newsfirstkannada.com

Breaking News: ‘ಗೃಹಲಕ್ಷ್ಮಿ’ ಯೋಜನೆಗೆ ಚಾಲನೆ ಕೊಟ್ಟ ಸಿದ್ದರಾಮಯ್ಯ ಸರ್ಕಾರ; ಮನೆ ಯಜಮಾನಿ ‘ಕೈ’ಸೇರಿದ 2000 ರೂಪಾಯಿ

Share :

30-08-2023

    ಸಾಂಸ್ಕೃತಿಕ ನಗರಿಯಲ್ಲಿಂದು ‘ಗೃಹಲಕ್ಷ್ಮಿ’ಗೆ ಚಾಲನೆ

    ರಾಜ್ಯದ 10 ಸಾವಿರ ಸ್ಥಳಗಳಲ್ಲಿ ಏಕಕಾಲಕ್ಕೆ ಜಾರಿ

    1.10 ಕೋಟಿ ಕುಟುಂಬದ ಯಜಮಾನಿಯರಿಗೆ ‘ಗೃಹಲಕ್ಷ್ಮೀ’

ಕರ್ನಾಟಕ ಸರ್ಕಾರ ಇವತ್ತು ಮನೆ ಯಜಮಾನಿಯರ ಮಹತ್ವದ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಿದೆ. ಅರಮನೆ ನಗರಿ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ಕೊಟ್ಟರು.

ಕಾಂಗ್ರೆಸ್ ಸರ್ಕಾರದ ಮಹತ್ವದ ನಾಲ್ಕನೇ ಗ್ಯಾರಂಟಿ ಯೋಜನೆಗೆ ಎಐಸಿಸಿ ನಾಯಕ ರಾಹುಲ್ ಗಾಂಧಿ ಮೂಲಕ ಚಾಲನೆ ಕೊಡಿಸಿದೆ. ರಾಜ್ಯದ 10 ಸಾವಿರ ಸ್ಥಳಗಳಲ್ಲಿ ಏಕಕಾಲಕ್ಕೆ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ಸಿಕ್ಕಿದೆ. ಈ ಮೂಲಕ ಮಹಿಳೆಯರ ಖಾತೆಗೆ 2 ಸಾವಿರ ರೂಪಾಯಿ ಹಣ ಜಮಾ ಆಗಿದೆ.

ಮೈಸೂರಿನಲ್ಲಿ ನಡೆಯಲಿರೋ ಗೃಹಲಕ್ಷ್ಮಿ ಜಾರಿ ಕಾರ್ಯಕ್ರಮ ವೀಕ್ಷಿಸಿಲು 1 ಸಾವಿರಕ್ಕೂ ಹೆಚ್ಚು ಸ್ಕೀನ್‌ಗಳ ವ್ಯವಸ್ಥೆ ಮಾಡಲಾಗಿತ್ತು. ಒಟ್ಟಾರೆ, ಚುನಾವಣೆ ವೇಳೆ ರಾಜ್ಯದ ಜನರಿಗೆ ಕಾಂಗ್ರೆಸ್ ಸರ್ಕಾರ 5 ಭರವಸೆಯನ್ನ ಕೊಟ್ಟಿತ್ತು. ಇದೀಗ ಸರ್ಕಾರ 100 ದಿನ ಪೂರೈಸುವ ವೇಳೆಗೆ 4 ನೇ ಗ್ಯಾರಂಟಿ ಅನುಷ್ಟಾನ ಮಾಡಿದೆ.

ವೈಯಕ್ತಿಕ ಆಸೆ, ಆಕಾಂಕ್ಷೆ, ಅವಶ್ಯಕತೆಗಳನ್ನು ತ್ಯಾಗಮಾಡಿ ಕುಟುಂಬಕ್ಕಾಗಿ ತಮ್ಮ ಬದುಕನ್ನೇ ಸಮರ್ಪಿಸಿಕೊಂಡಿರುವ ನಾಡಿನ ಕೋಟ್ಯಂತರ ತಾಯಂದಿರು ಇಂದು ನಮ್ಮ “ಗೃಹಲಕ್ಷ್ಮಿ” ಯೋಜನೆಯಿಂದ ಸ್ವತಂತ್ರ, ಸ್ವಾವಲಂಬಿ ಬದುಕಿಗೆ ಪದಾರ್ಪಣೆ‌ ಮಾಡಲಿದ್ದಾರೆ. ನಮ್ಮ ಸರ್ಕಾರ ರಾಜ್ಯದ ಪ್ರತಿಯೊಬ್ಬ ಮನೆ ಯಜಮಾನಿಯ ಬ್ಯಾಂಕ್ ಖಾತೆಗೆ 2000 ರೂಪಾಯಿಗಳನ್ನು ನೇರವಾಗಿ ವರ್ಗಾವಣೆ ಮಾಡಿ ನುಡಿದಂತೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Breaking News: ‘ಗೃಹಲಕ್ಷ್ಮಿ’ ಯೋಜನೆಗೆ ಚಾಲನೆ ಕೊಟ್ಟ ಸಿದ್ದರಾಮಯ್ಯ ಸರ್ಕಾರ; ಮನೆ ಯಜಮಾನಿ ‘ಕೈ’ಸೇರಿದ 2000 ರೂಪಾಯಿ

https://newsfirstlive.com/wp-content/uploads/2023/08/RAHUL.jpg

Load More