/newsfirstlive-kannada/media/post_attachments/wp-content/uploads/2025/05/CM-siddu.jpg)
ಬೆಂಗಳೂರು: ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಶಿಕ್ಷಕರಿಗೆ ಮತ್ತು ಉಪನ್ಯಾಸಕರಿಗೆ ಗುಡ್​ನ್ಯೂಸ್ ಸಿಕ್ಕಿದೆ.
ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆಯನ್ನು ತಲಾ 2,000 ರೂಪಾಯಿಗಳಷ್ಟು ಹೆಚ್ಚಳ ಮಾಡಿದೆ. ಮುಂದಿನ ಆದೇಶದವರೆಗೆ ಈ ಪರಿಷ್ಕೃತ ಗೌರವ ಸಂಭಾವನೆ ಜಾರಿಯಲ್ಲಿರಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ: ರಕ್ಷಿತ್ ಶೆಟ್ಟಿಗೆ ಪಂಜುರ್ಲಿ ಆಶೀರ್ವಾದ.. ಕುಟುಂಬಸ್ಥರ ವಿಶೇಷ ಹರಕೆ ಉತ್ಸವದಲ್ಲಿ ಸಿಂಪಲ್ ಸ್ಟಾರ್​..!
/newsfirstlive-kannada/media/post_attachments/wp-content/uploads/2025/05/lecturer.jpg)
ಈ ಹಿಂದೆ ಸರ್ಕಾರ ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರಿಗೆ 10,000 ರೂಪಾಯಿ ಹಾಗೂ ಪ್ರೌಢಶಾಲಾ ಅತಿಥಿ ಶಿಕ್ಷಕರಿಗೆ 10,500 ಗೌರವ ಸಂಭಾವನೆ ನಿಗದಿಪಡಿಸಿತ್ತು. ಇದೀಗ ಈ ಮೊತ್ತಕ್ಕೆ ಹೆಚ್ಚುವರಿಯಾಗಿ 2,000 ರೂಪಾಯಿಗಳು ಸೇರ್ಪಡೆ ಆಗಿದೆ. ಪರಿಷ್ಕೃತ ಗೌರವ ಸಂಭಾವನೆಯು ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರಿಗೆ 12,000 ರೂಪಾಯಿ ಸಿಗಲಿದೆ.
ಪ್ರೌಢಶಾಲಾ ಅತಿಥಿ ಶಿಕ್ಷಕರಿಗೆ 12,500 ರೂಪಾಯಿ ಸಿಗಲಿದೆ. ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೂ 2,000 ಗಳಷ್ಟು ಗೌರವಧನ ಹೆಚ್ಚಳವಾಗಿದೆ. ಈ ಹಿಂದೆ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ 12,000 ರೂಪಾಯಿ ನಿಗದಿಯಾಗಿತ್ತು. ಪರಿಷ್ಕೃತ ಗೌರವ ಸಂಭಾವನೆಯು 14,000 ರೂಪಾಯಿ ಆಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us