newsfirstkannada.com

ಕ್ರಿಶ್ಚಿಯನ್ ಸಮುದಾಯಕ್ಕೆ ₹200 ಕೋಟಿ, ಮಂಗಳೂರಿನ ಹಜ್ ಭವನ ನಿರ್ಮಾಣಕ್ಕೆ 10 ಕೋಟಿ ರೂ ಮೀಸಲು

Share :

Published February 16, 2024 at 2:26pm

Update February 16, 2024 at 2:31pm

    ಅಲ್ಪಸಂಖ್ಯಾತರ ನಿಗಮದಿಂದ ಒಟ್ಟು 393 ಕೋಟಿ ರೂ. ಕಾರ್ಯಕ್ರಮ

    ಜೈನರ ಪ್ರಮುಖ ಧಾರ್ಮಿಕ ಸ್ಥಳಗಳ ಅಭಿವೃದ್ಧಿಗಾಗಿ 50 ಕೋಟಿ ಘೋಷಣೆ

    ವಕ್ಫ್ ಆಸ್ತಿಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಗಾಗಿ 100 ಕೋಟಿ ರೂ. ಮೀಸಲು

ಬೆಂಗಳೂರು: 15ನೇ ಬಾರಿಗೆ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಲ್ಪಸಂಖ್ಯಾತರ ಏಳಿಗೆಗೆ ಬಂಪರ್ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ.

ಸಿದ್ದು ಮಾಡಿದ ಘೋಷಣೆಗಳು..!

ಅಲ್ಪಸಂಖ್ಯಾತ ಸಮುದಾಯದ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ವಿವಿಧ ರೀತಿಯ ಸ್ವಯಂ ಉದ್ಯೋಗ ಚಟುವಟಿಕೆಗಳಿಗೆ ಉತ್ತೇಜನ ನೀಡಲು 10 ಕೋಟಿ ರೂ ಮೀಸಲಿಟ್ಟಿರೋದಾಗಿ ತಿಳಿಸಿದ್ದಾರೆ.

ರಾಜ್ಯದಲ್ಲಿನ ವಕ್ಫ್ ಆಸ್ತಿಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನ ನೀಡೋದಾಗಿ ಹೇಳಿದ್ದಾರೆ.

ಭಾರತೀಯ ಪುರಾತತ್ವ ಇಲಾಖೆಯ ವ್ಯಾಪ್ತಿಯಲ್ಲಿರುವ ವಕ್ಸ್ ಆಸ್ತಿಗಳನ್ನು ಆದ್ಯತೆಯ ಮೇರೆಗೆ ಅಭಿವೃದ್ಧಿಪಡಿಸುವ ಭರವಸೆಯನ್ನು ನೀಡಿದ್ದಾರೆ. ವಕ್ಫ್​ ಸಂಸ್ಥೆಯ ಧಾರ್ಮಿಕ ಗುರುಗಳಿಗೆ ಹಾಗೂ ಮುತವಲ್ಲಿಗಳಿಗೆ ಪ್ರಚಲಿತ ವಿದ್ಯಮಾನಗಳ ಬಗ್ಗೆ ಅರಿವು ಮೂಡಿಸಲು ತರಬೇತಿ ಕಾರ್ಯಗಾರಗಳನ್ನು ಏರ್ಪಡಿಸೋದಾಗಿ ಘೋಷಣೆ ಮಾಡಿದ್ದಾರೆ.

ರಾಜ್ಯದಲ್ಲಿನ ಪ್ರಮುಖ ಧಾರ್ಮಿಕ ಸ್ಥಳಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು 20 ಕೋಟಿ ರೂ. ಅನುದಾನ ಒದಗಿಸಲಾಗುವುದು ಎಂದಿದ್ದಾರೆ. ಮಂಗಳೂರಿನ ಹಜ್ ಭವನದ ನಿರ್ಮಾಣ ಕಾಮಗಾರಿಯನ್ನು 10 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳುವ ಭರವಸೆ ನೀಡಿದ್ದಾರೆ.

ಜೈನರ ಪ್ರಮುಖ ಧಾರ್ಮಿಕ ಸ್ಥಳಗಳ ಅಭಿವೃದ್ಧಿಗಾಗಿ 50 ಕೋಟಿ ರೂ. ಅನುದಾನ ಘೋಷಣೆ ಮಾಡಿದ್ದು, ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗಾಗಿ 200 ಕೋಟಿ ರೂ. ನೀಡೋದಾಗಿ ಘೋಷಣೆ ಮಾಡಿದ್ದಾರೆ. ಬೌದ್ಧರ ಪವಿತ್ರ ಗ್ರಂಥಗಳಾದ ತ್ರಿಪಿಟಕಗಳನ್ನು ಪಾಲಿ ಭಾಷೆಯಿಂದ ಕನ್ನಡಕ್ಕೆ ಅನುವಾದ ಮಾಡಲು ಸೂಕ್ತ ಅನುದಾನ ನೀಡುವ ಭರವಸೆಯನ್ನೂ ಸಿದ್ದರಾಮಯ್ಯ ನೀಡಿದ್ದಾರೆ.

ರಾಜ್ಯದಲ್ಲಿ ವಾಸಿಸುತ್ತಿರುವ ಸಿಖ್ ಲಿಗಾರ್ ಸಮುದಾಯದ ಜನರ ಆರ್ಥಿಕ ಸಬಲೀಕರಣಕ್ಕಾಗಿ ಎರಡು ಕೋಟಿ ರೂ. ಅನುದಾನದಲ್ಲಿ ಹೊಸ ಯೋಜನೆಗಳನ್ನು ತರೋದಾಗಿ ಹೇಳಿದ್ದಾರೆ. ಬೀದರ್‌ನಲ್ಲಿರುವ ಶ್ರೀ ನಾನಕ್ ಝೀರಾ ಸಾಹೇಬ್ ಗುರುದ್ವಾರದ ಅಭಿವೃದ್ಧಿಗಾಗಿ ಒಂದು ಕೋಟಿ ರೂ. ಅನ್ನದಾನ ನೀಡುವುದಾಗಿ ಸಿದ್ದರಾಮಯ್ಯ ಹೇಳಿದ್ದು, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2024-25ನೇ ವರ್ಷದಲ್ಲಿ ಒಟ್ಟಾರೆಯಾಗಿ 393 ಕೋಟಿ ರೂ.ಗಳ ಕಾರ್ಯಕ್ರಮಗಳನ್ನು ರೂಪಿಸೋದಾಗಿ ತಿಳಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಕ್ರಿಶ್ಚಿಯನ್ ಸಮುದಾಯಕ್ಕೆ ₹200 ಕೋಟಿ, ಮಂಗಳೂರಿನ ಹಜ್ ಭವನ ನಿರ್ಮಾಣಕ್ಕೆ 10 ಕೋಟಿ ರೂ ಮೀಸಲು

https://newsfirstlive.com/wp-content/uploads/2024/02/HAJ-BHAVAN2.jpg

Load More