Advertisment

ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌; ಸಚಿವ ಸಂಪುಟ ಸಭೆಯಲ್ಲಿ ಒಂದು ಸಾಲಿನ ನಿರ್ಣಯ ಅಂಗೀಕಾರ..!

author-image
Ganesh
Updated On
ಸಿಎಂ, ಡಿಸಿಎಂ ಇಬ್ಬರಿಗೂ ತಾತ್ಕಾಲಿಕ ರಿಲೀಫ್.. ಎರಡೂ ಪ್ರಕರಣದಲ್ಲಿ ಹೈಕೋರ್ಟ್ ಬಿಗ್ ಟ್ವಿಸ್ಟ್; ಆಗಿದ್ದೇನು?
Advertisment
  • ಸಿಎಂ ವಿರುದ್ಧ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲರಿಂದ ಅನುಮತಿ
  • ದಿಢೀರ್ ಸಚಿವ ಸಂಪುಟ ಸಭೆ ಕರೆದು ಮಹತ್ವದ ನಿರ್ಣಯ
  • ಸುದ್ದಿಗೋಷ್ಟಿಯಲ್ಲಿ DCM ಡಿಕೆ ಶಿವಕುಮಾರ್ ಏನ್ ಹೇಳಿದರು?

ಮೈಸೂರಿನ ಮುಡಾ ಅಕ್ರಮ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಕಾನೂನಿನ ಸಂಕಷ್ಟ ಎದುರಾಗಿದೆ. ಗವರ್ನರ್ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರೋದು ರಾಜ್ಯ ರಾಜಕೀಯಕ್ಕೆ ಶೇಕ್ ಆಗುವಂತೆ ಮಾಡಿದೆ. ಈ ಬೆನ್ನಲ್ಲೇ ಸರ್ಕಾರ ಇಂದು ಸಚಿವ ಸಂಪುಟ ಸಭೆ ನಡೆಸಿತು.

Advertisment

ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರ
ರಾಜ್ಯಪಾಲರ ‌‌ನಿರ್ಣಯಕ್ಕೆ ಕ್ಯಾಬಿನೆಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ರಾಜ್ಯಪಾಲರ ತೀರ್ಮಾನ ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ. ಒಕ್ಕೂಟ ವ್ಯವಸ್ಥೆಯನ್ನು ಬುಡಮೇಲು ಮಾಡುವ ತೀರ್ಮಾನ ಇದು. ಕೇಂದ್ರ ಸರ್ಕಾರದ ಸುತ್ತೋಲೆಯನ್ನೇ ಮೀರಿ ರಾಜ್ಯಪಾಲರು ನಡೆದುಕೊಂಡಿದ್ದಾರೆ. ಎಲ್ಲಾ ವೇದಿಕೆಯಲ್ಲೂ ರಾಜ್ಯಪಾಲರ ನಿರ್ಣಯದ ವಿರುದ್ಧ ಹೋರಾಡಲು ಕ್ಯಾಬಿನೆಟ್ ತೀರ್ಮಾನ ಮಾಡಲಾಗಿದೆ.

ಇದನ್ನೂ ಓದಿ:ಮುಡಾ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ.. ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​​ಗೆ​ ಗವರ್ನರ್ ಅನುಮತಿ

ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ಕೊಟ್ಟಿರುವುದು ತಪ್ಪು. ಇಡೀ ಸಂಪುಟ ಒಟ್ಟಾಗಿ ನಿಂತು ಕಾನೂನು ಹೋರಾಟ ಮಾಡೋಣ ಎಂಬ ಒಂದು ಸಾಲಿನ ನಿರ್ಣಯ ಅಂಗೀಕಾರ ಮಾಡಲಾಗಿದೆ. ಸಂಪುಟ ಸಭೆ ಬಳಿಕ ಮಾತನಾಡಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್.. ರಾಜ್ಯಪಾಲರು ಕಾನೂನು ಬಾಹೀರ, ಸಂವಿಧಾನಕ್ಕೆ ವಿರುದ್ಧವಾದ ತೀರ್ಮಾನ ಮಾಡಿದ್ದಾರೆ. ಸಂಪುಟ ಸಭೆಯಲ್ಲಿ ಇಡೀ ಕ್ಯಾಬಿನೆಟ್ ಸಿಎಂ ಜೊತೆ ಇದೆ. ಪಕ್ಷ, ಸಚಿವರು ಎಲ್ಲರೂ ಸಿಎಂ ಬೆನ್ನಿಗೆ ನಿಂತಿದೆ. ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡುವ ಅಗತ್ಯವಿಲ್ಲ. ಎಐಸಿಸಿಯಿಂದ ಕೆಪಿಸಿಸಿವರೆಗೂ ಅಚಲವಾದ ನಿರ್ಧಾರ ಇದೆ ಎಂದರು.

Advertisment

ಇದನ್ನೂ ಓದಿ:ಲಾಬಿ, ಒತ್ತಡ ಪಕ್ಕಕ್ಕೆ ಬಿಡಿ..! ಟೀಂ ಇಂಡಿಯಾಗೆ ಮಾರ್ಕೆಲ್ ಎಂಟ್ರಿ ಹಿಂದಿನ ಅಸಲಿ ಕಾರಣ ರಿವೀಲ್..!

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment