ಕೃಷಿ ವಿವಿ 8ನೇ ಘಟಿಕೋತ್ಸವದಲ್ಲಿ ಮಾಜಿ ಸಿಎಂಗೆ ಗೌರವ ಡಾಕ್ಟರೇಟ್
ಮಣ್ಣಿನ ಒಡನಾಟದಲ್ಲಿ ಗೌರವ ಡಾಕ್ಟರೇಟ್ ಸಿಕ್ಕಿದ್ದು ಸಂತಸ- BSY
101 ವಿದ್ಯಾರ್ಥಿಗಳಿಗೆ ಸ್ನಾತಕೋತ್ತರ ಪದವಿ, 23 ಜನಕ್ಕೆ PHD ಪದವಿ ಪ್ರದಾನ
ಶಿವಮೊಗ್ಗ: ಕೃಷಿ ಮತ್ತು ತೋಟಗಾರಿಕೆ ಕಲಿಕೆಗೆ ಅವಕಾಶವಿರುವ ರಾಜ್ಯದ ಏಕೈಕ ವಿಶ್ವವಿದ್ಯಾಲಯ ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ಯೂನಿವರ್ಸಿಟಿ. ಈ ವಿಶ್ವವಿದ್ಯಾಲಯದ 8ನೇ ಘಟಿಕೋತ್ಸವ ಇಂದು ಜರುಗಿತು. ಘಟಿಕೋತ್ಸವದಲ್ಲಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯ್ತು. ಶಿವಮೊಗ್ಗ ಜಿಲ್ಲೆಯಲ್ಲಿ ನೀರಾವರಿ ಯೋಜನೆ ಜಾರಿಗೊಳಿಸಿದ್ದು ಹಾಗೂ ವಿವಿಯ ಅಭಿವೃದ್ಧಿಗೆ ನೀಡಿದ ಕೊಡುಗೆಯನ್ನು ಸ್ಮರಿಸುವ ಸಲುವಾಗಿ ಇಂದು ಗೌರವ ಡಾಕ್ಟರೇಟ್ ನೀಡಿ ಸನ್ಮಾನಿಸಲಾಯ್ತು.
ಇನ್ನು ಈ ಕುರಿತು ಮಾತಾಡಿದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪನವರು, ಇದು ನನ್ನ ಬದುಕಿನ ಅತ್ಯಂತ ಸ್ಮರಣೀಯ ಸಂಗತಿ. ರೈತ ಕುಟುಂಬದ ಮಗನಾಗಿ ಈ ಮಣ್ಣಿನ ಒಡನಾಟದಲ್ಲಿ ಗೌರವ ಡಾಕ್ಟರೇಟ್ ಸಿಕ್ಕಿದ್ದು ಸಂತಸ ತಂದಿದೆ ಎಂದರು.
ಮಾಜಿ ಸಿಎಂ ಅವರಿಗೆ ಗೌರವ ಡಾಕ್ಟರೇಟ್ ಸ್ವೀಕರಿಸುವುದನ್ನು ನೋಡಲು ಬಂದಿದ್ದ ಯಡಿಯೂರಪ್ಪರ ಅಭಿಮಾನಿಗಳು ಘಟಿಕೋತ್ಸವ ಸಭಾಂಗಣದ ಹೊರಗೆ ಘೋಷಣೆ ಕೂಗಿದ್ದರಿಂದ ಕೆಲಕಾಲ ಗೊಂದಲ ನಿರ್ಮಾಣವಾಯ್ತು. ಕೂಡಲೇ ಮಧ್ಯ ಪ್ರವೇಶಿಸಿದ ಸಂಸದ ಬಿ.ವೈ.ರಾಘವೇಂದ್ರ ಎಲ್ಲವನ್ನೂ ತಿಳಿಗೊಳಿಸಿ, ಬೆಂಬಲಿಗರನ್ನು ಒಳಗೆ ಬಿಡಿಸಿ, ಕಾರ್ಯಕ್ರಮ ನೋಡಲು ಅನುವು ಮಾಡಿಕೊಟ್ಟರು. ಒಟ್ಟಾರೆ, ಕೃಷಿ ವಿವಿಯ 8ನೇ ಘಟಿಕೋತ್ಸವದಲ್ಲಿ ಸಂಭ್ರಮದ ಕ್ಷಣಗಳಿಗೆ ಸಾಕ್ಷಿಯಾಗಿದ್ದು ನಿಜಕ್ಕೂ ವಿಶೇಷ.
ಶಿವಮೊಗ್ಗದ ಸಾಗರ ತಾಲೂಕಿನ ಇರುವಕ್ಕಿ ಬಳಿಯ ವಿವಿ ಮುಖ್ಯ ಕ್ಯಾಂಪಸ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿಧ ಗಣ್ಯರು ಪಾಲ್ಗೊಂಡಿದ್ದರು. ವಿವಿಯ ಕುಲಾಧಿಪತಿಯಾದ ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಲ್ಲೋಟ್ ಅವರು ಪದವಿ, ಸ್ನಾತಕೋತ್ತರ ಹಾಗೂ ಸಂಶೋಧನಾ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದ್ದಾರೆ. ಜೊತೆಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರಿಗೆ ವಿವಿಯ ಗೌರವ ಡಾಕ್ಟರೇಟ್ ನೀಡಿ ಸನ್ಮಾನಿಸಿದ್ದಾರೆ. ಈ ಸಂದರ್ಭದಲ್ಲಿ 409 ವಿದ್ಯಾರ್ಥಿಗಳಿಗೆ ಕೃಷಿ, ತೋಟಗಾರಿಕೆ ಹಾಗೂ ಅರಣ್ಯ ವಿಭಾಗದಲ್ಲಿ ಪದವಿ, 101 ವಿದ್ಯಾರ್ಥಿಗಳಿಗೆ ಸ್ನಾತಕೋತ್ತರ ಪದವಿ, 23 ವಿದ್ಯಾರ್ಥಿಗಳಿಗೆ ಪಿಹೆಚ್ಡಿ ಪದವಿ ಪ್ರದಾನ ಮಾಡಲಾಯ್ತು. ಕೃಷಿ ಸಚಿವ ಚೆಲುವರಾಯಸ್ವಾಮಿ, ವಿವಿ ಕುಲಪತಿ ಡಾ ಆರ್.ಸಿ.ಜಗದೀಶ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದ ಕಾರ್ಯಕ್ರಮದಲ್ಲಿ ರಾಜ್ಯಪಾಲರು ವಿದ್ಯಾರ್ಥಿಗಳಿಗೆ ಸಂದೇಶ ನೀಡಿದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ