newsfirstkannada.com

ಯದುವೀರ್ ರೇಡಿಯೋ ಕಾರ್ಯಕ್ರಮದ ವಿರುದ್ಧ ಕಾಂಗ್ರೆಸ್ ದೂರು; ಏನಿದು ಆರೋಪ..?

Share :

Published March 26, 2024 at 2:08pm

  ಕೊಡಗು-ಮೈಸೂರು ಲೋಕಸಭೆ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್

  ಕೆಪಿಸಿಸಿ ವಕ್ತಾರ ಹೆಚ್.ಎ.ವೆಂಕಟೇಶ್ ಅವರು ದೂರು ನೀಡಿದ್ದಾರೆ

  ದೂರಿನಲ್ಲಿ ಮಾಡಿರುವ ಆರೋಪ ಏನೇನು? ಕ್ರಮ ಆಗುತ್ತಾ?

ಮೈಸೂರು-ಕೊಡಗು ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್​ ಅವರ ರೇಡಿಯೋ ಕಾರ್ಯಕ್ರಮ ಪ್ರಸಾರ ನಿಲ್ಲಿಸುವಂತೆ ಆಗ್ರಹಿಸಿ ಕಾಂಗ್ರೆಸ್ ಕರ್ನಾಟಕ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಕೆಪಿಸಿಸಿ ವಕ್ತಾರ ಹೆಚ್.ಎ.ವೆಂಕಟೇಶ್ ಅವರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. 104.8 ರೇಡಿಯೋ ಮಿರ್ಚ್ ಚಾನೆಲ್​ನಲ್ಲಿ ಯದುವೀರ್ ಕಾರ್ಯಕ್ರಮ ಪ್ರಸಾರ ಆಗುತ್ತದೆ. ‘ರಾಜರ ಬಾಯಿಂದ ರಾಜರ ಕಥೆಗಳು’ ಹೆಸರಿನಲ್ಲಿ ಪ್ರಸಾರವಾಗುತ್ತಿರುವ ಕಾರ್ಯಕ್ರಮ ಇದಾಗಿದೆ.

ಯದುವೀರ್ ಮೈಸೂರು ಕೊಡಗು ಬಿಜೆಪಿ ಅಭ್ಯರ್ಥಿ ಹಿನ್ನೆಲೆ ನಿರ್ಬಂಧ ವಿಧಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ರೇಡಿಯೋದಲ್ಲಿ ಮಾತನಾಡುವ ಬಗ್ಗೆ ಕ್ಷಣ ಕ್ಷಣಕ್ಕೂ ಪ್ರೊಮೋ ಪ್ರಸಾರ ಆಗಲಿದೆ. ಒಬ್ಬ ವ್ಯಕ್ತಿಯಾಗಿ ರಾಜರ ಬಗ್ಗೆ ಮಾತನಾಡುವುದರಲ್ಲಿ ತಪ್ಪಿಲ್ಲ. ಆದರೆ ದಿನಾಂಕ 26.04.2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಇದು ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆಗುತ್ತದೆ. ಯದುವೀರ್ ಅವರ ಮಾತುಗಳು ಮತದಾರರ ಮೇಲೆ ಪರಿಣಾಮ ಬೀರುತ್ತದೆ. ಈ ಕೂಡಲೇ ರೇಡಿಯೋದಲ್ಲಿ ಕಾರ್ಯಕ್ರಮ ಪ್ರಸಾರವಾಗದಂತೆ ನಿರ್ಬಂಧನೆ ವಿಧಿಸಬೇಕು ಎಂದು ಒತ್ತಾಯಿಸಲಾಗಿದೆ.

ಇದನ್ನೂ ಓದಿ: ಚುನಾವಣಾ ಅಖಾಡಕ್ಕೆ ಎಂಟ್ರಿಕೊಟ್ಟ ವೀರಪ್ಪನ್ ಪುತ್ರಿ; ಕಳ್ಳ ಅಪ್ಪನ ಇವರ ಒಡನಾಟ ಹೇಗಿತ್ತು..?

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಯದುವೀರ್ ರೇಡಿಯೋ ಕಾರ್ಯಕ್ರಮದ ವಿರುದ್ಧ ಕಾಂಗ್ರೆಸ್ ದೂರು; ಏನಿದು ಆರೋಪ..?

https://newsfirstlive.com/wp-content/uploads/2024/03/YADHUVEER.jpg

Load More