ಮಾಲೀಕರೇ ಖಾಲಿ ಜಾಗದಲ್ಲಿ ನೀರು ನಿಲ್ಲದಂತೆ ಕ್ರಮ ವಹಿಸಬೇಕು
ನಿಯಮವನ್ನು ಉಲ್ಲಂಘಿಸಿದವರಿಗೆ ದಂಡ ಹಾಕಲು ನಿರ್ಧಾರ
ರಾಜ್ಯದಲ್ಲಿ ಇಲ್ಲಿಯವರೆಗೂ 25,261 ಡೆಂಗ್ಯೂ ಪ್ರಕರಣಗಳು ವರದಿ
ಬೆಂಗಳೂರು: ರಾಜ್ಯಾದ್ಯಂತ ದಿನದಿಂದ ದಿನಕ್ಕೆ ಡೆಂಗ್ಯೂ ಜ್ವರಕ್ಕೆ ತುತ್ತಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಅಟ್ಟಹಾಸದ ಹಿನ್ನೆಲೆಯಲ್ಲಿ ಇಂದು ರಾಜ್ಯ ಸರ್ಕಾರ ಡೆಂಗ್ಯೂವನ್ನ ಸಾಂಕ್ರಾಮಿಕ ರೋಗ ಎಂದು ಘೋಷಣೆ ಮಾಡಿದೆ.
ಇದನ್ನೂ ಓದಿ: ಡೆಂಘೀ ಮಹಾಮಾರಿ.. PUC ಡಿಸ್ಟಿಂಕ್ಷನ್‌ನಲ್ಲಿ ಪಾಸ್ ಆಗಿದ್ದ ವಿದ್ಯಾರ್ಥಿನಿ ದಾರುಣ ಸಾವು
ಕರ್ನಾಟಕ ಎಪಿಡೆಮಿಕ್ ಡಿಸಿಸ್ ರೆಗ್ಯೂಲೇಷನ್- 2024 ಅಡಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಇದರ ಜೊತೆಗೆ ಡೆಂಗ್ಯೂ ನಿಯಂತ್ರಣಕ್ಕೆ ಯಾವೆಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದರ ಕುರಿತು ಸೂಚನೆ ನೀಡಲಾಗಿದೆ.
ಸರ್ಕಾರದ ‘ಡೆಂಗ್ಯೂ’ ಸೂಚನೆಗಳೇನು?
ರಾಜ್ಯ ಸರ್ಕಾರದ ಆದೇಶದಲ್ಲಿ ಸೊಳ್ಳೆಗಳ ಸಂತಾನೋತ್ಪತ್ತಿ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು. ನಿವೇಶನ ಅಥವಾ ಖಾಲಿ ಜಾಗದಲ್ಲಿ ನೀರು ನಿಲ್ಲದಂತೆ ಕ್ರಮ ವಹಿಸಬೇಕು. ಆಯಾ ಜಾಗದ ಮಾಲೀಕರು ಸೊಳ್ಳೆ ನಿಯಂತ್ರಣಕ್ಕೆ ಕ್ರಮ ವಹಿಸಬೇಕು. ಒಂದು ವೇಳೆ ನಿಯಮ ಉಲ್ಲಂಘಿಸಿದರೆ ಅಧಿಕಾರಿಗಳಿಂದ ನೊಟೀಸ್ ಜಾರಿಯಾಗುತ್ತೆ. ನಿಯಮವನ್ನು ಉಲ್ಲಂಘಿಸಿದವರಿಗೆ ದಂಡ ಹಾಕಲು ನಿರ್ಧಾರ ಮಾಡಲಾಗಿದೆ.
ಇದನ್ನೂ ಓದಿ: ಜ್ವರ ಬಂದು ಕೇವಲ ನಾಲ್ಕೇ ದಿನ.. ಕಣ್ಣು ಮುಚ್ಚಿದ ಯುವತಿ; ಡೆಂಘೀ ಮಹಾಮಾರಿಗೆ 5 ವರ್ಷದ ಕಂದಮ್ಮ ಬಲಿ!
ಖಾಲಿ ಇರುವ ಜಾಗಗಳಲ್ಲಿ ಸೊಳ್ಳೆ ಉತ್ಪತ್ತಿಯಾಗದಂತೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ವಹಿಸಲು ಸರ್ಕಾರ ಸೂಚನೆ ನೀಡಿದೆ. ಖಾಲಿ ನಿವೇಶನಗಳಲ್ಲಿ ರಾಸಾಯನಿಕವನ್ನು ಸಿಂಪಡಿಸಬೇಕು. ಇದಕ್ಕೆ ಖರ್ಚಾದ ವೆಚ್ಚವನ್ನು ಸಂಬಂಧ ಪಟ್ಟವರಿಂದ ವಸೂಲಿ ಮಾಡುವಂತೆ ಸೂಚಿಸಲಾಗಿದೆ.
ರಾಜ್ಯದಲ್ಲಿ ಡೆಂಗ್ಯೂ ರುದ್ರನರ್ತನ!
ರಾಜ್ಯದಲ್ಲಿ ಇಲ್ಲಿಯವರೆಗೂ 25,261 ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ. ರಾಜ್ಯದಲ್ಲಿ 1569 ಡೆಂಗ್ಯೂ ಪ್ರಕರಣಗಳು ಸಕ್ರಿಯವಾಗಿದ್ರೆ ಇಲ್ಲಿಯವರೆಗೆ ಡೆಂಗ್ಯೂ ಜ್ವರಕ್ಕೆ 12 ಮಂದಿ ಬಲಿಯಾಗಿದ್ದಾರೆ.
ಕಳೆದ 24 ಗಂಟೆಯಲ್ಲಿ ಒಂದು ವರ್ಷದೊಳಗಿನ 5 ಮಕ್ಕಳು ಸೇರಿದಂತೆ 147 ಮಂದಿಯಲ್ಲಿ ಡೆಂಗ್ಯೂ ದೃಢವಾಗಿದೆ. ಇಲ್ಲಿಯವರೆಗೂ ಒಂದು ವರ್ಷದೊಳಗಿನ 511 ಮಕ್ಕಳಲ್ಲಿ ಡೆಂಗ್ಯೂ ಜ್ವರ ಪತ್ತೆಯಾಗಿದೆ.
24 ಗಂಟೆಯಲ್ಲಿ ಒಂದು ವರ್ಷದಿಂದ 18 ವರ್ಷದೊಳಗಿನ 35 ಮಂದಿಯಲ್ಲಿ ಡೆಂಗ್ಯೂ ಪತ್ತೆಯಾಗಿದೆ. ಇಲ್ಲಿಯವರೆಗೂ ಒಂದು ವರ್ಷದಿಂದ 18 ವರ್ಷದೊಳಗಿನ 9055 ಮಂದಿಯಲ್ಲಿ ಡೆಂಗ್ಯೂ ದೃಢವಾಗಿದೆ. ಕಳೆದ 24 ಗಂಟೆಯಲ್ಲಿ 18 ವರ್ಷ ಮೇಲ್ಪಟ್ಟ 107 ಜನರಲ್ಲಿ ಹಾಗೂ ಇಲ್ಲಿಯವರೆಗೂ 18 ವರ್ಷ ಮೇಲ್ಪಟ್ಟ 15,842 ಮಂದಿ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ