Advertisment

Breaking: ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಇನ್ನಿಲ್ಲ

author-image
Ganesh
Updated On
ಮಾಜಿ ಸಿಎಂ, ಹಿರಿಯ ನಾಯಕ SM​​ ಕೃಷ್ಣ ಆರೋಗ್ಯದಲ್ಲಿ ದಿಢೀರ್​ ಏರುಪೇರು; ಆಸ್ಪತ್ರೆಗೆ ದಾಖಲು
Advertisment
  • ತಡ ರಾತ್ರಿ ನಿಧನರಾಗಿರುವ ಎಸ್.ಎಂ ಕೃಷ್ಣ
  • ಅನಾರೋಗ್ಯದಿಂದ ಬಳಲುತ್ತಿದ್ದ ಎಸ್.ಎಂ ಕೃಷ್ಣ
  • ಇತ್ತೀಚೆಗೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಎಸ್ಎಂಕೆ

ರಾಜ್ಯದ ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ (92) ಇಂದು ವಿಧಿವಶರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಎಸ್.ಎಂ.ಕೃಷ್ಣ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

Advertisment

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಎಸ್. ಎಂ. ಕೃಷ್ಣ ಅವರನ್ನು ಮೊದಲು ವೈದೇಹಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿತ್ತು. ಬಳಿಕ ಶ್ವಾಸಕೋಶದ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಿದ್ದರು. ಡಾ. ಸತ್ಯನಾರಾಯಣ ಮೈಸೂರು, ಡಾ. ಸುನೀಲ್ ಕಾರಂತ್ ನೇತೃತ್ವದ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿತ್ತು.

ಎಸ್​ಎಂ ಕೃಷ್ಣ ಅವರು ಪೂರ್ತಿ ಹೆಸರು ಸೋಮನಹಳ್ಳಿ ಮಲ್ಲಯ್ಯ ಕೃಷ್ಣ. ಮಂಡ್ಯದ ಸೋಮನಹಳ್ಳಿಯಲ್ಲಿ 1932ರಲ್ಲಿ ಜನಿಸಿದ್ದ ಅವರು, ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಶಿಕ್ಷಣ ಪಡೆದುಕೊಂಡಿದ್ದರು. ಎಸ್‌ಎಂ ಕೃಷ್ಣ ಅವರು 1999 ರಿಂದ 2004ರವರೆಗೆ ಕರ್ನಾಟಕದ 16ನೇ ಮುಖ್ಯಮಂತ್ರಿಗಳಾಗಿದ್ದರು. ನಂತರ 2004 ರಿಂದ 2008ರವರೆಗೆ ಮಹಾರಾಷ್ಟ್ರದ ರಾಜ್ಯಪಾಲರಾಗಿ, ಕೇಂದ್ರ ವಿದೇಶಾಂಗ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದರು.

ಸ್ಪೀಕರ್ ಆಗಿಯೂ ಸೇವೆ ಸಲ್ಲಿಕೆ
ಡಿಸೆಂಬರ್ 1989ರಿಂದ ಜನವರಿ 1993ರವರೆಗೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿಯೂ ಸೇವೆ ಸಲ್ಲಿಸಿದ್ದರು. 1971 ರಿಂದ 2014ರವರೆಗೆ ವಿವಿಧ ಕಾಲಘಟ್ಟದಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರು ಆಗಿದ್ದರು.

Advertisment
Advertisment
Advertisment
Advertisment