ಕಾಂಗ್ರೆಸ್‌ಗೆ ಬೇರೆ ಕಡೆ ಹೋಗಿ ಕಾಡಿ-ಬೇಡಿ ಅಸ್ತಿತ್ವ ಉಳಿಸಿಕೊಳ್ಳುತ್ತಿದೆ
ಬೆಂಗಳೂರಿನಲ್ಲಿ ಮಾತನಾಡಿದ ಮಾಜಿ ಸಚಿವ ಕಾಂಗ್ರೆಸ್ ವಿರುದ್ಧ ಕಿಡಿ
ಬಿಜೆಪಿ-ಜೆಡಿಎಸ್ ಜೊತೆಯಲ್ಲೇ ಹೋಗುವಂತಹ ಚರ್ಚೆ ಆಗುತ್ತಿದೆ
ಬೆಂಗಳೂರು: ಬಿಜೆಪಿ ಬಗ್ಗೆ ರೊಟ್ಟಿ ಹಳಸಿತ್ತು, ನಾಯಿ ಹಸಿದಿತ್ತು ಎಂಬ ಕಾಂಗ್ರೆಸ್ನ ಟೀಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಸಿ.ಎನ್ ಅಶ್ವತ್ ನಾರಾಯಣ್ ಕಿಡಿ ಕಾರಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಶಾಸಕ ಸಿ.ಎನ್ ಅಶ್ವತ್ ನಾರಾಯಣ್ ಅವರು, ಸದ್ಯ ಬಿಜೆಪಿ ಶಕ್ತಿಯುತವಾಗಿದೆ. ರೊಟ್ಟಿ ಹಳಸಿತ್ತು, ನಾಯಿ ಹಸಿದಿತ್ತು ಎಂಬುದು ಕಾಂಗ್ರೆಸ್‌ನವರಿಗೆ ಅನ್ವಯಿಸುತ್ತದೆ. ಈಗ ಆ ಪರಿಸ್ಥಿತಿ ಕಾಂಗ್ರೆಸ್‌ಗೆ ಬಂದಿದ್ದು ಅಸ್ತಿತ್ವವನ್ನೇ ಕಳೆದುಕೊಂಡಿದೆ. ಕಾಂಗ್ರೆಸ್ ಬೇರೆ ಕಡೆ ಹೋಗಿ ಕಾಡಿ-ಬೇಡಿ ತಮ್ಮ ಅಸ್ತಿತ್ವ ಉಳಿಸಿಕೊಳ್ಳುವ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ಆಮ್ ಆದ್ಮಿ, ಶಿವಸೇನಾ ಪಕ್ಷವನ್ನು ಅವರು ಬಿಡುತ್ತಿಲ್ಲ ಎಂದು ಹೇಳಿದ್ದಾರೆ.
ಇನ್ನು ಇದೇ ವೇಳೆ ಬಿಜೆಪಿ-ಜೆಡಿಎಸ್ ಮೈತ್ರಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅಶ್ವತ್ ನಾರಾಯಣ್, ಪ್ರಧಾನಿ ಮೋದಿ ಮತ್ತು ಎನ್ಡಿಎ ಬಲಪಡಿಸಲು ಪ್ರಾದೇಶಿಕ ಪಕ್ಷಗಳು ಬೆಂಬಲ ಕೊಡುವ ಕೆಲಸ ಆಗುತ್ತಿದೆ. ರಾಜ್ಯದಲ್ಲಿ ಕೂಡ ಬಿಜೆಪಿ-ಜೆಡಿಎಸ್ ಜೊತೆಯಲ್ಲೇ ಹೋಗುವಂತಹ ಚರ್ಚೆಯಾಗುತ್ತಿದೆ. ಜೆಡಿಎಸ್ ನಾಯಕರು ಇದಕ್ಕೆ ಇಚ್ಚೆ ವ್ಯಕ್ತಪಡಿಸಿದ್ದಾರೆ. ಆದ್ರೆ ಈ ಕುರಿತು ಇನ್ನೂ ಅಧಿಕೃತ ಘೋಷಣೆಯಾಗಿಲ್ಲ. ನಮ್ಮ ನಾಯಕರಾದ ಬಿ.ಎಸ್ ಯಡಿಯೂರಪ್ಪನವರು ಕ್ಷೇತ್ರ ಕೇಳಿದ್ದಾರೆ ಅಂತ ಹೇಳಿದ್ದಾರೆ. ನಾವು ಕಳೆದ ಚುನಾವಣೆಯಲ್ಲಿ ಕೆಲವು ಕ್ಷೇತ್ರ ಕಳೆದುಕೊಂಡಿದ್ವಿ. ಆ ಕ್ಷೇತ್ರದಲ್ಲಿ ಒಗ್ಗಟ್ಟಾಗಿ ಏನು ಕೆಲಸ ಮಾಡಬಹುದು ಎನ್ನುವುದು ಚರ್ಚೆ ಆಗಲಿದೆ. ಮೈತ್ರಿ ಬಗ್ಗೆ ಅಧಿಕೃತವಾಗಿ ಘೋಷಣೆಯಾದ ಬಳಿಕ ಎಲ್ಲ ಗೊತ್ತಾಗಲಿದೆ ಎಂದು ಹೇಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ