newsfirstkannada.com

ದೆಹಲಿ ಚಲೋ: ನಾಡಗೀತೆ ಹಾಡುವ ಮೂಲಕ ಪ್ರತಿಭಟನೆ ಶುರು ಮಾಡಿದ ಕಾಂಗ್ರೆಸ್​​​

Share :

Published February 7, 2024 at 11:57am

Update February 7, 2024 at 11:58am

    ಕರ್ನಾಟಕಕ್ಕೆ ಅನುದಾನ ನೀಡುವಲ್ಲಿ ಕೇಂದ್ರದಿಂದ ತಾರತಮ್ಯ

    ಪ್ರತಿಭಟನೆಯಲ್ಲಿ ಭಾಗವಹಿಸಿದ ಕಾಂಗ್ರೆಸ್​​ನ ಸಚಿವರು, ಶಾಸಕರು

    ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆ

ನವದೆಹಲಿ: ಕೇಂದ್ರ ಸರ್ಕಾರದಿಂದ ಅನುದಾನ ತಾರತಮ್ಯ ಖಂಡಿಸಿ ದೆಹಲಿಯಲ್ಲಿ ಕರ್ನಾಟಕ ಕಾಂಗ್ರೆಸ್​ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದು ನಾಡಗೀತೆ ಹಾಡುವ ಮೂಲಕ ಹೋರಾಟ ಪ್ರಾರಂಭಿಸಿದೆ.

ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯುತ್ತಿದ್ದು ಧರಣಿಯಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್, ಹೆಚ್.ಕೆ ಪಾಟೀಲ್, ಕೆ.ಹೆಚ್ ಮುನಿಯಪ್ಪ, ಹೆಚ್​.ಸಿ ಮಹದೇವಪ್ಪ, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಗೃಹ ಸಚಿವ ಡಾ.ಜಿ ಪರಮೇಶ್ವರ್ ಸೇರಿದಂತೆ ಸರ್ಕಾರದ ಎಲ್ಲ ಸಚಿವರು ಹಾಗೂ ಶಾಸಕರು ಭಾಗಿಯಾಗಿದ್ದಾರೆ.

ನಾಡಗೀತೆ ಮೂಲಕ ಪ್ರತಿಭಟನೆ ಪ್ರಾರಂಭಿಸಿದ ಬಳಿಕ ಡಿಸಿಎಂ ಡಿಕೆ ಶಿವಕುಮಾರ್ ಅವರು ಮಾತನಾಡಿದರು. ನಾವು ನಮ್ಮ ಹಕ್ಕನ್ನು ಕೇಳುತ್ತಿದ್ದೇವೆ. ಕೇಂದ್ರ ಸರ್ಕಾರ ಅನುದಾನ ನೀಡುವಲ್ಲಿ ತಾರತಮ್ಯ ಮಾಡುತ್ತಿದೆ. ಬರ ಪರಿಹಾರ ಸೇರಿದಂತೆ ಕರ್ನಾಟಕದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಯೋಜನೆಯಲ್ಲಿ ಹಣ ನೀಡಿಲ್ಲ. ಇನ್ನುವರೆಗೆ ಡಬಲ್ ಇಂಜಿನ್ ಸರ್ಕಾರ ಒಂದು ನಯಾಪೈಸೆ ಕೂಡ ನೀಡಿಲ್ಲ ಎಂದು ಡಿಸಿಎಂ ಆರೋಪ ಮಾಡಿದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ದೆಹಲಿ ಚಲೋ: ನಾಡಗೀತೆ ಹಾಡುವ ಮೂಲಕ ಪ್ರತಿಭಟನೆ ಶುರು ಮಾಡಿದ ಕಾಂಗ್ರೆಸ್​​​

https://newsfirstlive.com/wp-content/uploads/2024/02/DK_SHIVAKUMAR-7.jpg

Load More