newsfirstkannada.com

5ನೇ ಗ್ಯಾರಂಟಿ ‘ಯುವನಿಧಿ’ ಯೋಜನೆಗೆ ಅದ್ಧೂರಿ ಚಾಲನೆ; ಫಲಾನುಭವಿಗಳ ಖಾತೆಗೆ ಇಂದೇ ಹಣ ಜಮಾ

Share :

Published January 12, 2024 at 2:06pm

Update January 12, 2024 at 2:36pm

  ಕಾಂಗ್ರೆಸ್ 5ನೇ ಗ್ಯಾರಂಟಿ ‘ಯುವ ನಿಧಿ’ ಯೋಜನೆಗೆ ಚಾಲನೆ

  ಶಿವಮೊಗ್ಗ ನಗರದ ಫ್ರೀಡಂ ಪಾರ್ಕ್‌ನಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ

  ವಿದ್ಯಾವಂತ ನಿರುದ್ಯೋಗಿ ಫಲಾನುಭವಿಗಳಿಗೆ ಮೊದಲ ಕಂತಿನ ಹಣ

ಶಿವಮೊಗ್ಗ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 5ನೇ ಗ್ಯಾರಂಟಿ ‘ಯುವ ನಿಧಿ’ ಯೋಜನೆಗೆ ಚಾಲನೆ ಸಿಕ್ಕಿದೆ. ಸ್ವಾಮಿ ವಿವೇಕಾನಂದ ಜನ್ಮ ದಿನವಾದ ಇಂದು ಶಿವಮೊಗ್ಗ ನಗರದ ಹೃದಯ ಭಾಗದ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಕಾರ್ಯಕ್ರಮ ಆಯೋಜಿಸಲಾಗಿದೆ. ಕಾಂಗ್ರೆಸ್ ಸರ್ಕಾರದ 5ನೇ ಗ್ಯಾರಂಟಿ ಯುವನಿಧಿ ಯೋಜನೆಗೆ ನಗದು ವರ್ಗಾವಣೆ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಚಾಲನೆ ನೀಡಿದ್ದಾರೆ.

ಫ್ರೀಡಂ ಪಾರ್ಕ್‌ಗೆ ಆಗಮಿಸುತ್ತಿದ್ದಂತೆ ಸಿಎಂ ಸಿದ್ದರಾಮಯ್ಯರನ್ನ ವಿವಿಧ ಕಲಾ ತಂಡಗಳು ಅದ್ಧೂರಿಯಾಗಿ ಬರಮಾಡಿಕೊಂಡರು. ಸಹಸ್ರಾರು ಸಂಖ್ಯೆಯಲ್ಲಿ ನೆರೆದಿರುವ ಸಿದ್ದು ಅಭಿಮಾನಿಗಳು ಮತ್ತು ಕಾಂಗ್ರೆಸ್‌ ಕಾರ್ಯಕರ್ತರು, ಸಿದ್ದು ಪರ ಘೋಷಣೆ ಕೂಗಿದ್ದಾರೆ.

ಡಿಪ್ಲೋಮಾ ಮತ್ತು ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ಉದ್ಯೋಗ ಭತ್ಯೆ ನೀಡುವ ಸರ್ಕಾರದ ಮಹತ್ವಾಕಾಂಕ್ಷಿಯ ಯೋಜನೆ ಇದಾಗಿದೆ. ಬೃಹತ್ ವೇದಿಕೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಶಿವಮೊಗ್ಗ ಸಂಸದ ಬಿ.ವೈ ರಾಘವೇಂದ್ರ, ಸಚಿವರುಗಳಾದ ಮಧುಬಂಗಾರಪ್ಪ, ಡಾ.ಶರಣ ಪ್ರಕಾಶ್ ಪಾಟೀಲ್, ಡಾ. ಎಂ.ಸಿ ಸುಧಾಕರ್ ಸೇರಿದಂತೆ ಹಲವು ಸಚಿವರು, ಗಣ್ಯರು, ಶಾಸಕರು ಅಧಿಕಾರಿಗಳು ಹಾಜರಿದ್ದರು.

ಈ ಕಾರ್ಯಕ್ರಮಕ್ಕೆ ಶಿವಮೊಗ್ಗ ಜಿಲ್ಲೆಯ ಯುವನಿಧಿ ಯೋಜನೆಯ ವಿದ್ಯಾವಂತ ನಿರುದ್ಯೋಗಿ ಫಲಾನುಭವಿಗಳಲ್ಲದೇ, ಅಂತಿಮ ವರ್ಷಗಳ ಸೆಮಿಸ್ಟರ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಡಿಪ್ಲೋಮಾ, ಪದವಿ ಮತ್ತು ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗಿಯಾಗಿದ್ದರು. ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಉಡುಪಿ ಹಾಗೂ ಹಾವೇರಿ ಜಿಲ್ಲೆಗಳಿಂದ ಸುಮಾರು 1 ಲಕ್ಷಕ್ಕೂ ಹೆಚ್ಚಿನ ಫಲಾನುಭವಿಗಳು ಹಾಗೂ ಅಷ್ಟೇ ಸಂಖ್ಯೆಯ ಜನರು ಪಾಲ್ಗೊಂಡಿದ್ದರು. ಯುವನಿಧಿ ಯೋಜನೆಗೆ ಚಾಲನೆ ನೀಡಿದ ಬಳಿಕ ಮೊದಲ ಕಂತಿನ ಹಣವನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ವರ್ಗಾವಣೆ ಮಾಡಲಾಗುತ್ತಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

5ನೇ ಗ್ಯಾರಂಟಿ ‘ಯುವನಿಧಿ’ ಯೋಜನೆಗೆ ಅದ್ಧೂರಿ ಚಾಲನೆ; ಫಲಾನುಭವಿಗಳ ಖಾತೆಗೆ ಇಂದೇ ಹಣ ಜಮಾ

https://newsfirstlive.com/wp-content/uploads/2024/01/Yuva-nidhi-Shivamogga.jpg

Load More