/newsfirstlive-kannada/media/post_attachments/wp-content/uploads/2024/07/NAGENDRA-2.jpg)
ಬೆಂಗಳೂರು: ವಾಲ್ಮಿಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾಗುತ್ತಿರುವ ಬೃಹತ್ ಹಗರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಾಜಿ ಸಚಿವ ನಾಗೇಂದ್ರ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಎಸ್ಐಟಿ ಅಧಿಕಾರಿಗಳ ತನಿಖೆಯಿಂದ ಸೇಫ್ ಆಗಿದ್ದ ನಾಗೇಂದ್ರ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು ಬೆಳಗ್ಗೆ ವಶಕ್ಕೆ ಪಡೆದಿದ್ದಾರೆ. ಕೆಲವೇ ಗಂಟೆಯಲ್ಲಿ ಬಂಧನ ಪ್ರಕ್ರಿಯೆ ಮಾಡುವ ಸಾಧ್ಯತೆ ಇದೆ. ಸೂಕ್ತ ಸಾಕ್ಷಿಗಳ ಸಮೇತ ನಾಗೇಂದ್ರ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ವಾಲ್ಮಿಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ಹಗರಣ ನಡೆದಿದೆ ಎಂಬ ಆರೋಪ ಇದೆ. ಅದರಲ್ಲಿ 89 ಕೋಟಿ ಹಣ ನಾಗೇಂದ್ರ ಅಂಡ್ ಟೀಂ ಸೇರಿದೆ ಎಂಬ ಆಪಾದನೆ ಇದೆ.
ಇದನ್ನೂ ಓದಿ:ವೈದ್ಯರ ಗಡುವು ಮೀರಿ ಅಪರ್ಣಾ ಬದುಕಿದ್ದೇ ಚಮತ್ಕಾರ.. ಕೊನೆಗಾಲದಲ್ಲಿ ಪಟ್ಟ ಕಷ್ಟಗಳು ಅಷ್ಟಿಷ್ಟಲ್ಲ..
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ