ತಮಿಳುನಾಡಿನ ಬೇಡಿಕೆಗೆ ಮನ್ನಣೆ ನೀಡದ ಕರ್ನಾಟಕ
ಸಭೆಯಿಂದ ಹೊರ ನಡೆದ ತಮಿಳುನಾಡು ಅಧಿಕಾರಿಗಳು
ಕಾವೇರಿ ನೀರು ಬಿಡಲ್ಲ ಎಂದು ಕರ್ನಾಟಕ ಖಡಕ್ ಮಾತು
ಬೆಂಗಳೂರು: ತಮಿಳುನಾಡಿಗೆ 37.9 ಟಿಎಂಸಿ ಕಾವೇರಿ ನೀರು ಬಿಡುಗಡೆ ಮಾಡಬೇಕೆಂದು ಬೇಡಿಕೆ ಇಡಲಾಗಿದೆ. ಇಂದು ದೆಹಲಿಯಲ್ಲಿ ನಡೆದ ಕಾವೇರಿ ನೀರು ನಿರ್ವಹಣಾ ಮಂಡಳಿ ಸಭೆಯಲ್ಲಿ ತಮಿಳುನಾಡು ಜಲಸಂಪನ್ಮೂಲ ಇಲಾಖೆಯ ಕಾರ್ಯದರ್ಶಿ ಸಂದೀಪ್ ಸಕ್ಸೇನಾ ಇಟ್ಟ ಬೇಡಿಕೆಯನ್ನು ಕರ್ನಾಟಕದ ಅಧಿಕಾರಿಗಳು ತಿರಸ್ಕರಿಸಿದ್ದಾರೆ. ಈ ಬಾರಿ ಉತ್ತಮ ಮಳೆಯಾಗಿಲ್ಲ. ಹೀಗಾಗಿ ತಮಿಳುನಾಡು ಬೇಡಿಕೆಯಂತೆ ನೀರು ಬಿಡಲು ಆಗುವುದಿಲ್ಲ ಎಂದು ಕರ್ನಾಟಕ ಅಧಿಕಾರಿಗಳು ಖಡಕ್ ಆಗಿ ತಿಳಿಸಿದ್ದಾರೆ. ಸಭೆ ಮುಗಿದ ಬಳಿಕ ತಮಿಳುನಾಡು ಅಧಿಕಾರಿಗಳು ಅಲ್ಲಿಂದ ಕಾಲ್ಕಿತ್ತಿದ್ದಾರೆ.
ಇತ್ತೀಚಿಗಷ್ಟೇ ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆಗೆ ಕರ್ನಾಟಕಕ್ಕೆ ಸೂಚನೆ ನೀಡಿ ಎಂದು ಸಿಎಂ ಎಂಕೆ ಸ್ಟಾಲಿನ್ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದರು. ಇಲ್ಲಿನ ರೈತರು ನೀರಿಗಾಗಿ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಹೀಗಾಗಿ ನಮ್ಮ ಪಾಲಿನ ಕಾವೇರಿ ನೀರು ಬಿಡುಗಡೆಗೆ ಕರ್ನಾಟಕಕ್ಕೆ ಸೂಚಿಸಿ ಎಂದು ಸ್ಟಾಲಿನ್ ಕ್ಯಾತೆ ತೆಗೆದಿದ್ದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ