ಉತ್ತರ ಕರ್ನಾಟಕಕ್ಕೆ ವಿರೋಧ ಪಕ್ಷದ ನಾಯಕ ಸ್ಥಾನ ಸಿಗುತ್ತಿಲ್ಲ!
ಶಾಸಕಾಂಗ ಪಕ್ಷದ ಸಭೆ ಆರಂಭಕ್ಕೆ ಮುನ್ನ ಸಿಡಿದೆದ್ದ ಯತ್ನಾಳ್
ಯತ್ನಾಳ್ ಜೊತೆ ರಮೇಶ್ ಜಾರಕಿಹೊಳಿ, ಅರವಿಂದ ಬೆಲ್ಲದ ಬಂಡಾಯ?
ಬೆಂಗಳೂರು: ಆರು ತಿಂಗಳ ಬಳಿಕ ರಾಜ್ಯ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯುತ್ತಿದೆ. ಈ ಮಹತ್ವದ ಮೀಟಿಂಗ್ ಲೋಕಸಭಾ ಚುನಾವಣೆಗೂ ಮುನ್ನ ರಾಜ್ಯ ಬಿಜೆಪಿಗೆ ಮಹತ್ವದ್ದಾಗಿದೆ. ಬಿ.ವೈ ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ನಡೆಯುತ್ತಿರೋ ಮೊದಲ ಸಭೆ ಇದಾಗಿದ್ದು, ವಿಪಕ್ಷ ನಾಯಕನ ಆಯ್ಕೆಯಾಗುವ ಸಾಧ್ಯತೆ ಇದೆ. ಈ ಎಲ್ಲಾ ಕಾರಣಗಳಿಂದ ರಾಜ್ಯ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಮಹತ್ವ ಪಡೆದುಕೊಂಡಿದ್ದು, ರಾಜ್ಯ ಬಿಜೆಪಿಯ ಘಟಾನುಘಟಿ ನಾಯಕರು ಬೆಂಗಳೂರಿನ ಖಾಸಗಿ ಹೋಟೆಲ್‌ನತ್ತ ಆಗಮಿಸಿದ್ದಾರೆ. ಬಿಜೆಪಿ ನಾಯಕರ ಆಗಮನದ ಮಧ್ಯೆ ಶಾಸಕಾಂಗ ಪಕ್ಷದ ಸಭೆಗೂ ಬಂಡಾಯದ ಬಿಸಿ ತಟ್ಟಿದೆ.
ಉತ್ತರ ಕರ್ನಾಟಕ ಭಾಗಕ್ಕೆ ವಿರೋಧ ಪಕ್ಷದ ನಾಯಕ ಸ್ಥಾನ ಸಿಗುತ್ತಿಲ್ಲ ಅಲ್ಲ ಅನ್ನೋ ಸುಳಿವು ಸಿಗುತ್ತಿದ್ದಂತೆ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಬಿಜೆಪಿ ಹೈಕಮಾಂಡ್‌ಗೆ ಖಡಕ್ ಸಂದೇಶ ರವಾನೆ ಮಾಡಲು ಮುಂದಾಗಿದ್ದಾರೆ. ಶಾಸಕಾಂಗ ಪಕ್ಷದ ಸಭೆ ಆರಂಭಕ್ಕೆ ಮುನ್ನ ಉತ್ತರ ಕರ್ನಾಟಕ ಭಾಗದ ಶಾಸಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.
ಖಾಸಗಿ ಹೋಟೆಲ್‌ಗೆ ಬಂದ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸಭೆಗೆ ಹಾಜರಾಗದೇ ಹೊರಗಡೆ ಬಂದಿದ್ದಾರೆ. ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರ ಜೊತೆಗೆ ನಾವು ಕುಳಿತುಕೊಳ್ಳಬೇಕಾ? ನಮ್ಮ ನಿಲುವನ್ನು ನಾವು ವೀಕ್ಷಕರಿಗೆ ತಿಳಿಸಿದ್ದೇವೆ ಎಂದ ಬಸನಗೌಡ ಪಾಟೀಲ್ ಯತ್ನಾಳ್ ಪ್ರತಿಕ್ರಿಯೆ ನೀಡಿದ್ದಾರೆ.
ರೆಬೆಲ್ ಬಸನಗೌಡ ಪಾಟೀಲ್ ಯತ್ನಾಳ್ ಅವರ ಜೊತೆ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ, ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಕೂಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶಾಸಕಾಂಗ ಪಕ್ಷದ ಸಭೆ ಬಹಿಷ್ಕರಿಸಲು ಮುಂದಾಗಿರುವ ಮೂವರು ಶಾಸಕರು ಬಿಜೆಪಿ ಹೈಕಮಾಂಡ್‌ಗೆ ತಮ್ಮ ಅಸಮಾಧಾನದ ಸಂದೇಶ ರವಾನೆ ಮಾಡಲು ಮುಂದಾಗಿದ್ದಾರೆ. ಚಹಾ ಕುಡಿಯಲು ಹೋಗ್ತಿರೋದಾಗಿ ಹೇಳಿ ಹೊರಟಿರುವ ಬಸನಗೌಡ ಪಾಟೀಲ್ ಯತ್ನಾಳ್ ಅವರು ಶಾಸಕಾಂಗ ಪಕ್ಷದ ಸಭೆ ಆರಂಭಕ್ಕೂ ಮುನ್ನವೇ ನಿರ್ಗಮಿಸಿರೋದು ಕುತೂಹಲ ಕೆರಳಿಸಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ