newsfirstkannada.com

BREAKING: ಉಪ ಮುಖ್ಯಮಂತ್ರಿಯಾಗಿ ಅಜ್ಜಯ್ಯನ ಹೆಸರಲ್ಲಿ ಡಿಕೆ ಶಿವಕುಮಾರ್ ಪದಗ್ರಹಣ

Share :

20-05-2023

    ಡಿಕೆ ಶಿವಕುಮಾರ್ ಆದ ನಾನು..

    ಗಂಗಾಧರ ಅಜ್ಜನ ಹೆಸರಲ್ಲಿ ಪ್ರಮಾಣ ವಚನ

    ಮೊದಲ ಬಾರಿಗೆ ಡಿಸಿಎಂ ಪಟ್ಟಕ್ಕೇರಿದ ಡಿಕೆ

ಬೆಂಗಳೂರು: ರಾಜ್ಯದಲ್ಲಿ ನೂತನ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಸಿಎಂ ಪದಗ್ರಹಣದ ಬಳಿಕ ಡಿಕೆ ಶಿವಕುಮಾರ್ ಮೊದಲ ಬಾರಿಗೆ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ನೊಣವಿನಕೆರೆ ಗಂಗಾಧರ ಅಜ್ಜನ ಹೆಸರಲ್ಲಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ ಮಾಡಿದರು.

ಕಂಠೀರವ ಕ್ರೀಡಾಂಗಣದಲ್ಲಿ ಅದ್ಧೂರಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯುತ್ತಿದೆ. ಕಾಂಗ್ರೆಸ್ ಸರ್ಕಾರದ ನವೋದಯಕ್ಕೆ ದೇಶದ ವಿವಿಧ ಗಣ್ಯರು, ಪಕ್ಷದ ಅತಿರಥ ನಾಯಕರು ಸಾಕ್ಷಿಯಾಗಿದ್ದಾರೆ. ಲಕ್ಷಾಂತರ ಕಾಂಗ್ರೆಸ್ ಕಾರ್ಯಕರ್ತರ ಸಮ್ಮುಖದಲ್ಲಿ ಡಿಕೆ ಶಿವಕುಮಾರ್ ಡಿಸಿಎಂ ಆಗಿ ಪದಗ್ರಹಣ ಮಾಡಿದ್ದಾರೆ.

ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ತಮಿಳುನಾಡು ಸಿಎಂ ಸ್ಟಾಲಿನ್, ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್, ಮಧ್ಯಪ್ರದೇಶ ಮಾಜಿ ಸಿಎಂ ಕಮಲ್‌ನಾಥ್, ಕಾಶ್ಮೀರದ ಮಾಜಿ ಸಿಎಂ ಫಾರೂಖ್ ಅಬ್ದುಲ್ಲಾ ಸೇರಿದಂತೆ ಅನೇಕ ರಾಷ್ಟ್ರೀಯ ನಾಯಕರು ಸಾಕ್ಷಿಯಾಗಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

BREAKING: ಉಪ ಮುಖ್ಯಮಂತ್ರಿಯಾಗಿ ಅಜ್ಜಯ್ಯನ ಹೆಸರಲ್ಲಿ ಡಿಕೆ ಶಿವಕುಮಾರ್ ಪದಗ್ರಹಣ

https://newsfirstlive.com/wp-content/uploads/2023/05/Dk-Shivakumar-22.jpg

Load More