newsfirstkannada.com

ಅನ್ನದಾತರಿಗಾಗಿ ‘ಕರ್ನಾಟಕ ರೈತ ಸಮೃದ್ಧಿ ಯೋಜನೆ’; ಏನಿದರ ವಿಶೇಷತೆ..?

Share :

Published February 16, 2024 at 12:56pm

Update February 16, 2024 at 1:07pm

    15ನೇ ಬಾರಿಗೆ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ

    ಈ ಬಾರಿಯ ಬಜೆಟ್ ಗಾತ್ರ 3, 71, 383 ಕೋಟಿ ರೂಪಾಯಿ

    ಸ್ಪೋರ್ಟ್ಸ್ ಸಿಟಿ, ನಮ್ಮ ಮಿಲೆಟ್‌, ಆಹಾರ ಪಾರ್ಕ್‌ ಘೋಷಣೆ

ಬೆಂಗಳೂರು: ಅನ್ನದಾತರಿಗಾಗಿ ‘ಕರ್ನಾಟಕ ರೈತ ಸಮೃದ್ಧಿ ಯೋಜನೆ’ ಜಾರಿಗೊಳಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್​ನಲ್ಲಿ ಘೋಷಣೆ ಮಾಡಿದ್ದಾರೆ.

ಕೃಷಿ ಕ್ಷೇತ್ರವನ್ನು ಸುಸ್ಥಿರ ಹಾಗೂ ಲಾಭದಾಯಕವಾಗಿಸುವುದು ನಮ್ಮ ಸರ್ಕಾರದ ಆದ್ಯತೆ ಆಗಿದೆ. ಈ ಉದ್ದೇಶದಿಂದ ವಿವಿಧ ರೈತಪರ ಯೋಜನೆಗಳನ್ನು ಒಗ್ಗೂಡಿಸಿ, ಸಮಗ್ರ ಕೃಷಿಯನ್ನು ಉತ್ತೇಜಿಸುತ್ತಿದ್ದೇವೆ. ಈ ನಿಟ್ಟಿನಲ್ಲಿ ಕರ್ನಾಟಕ ರೈತ ಸಮೃದ್ಧಿ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಈ ಯೋಜನೆಯ ವಿಶೇಷತೆ..!

  • ಕೃಷಿ ವಿಷಯಗಳಲ್ಲಿ ಮಾರ್ಗದರ್ಶನ ಹಾಗೂ ಬೆಂಬಲ ನೀಡಲು ಕ್ರಮ
  • ಕೃಷಿ, ಪಶುಸಂಗೋಪನೆ, ತೋಟಗಾರಿಕೆ, ಹೈನುಗಾರಿಕೆಗಳನ್ನು ಒಳಗೊಂಡಂತೆ ಸಮಗ್ರ ಕೃಷಿ ಕೈಗೊಳ್ಳುವ ಮೂಲಕ ಆದಾಯದಲ್ಲಿ ಸುಸ್ಥಿರತೆಯನ್ನು ಕಂಡುಕೊಳ್ಳಲು ಬೆಂಬಲ ನೀಡಲಾಗುತ್ತದೆ.
  • ಮಣ್ಣಿನ ಗುಣ ಹಾಗೂ ಮಾರುಕಟ್ಟೆ ಬೇಡಿಕೆಯನ್ನು ಆಧರಿಸಿ ಯಾವ ಬೆಳೆ ಬೆಳೆಯಬೇಕೆಂಬ ಕುರಿತು ರೈತರಿಗೆ ಮಾರ್ಗದರ್ಶನ ನೀಡಲಾಗುತ್ತದೆ.
  • ಮಣ್ಣು ಪರೀಕ್ಷೆ ಮತ್ತು ಗುಣಮಟ್ಟ ಕುರಿತು ಮಾಹಿತಿ ನೀಡುವುದು.
  • ಹೊಸ ಕೃಷಿ ಪದ್ಧತಿ ಹಾಗೂ ತಂತ್ರಜ್ಞಾನಗಳ ಕುರಿತು ರೈತರಿಗೆ ಅರಿವು ಮೂಡಿಸಿ, ಬೆಂಬಲ ನೀಡುವುದು
  • ರೈತರಿಗೆ ಸಂಗ್ರಹಣೆ ಮತ್ತು ಮೌಲ್ಯವರ್ಧನೆಯ ಕುರಿತು ಅರಿವು ಮೂಡಿಸುವುದು.
  • ರೈತರು ಬೆಳೆದ ಬೆಳೆಗೆ ಉತ್ತಮ ಬೆಲೆ ಪಡೆಯಲು ಮಾರುಕಟ್ಟೆ ಸಂಪರ್ಕ ಕಲ್ಪಿಸುವುದು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಅನ್ನದಾತರಿಗಾಗಿ ‘ಕರ್ನಾಟಕ ರೈತ ಸಮೃದ್ಧಿ ಯೋಜನೆ’; ಏನಿದರ ವಿಶೇಷತೆ..?

https://newsfirstlive.com/wp-content/uploads/2024/02/FARMER-5.jpg

Load More