ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿಯಿಂದ ಕಾಲ್ತುಳಿತ - ಕರ್ನಾಟಕ ಬಿಜೆಪಿ ವಾಗ್ದಾಳಿ..

author-image
Ganesh
Updated On
ವರ್ಷದ ಹಿಂದೆ ಮದುವೆ ಆಗಿದ್ದ ಅಕ್ಷತಾ.. RCB ವಿಜಯೋತ್ಸವದಲ್ಲಿ ಗಂಡನ ಎದುರೇ ಜೀವ ಬಿಟ್ಟಳು
Advertisment
  • ಚಿನ್ನಸ್ವಾಮಿ ಸ್ಟೆಡಿಯಂನಲ್ಲಿ ಭೀಕರ ಕಾಲ್ತುಳಿತ ಸಂಭವಿಸಿದೆ
  • ಸಾವು, ನೋವಿನ ಸಂಖ್ಯೆ ಏರಿಕೆ ಆಗುತ್ತಲೇ ಇದೆ
  • ಬೆನ್ನಲ್ಲೇ ರಾಜ್ಯ ಸರ್ಕಾರದ ನಡೆ ಪ್ರಶ್ನಿಸಿದ ವಿಪಕ್ಷ ಬಿಜೆಪಿ

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಸಾವು, ನೋವಿನ ಸಂಖ್ಯೆ ಏರಿಕೆ ಆಗುತ್ತಿದೆ. ಈ ಬೆನ್ನಲ್ಲೇ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.

ಟ್ವೀಟ್ ಮಾಡಿರುವ ಕರ್ನಾಟಕ ಬಿಜೆಪಿ.. 7 ಮಂದಿ ಜೀವ ಕಳೆದುಕೊಂಡಿದ್ದಾರೆ. ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿಯಿಂದಾಗಿ ಕಾಲ್ತುಳಿತ ಸಂಭವಿಸಿ ಹಲವರು ಜೀವನ್ಮರಣ ಹೋರಾಟ ನಡೆಸ್ತಿದ್ದಾರೆ. ಜನಸಂದಣಿ ನಿಯಂತ್ರಿಸಲು ಯಾವುದೇ ಕ್ರಮಗಳಿಲ್ಲ. ಮೂಲಭೂತ ವ್ಯವಸ್ಥೆಗಳಿಲ್ಲ. ಕೇವಲ ಅವ್ಯವಸ್ಥೆ. ಅಮಾಯಕ ಜನರು ಜೀವ ತೆತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರೀಲ್‌ಗಳ ಶೂಟಿಂಗ್‌ನಲ್ಲಿ ಮತ್ತು ಕ್ರಿಕೆಟಿಗರೊಂದಿಗೆ ಗಮನ ಸೆಳೆಯುವಲ್ಲಿ ನಿರತರಾಗಿದ್ದರು. ಇದು ನಾಚಿಕೆಗೇಡಿನ ಸಂಗತಿ. ಕಾಂಗ್ರೆಸ್ ಸರ್ಕಾರದ ಕೈಗಳ ಮೇಲೆ ರಕ್ತದ ಕಲೆ ಇದೆ ಎಂದು ಬಿಜೆಪಿ ಗುಡುಗಿದೆ.

ಇದನ್ನೂ ಓದಿ: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಘೋರ ದುರಂತ; RCB ಫ್ಯಾನ್ಸ್‌ ನೂಕು ನುಗ್ಗಲಿಗೆ ಸಾವಿನ ಸಂಖ್ಯೆ ಏರಿಕೆ

ಆಗಿದ್ದೇನು..? 

ಐಪಿಎಲ್​ ಫೈನಲ್​ನಲ್ಲಿ ಆರ್​ಸಿಬಿ ತಂಡವು ಪಂಜಾಬ್ ಕಿಂಗ್ಸ್​ ಅನ್ನು ಸೋಲಿಸಿ ಟ್ರೋಫಿಗೆ ಮುತ್ತಿಟ್ಟಿತು. ಇದೇ ಖುಷಿಯಲ್ಲಿ ರಾಜ್ಯ ಸರ್ಕಾರ ವಿಧಾನಸೌಧದ ಮುಂಭಾಗದಲ್ಲಿ ಆರ್​ಸಿಬಿ ಟೀಂಗೆ ಹಾಗೂ ಟೀಂನ ಮ್ಯಾನೇಜ್ಮೆಂಟ್​ಗೆ ಸನ್ಮಾನ ಕಾರ್ಯಕ್ರಮ ಇಟ್ಟುಕೊಂಡಿತ್ತು. ಇತ್ತ ಚಿನ್ನಸ್ವಾಮಿ ಮೈದಾನದಲ್ಲಿ ಆರ್​ಸಿಬಿ ಮ್ಯಾನೇಜ್ಮೆಂಟ್​ನಿಂದ ಸಂಭ್ರಮಾಚರಣೆ ಇಟ್ಟುಕೊಂಡಿತ್ತು. ಈ ಹಿನ್ನೆಲೆಯಲ್ಲಿ ಚಿನ್ನಸ್ವಾಮಿಗೆ ಅಪಾರ ಅಭಿಮಾನಿಗಳು ಹರಿದು ಬಂದಿದೆ. ಆಗ ನೂಕು ನುಗ್ಗಲು ಸಂಭವಿಸಿ ಕಾಲ್ತುಳಿತ ನಡೆದು ಅನಾಹುತ ಆಗಿದೆ. ಇನ್ನು, ಕಾಲ್ತುಳಿತ ಸಂದರ್ಭದಲ್ಲಿ ಆಟಗಾರರು ವಿಧಾನಸೌಧದ ಕಾರ್ಯಕ್ರಮದಲ್ಲಿದ್ದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment