Advertisment

ಬೈ-ಎಲೆಕ್ಷನ್ ಅಭ್ಯರ್ಥಿಗಳ ಆಯ್ಕೆಗೆ ಜ್ಯೋತಿಷಿಗಳ ಮೊರೆ ಹೋದ ಡಿಕೆ ಶಿವಕುಮಾರ್..?

author-image
Ganesh
Updated On
ಬೈ-ಎಲೆಕ್ಷನ್ ಅಭ್ಯರ್ಥಿಗಳ ಆಯ್ಕೆಗೆ ಜ್ಯೋತಿಷಿಗಳ ಮೊರೆ ಹೋದ ಡಿಕೆ ಶಿವಕುಮಾರ್..?
Advertisment
  • ಉಪ ಚುನಾವಣೆ ದಿನಾಂಕ ಘೋಷಣೆ.. ಡಿಕೆಶಿ ಅಲರ್ಟ್​
  • ಮೂರೂ ಕ್ಷೇತ್ರಗಳನ್ನು ಗೆಲ್ಲಲು ಪಣ ತೊಟ್ಟ ಡಿಸಿಎಂ ಡಿಕೆಶಿ
  • ಸಂಡೂರು ಕ್ಷೇತ್ರದ ಸಂಭವನೀಯ ಅಭ್ಯರ್ಥಿಗಳ ಜಾತಕ ಡಿಕೆಶಿ ಕೈಗೆ?

ಬೆಂಗಳೂರು: ರಾಜ್ಯದ ಉಪ ಸಮರಕ್ಕೆ ಮುಹೂರ್ತ ಫಿಕ್ಸ್​ ಆಗಿದೆ. ಸಂಡೂರು, ಶಿಗ್ಗಾಂವಿ, ಚನ್ನಪಟ್ಟಣ ವಿಧಾನಸಭೆ ಕ್ಷೇತ್ರಗಳಿಗೆ ನವೆಂಬರ್ 13ರಂದು ಉಪಚುನಾವಣೆ ನಡೆಯಲಿದೆ. ಹೀಗಾಗಿ ರಾಜ್ಯ ರಾಜಕೀಯದಲ್ಲಿ ಚಟುವಟಿಕೆಗಳು ಗರಿಗೆದರಿವೆ.

Advertisment

ಅಭ್ಯರ್ಥಿಗಳ ಆಯ್ಕೆ ಸಂಬಂಧ ಕಾಂಗ್ರೆಸ್​ ಹಾಗೂ ಬಿಜೆಪಿ-ಜೆಡಿಎಸ್​ ಮೈತ್ರಿ ಪಾಳಯದಲ್ಲಿ ಭಾರೀ ಚರ್ಚೆ ನಡೆಯುತ್ತಿದೆ. ಗೆಲ್ಲುವ ಕುದುರೆ ಯಾವುದು? ಯಾರಿಗೆ ಟಿಕೆಟ್ ಕೊಟ್ಟರೆ ಗೆಲುವು ಸಿಗಲಿದೆ ಎಂಬಿತ್ಯಾದಿ ರಾಜಕೀಯ ತಂತ್ರಗಳು ತೆರೆಮರೆಯಲ್ಲಿ ನಡೆಯುತ್ತಿವೆ. ಅಂತೆಯೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಅಭ್ಯರ್ಥಿಗಳ ಆಯ್ಕೆಗೆ ಜ್ಯೋತಿಷಿಗಳ ಮೊರೆ ಹೋಗಿದ್ದಾರೆ ಎನ್ನಲಾಗಿದೆ.

ಸಂಡೂರು, ಶಿಗ್ಗಾಂವಿ, ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್​ ಗೆಲ್ಲಿಸಿಕೊಂಡು ಬರಲು ಜ್ಯೋತಿಷಿಗಳ ಮೊರೆ ಹೋಗಿದ್ದಾರಂತೆ. ಈಗಾಗಲೇ ಸಂಡೂರು ಕ್ಷೇತ್ರದ ಸಂಭವನೀಯ ಅಭ್ಯರ್ಥಿಗಳ ಜಾತಕವನ್ನು ಡಿಕೆಶಿ ತೋರಿಸಿದ್ದಾರೆ ಎಂದು ಹೇಳಲಾಗಿದೆ. ಸಂಸದ ತುಕಾರಾಂ ಪತ್ನಿ ಅನ್ನಪೂರ್ಣ ಹಾಗೂ ಪುತ್ರಿ ಸೌಪರ್ಣಿಕಾರ ಜಾತಕ ತರಿಸಿದ್ದಾರೆ ಎಂದು ತಿಳಿದುಬಂದಿದೆ. ಈ ವಿಚಾರ ಇದೀಗ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಇದನ್ನೂ ಓದಿ: BREAKING: ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಉಪಚುನಾವಣೆಗೆ ಮುಹೂರ್ತ ಫಿಕ್ಸ್.. ಮೆಗಾ ರಿಸಲ್ಟ್ ಯಾವಾಗ?

Advertisment

publive-image

ಫಲಿತಾಂಶ ಯಾವಾಗ?

ಅಕ್ಟೋಬರ್ 25ಕ್ಕೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಅಕ್ಟೋಬರ್ 28 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ನವೆಂಬರ್ 13 ರಂದು ಮೂರು ಅಸೆಂಬ್ಲಿ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ನವೆಂಬರ್ 23ರಂದು ಈ ಮೂರು ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಘೋಷಣೆ ಆಗಲಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment