಿನಾಯತಿ ಇರುತ್ತದೆ. ಉಳಿದಂತೆ ಎಲ್ಲವನ್ನು ಬಂದ್ ಮಾಡಲಾಗುವುದು. ಮರಾಠರಿಗೆ ಸರಿಯಾದ ಪಾಠ ಕಲಿಸಬೇಕಿದೆ. ಹೀಗಾಗಿ ಕರ್ನಾಟಕದ ಎಲ್ಲ ಕನ್ನಡಪರ ಸಂಘಟನೆಗಳು ಹಾಗೂ ರೈತ ಸಂಘಗಳು ಸಂಪೂರ್ಣ ಬೆಂಬಲ ನೀಡಬೇಕು ಎಂದು ವಾಟಾಳ್ ನಾಗರಾಜ್ ಅವರು ಮನವಿ ಮಾಡಿದ್ದಾರೆ.

ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment