/newsfirstlive-kannada/media/post_attachments/wp-content/uploads/2024/11/ELECTION.jpg)
ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮತದಾನ ಆರಂಭವಾಗಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ, ಬಳ್ಳಾರಿ ಜಿಲ್ಲೆಯ ಸಂಡೂರು, ಹಾವೇರಿ ಜಿಲ್ಲೆಯ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಗಳಿಗೆ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ.
ಸಂಜೆ 6 ಗಂಟೆವರೆಗೆ ಮತದಾನ ಕಾರ್ಯ ನಡೆಯಲಿದೆ. ಮತದಾನ ಹಿನ್ನೆಲೆ ಮತಗಟ್ಟೆ ಕೇಂದ್ರಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಬೆಳ್ಳಂಬೆಳಗ್ಗೆಯೇ ಮತದಾರರು ಸರತಿ ಸಾಲಿನಲ್ಲಿ ಬಂದು ತಮ್ಮ ಹಕ್ಕನ್ನು ಚಲಾಯಿಸುತ್ತಿದ್ದಾರೆ.
ಮಿನಿ ಸಮರದ ಅಖಾಡದಲ್ಲಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಸಿ.ಪಿ.ಯೋಗೇಶ್ವರ್ ಮತ್ತು ನಿಖಿಲ್ ಕುಮಾರಸ್ವಾಮಿ ಇದ್ದಾರೆ. ಸಿ.ಪಿ. ಯೋಗೇಶ್ವರ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣದಲ್ಲಿದ್ದರೆ ನಿಖಿಲ್ ಕುಮಾರಸ್ವಾಮಿ ಜೆಡಿಎಸ್ ಅಭ್ಯರ್ಥಿಯಾಗಿದ್ದಾರೆ. ಶಿಗ್ಗಾಂವಿಯಲ್ಲಿ ಕಾಂಗ್ರೆಸ್​ನ ಯಾಸೀರ್ ಪಠಾಣ್ ಮತ್ತು ಬಿಜೆಪಿಯ ಭರತ್ ಬೊಮ್ಮಾಯಿ ನಡುವೆ ನೇರ ಪೈಪೋಟಿ ನಡೆಯುತ್ತಿದೆ. ಸಂಡೂರಿನಲ್ಲಿ ಅನ್ನಪೂರ್ಣ ತುಕಾರಾಂ ಮತ್ತು ಬಂಗಾರು ಹನುಮಂತು ಅಖಾಡದಲ್ಲಿದ್ದಾರೆ.
ಇದನ್ನೂ ಓದಿ:ರಾಜ್ಯದ ಮೂರು ಕ್ಷೇತ್ರಗಳಿಗೆ ಉಪಚುನಾವಣೆ; ಇಂದು ಮತದಾನ; ಕಣದಲ್ಲಿ ಇರೋದ್ಯಾರು?
ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಸಮರದಲ್ಲಿ ಒಟ್ಟು 45 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಇಂದು ಮತದಾರರು ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲಿದ್ದು, ನವೆಂಬರ್​ 23ರಂದು ಉಪ ಚುನಾವಣೆ ಫಲಿತಾಂಶ ಪ್ರಕಟವಾಗಲಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ