ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆರೋಗ್ಯದಲ್ಲಿ ಏರುಪೇರು; ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್

author-image
Ganesh
Updated On
ಮುಡಾ ಹಗರಣದಲ್ಲಿ ರಾಜ್ಯಪಾಲರಿಂದ ಸಿಎಂಗೆ ನೋಟಿಸ್; ಇಬ್ಬರಿಗೂ ಇರೋ ಕಾನೂನು ಅವಕಾಶಗಳೇನು?
Advertisment
  • ನಿನ್ನೆ ರಾತ್ರಿ 10 ಗಂಟೆಗೆ ಆಸ್ಪತ್ರೆಗೆ ದಾಖಲಾಗಿದ್ದರು
  • ಚಿಕಿತ್ಸೆ ಬಳಿಕ ರಾಜಭವನಕ್ಕೆ ವಾಪಸ್ ಆಗಿದ್ದಾರೆ
  • ಆರೋಗ್ಯದಲ್ಲಿ ಸುಧಾರಣೆ, ವಿಶ್ರಾಂತಿಯಲ್ಲಿ ರಾಜ್ಯಪಾಲರು

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ.

ಹೃದಯ ಸಂಬಂಧಿ ಖಾಯಿಲೆ ಹಿನ್ನಲೆ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ದಾಖಲಾಗಿದ್ದ ರಾಜ್ಯಪಾಲರಿಗೆ ಸೂಕ್ತ ಚಿಕಿತ್ಸೆ ನೀಡಲಾಗಿದೆ. ನಿನ್ನೆ ರಾತ್ರಿ 10 ಗಂಟೆಗೆ ರಾಜ್ಯಪಾಲರು ಆಸ್ಪತ್ರೆಗೆ ದಾಖಲಾಗಿದ್ದು, ರಾತ್ರಿ ಒಂದು ಗಂಟೆಯವರೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ಬಳಿಕ ಥಾವರ್ ಚಂದ್ ಗೆಹ್ಲೋಟ್ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದ ಹಿನ್ನಲೆ ಅವರನ್ನ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಮಾಡಲಾಗಿದೆ. ಸದ್ಯ ರಾಜ ಭವನಕ್ಕೆ ಮರಳಿರೋ ರಾಜ್ಯಪಾಲರು ಚೇತರಿಸಿಕೊಳ್ಳುತ್ತಿದ್ದಾರೆ ಅಂತ ತಿಳಿದುಬಂದಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment