newsfirstkannada.com

ಈ ಬಾರಿಯ ಬಜೆಟ್​ನಲ್ಲಿ ಶಿಕ್ಷಣ ಇಲಾಖೆಯೇ ಮೇಲುಗೈ.. ಪಠ್ಯಪುಸ್ತಕ ಮರುಪರಿಷ್ಕರಣೆಗೂ ಬಜೆಟ್​ ಮೀಸಲು

Share :

07-07-2023

    ಬಜೆಟ್​ನಲ್ಲಿ ಪಠ್ಯಪುಸ್ತಕ ಮರುಪರಿಷ್ಕರಣೆಗೆ ಕ್ರಮ

    ವಾರದಲ್ಲಿ 2 ದಿನ ಪೂರಕ ಪೌಷ್ಟಿಕ ಆಹಾರ ಸಿಗಲಿದೆ

    ಶಿಕ್ಷಣಕ್ಕೆಂದೇ ಬರೋಬ್ಬರಿ 37,587 ಕೋಟಿ ಮೀಸಲು

#KarnatakaBudget2023: ಮುಖ್ಯಮಂತ್ರಿ ಸಿದ್ದರಾಮಯ್ಯನವರು 2023-24ರ ಬಜೆಟ್​ ಮಂಡಿಸಿದ್ದಾರೆ. 3.27 ಲಕ್ಷ ಕೋಟಿ ರೂಪಾಯಿ ಗಾತ್ರದ ಬಜೆಟ್​ ಅನ್ನು ವಿಧಾನ ಸೌಧದಲ್ಲಿ ಮಂಡಿದ್ದಾರೆ. ಅಂದಹಾಗೆಯೇ ಈ ಬಾರಿಯ ಬಜೆಟ್​ನಲ್ಲಿ ಶಿಕ್ಷಣಕ್ಕೂ ಹೆಚ್ಚಿನ ಮಹತ್ವವನ್ನು ಕೊಟ್ಟಿದ್ದಾರೆ. ಶಿಕ್ಷಣಕ್ಕೆಂದೇ ಬರೋಬ್ಬರಿ 37,587 ಕೋಟಿ ಮೀಸಲಿದ್ದಾರೆ. ಅಚ್ಚರಿಯ ಸಂಗತಿ ಎಂದರೆ ಈ ಬಾರಿ ಬಜೆಟ್​ನಲ್ಲಿ ಶಿಕ್ಷಣ ಇಲಾಖೆಗೆ ಅತಿ ಹೆಚ್ಚು ಅನುದಾನ ಮೀಸಲಿಟ್ಟ ಕ್ಷೇತ್ರವಾಗಿದೆ.

ಶಿಕ್ಷಣ ಇಲಾಖೆಗೆ ಈ ಬಾರಿಯ ಬಜೆಟ್​ನಲ್ಲಿ ನೀಡಿದ ಕೊಡುಗೆಗಳು ಬಗ್ಗೆ ಮಾಹಿತಿ ಇಲ್ಲಿವೆ..

-ಸಮಾಜದ ಸ್ವಾಸ್ಥ್ಯ ಕಾಪಾಡುವ ಆಶಯದಿಂದ ಪಠ್ಯಪುಸ್ತಕ ಮರುಪರಿಷ್ಕರಣೆಗೆ ಕ್ರಮ.

-ಸ್ಥಳೀಯವಾದ ಸಾಮಾಜಿಕ, ಸಾಂಸ್ಕೃತಿಕ ಮತ್ತು ಆರ್ಥಿಕ ವಾಸ್ತವಿಕತೆಯನ್ನು ಆಧರಿಸಿ ಹೊಸ ಶಿಕ್ಷಣ ನೀತಿ ರೂಪಿಸಲು ಕ್ರಮ.

-1 ರಿಂದ 10ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ವಾರದಲ್ಲಿ ಎರಡು ದಿನ ನೀಡುವ ಪೂರಕ ಪೌಷ್ಟಿಕ ಆಹಾರ; 60 ಲಕ್ಷ ಮಕ್ಕಳಿಗೆ ಅನುಕೂಲ; 280 ಕೋಟಿ ರೂ. ಅನುದಾನ.

-ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ನಿರ್ವಹಣಾ ವೆಚ್ಚ ಗರಿಷ್ಠ 45,000 ರೂ.ಗಳ ವರೆಗೆ ಹೆಚ್ಚಳ. 153 ಕೋಟಿ ರೂ. ಅನುದಾನ.

-ಶಾಲೆ, ಕಾಲೇಜುಗಳ ಕೊಠಡಿಗಳ ನಿರ್ಮಾಣ, ದುರಸ್ತಿಗೆ 650 ಕೋಟಿ ರೂ. ಹಾಗೂ ಶೌಚಾಲಯ ಘಟಕ ನಿರ್ಮಾಣಕ್ಕೆ 200 ಕೋಟಿ ರೂ. ಅನುದಾನ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಈ ಬಾರಿಯ ಬಜೆಟ್​ನಲ್ಲಿ ಶಿಕ್ಷಣ ಇಲಾಖೆಯೇ ಮೇಲುಗೈ.. ಪಠ್ಯಪುಸ್ತಕ ಮರುಪರಿಷ್ಕರಣೆಗೂ ಬಜೆಟ್​ ಮೀಸಲು

https://newsfirstlive.com/wp-content/uploads/2023/07/School-1-1.jpg

Load More