ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ.. RCB, KSCA ವಿರುದ್ಧ ಕೇಸ್ ದಾಖಲಿಸಲು ಕ್ಯಾಬಿನೆಟ್​ನಲ್ಲಿ ಒಪ್ಪಿಗೆ

author-image
Veena Gangani
Updated On
ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ.. RCB, KSCA ವಿರುದ್ಧ ಕೇಸ್ ದಾಖಲಿಸಲು ಕ್ಯಾಬಿನೆಟ್​ನಲ್ಲಿ ಒಪ್ಪಿಗೆ
Advertisment
  • ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತದಲ್ಲಿ ಜೀವಬಿಟ್ಟಿದ್ದ 11 ಫ್ಯಾನ್ಸ್​
  • ಕ್ಯಾಬಿನೆಟ್ ಸಭೆಯಲ್ಲಿ ಯಾವೆಲ್ಲಾ ವಿಚಾರದ ಬಗ್ಗೆ ಚರ್ಚೆ ನಡೆದಿದೆ?
  • ಪೊಲೀಸ್ ಅಧಿಕಾರಿಗಳ ವಿರುದ್ಧವೂ ಕ್ರಿಮಿನಲ್ ಮೊಕದ್ದಮೆ ಸಾಧ್ಯತೆ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಆರ್‌ಸಿಬಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ರಾಜ್ಯದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಇಂದು ನಡೆದ ಕ್ಯಾಬಿನೆಟ್ ಸಭೆಯಲ್ಲಿ ಆರ್‌ಸಿಬಿ ಮಾತ್ರವಲ್ಲದೇ, ಕೆಎಸ್‌ಸಿಎ ವಿರುದ್ಧವೂ ಕೇಸ್ ದಾಖಲಿಸಲು ಕ್ಯಾಬಿನೆಟ್ ಒಪ್ಪಿಗೆ ನೀಡಿದೆ.

ಇದನ್ನೂ ಓದಿ: ಹೈಕೋರ್ಟ್ ಸೂಕ್ತ ವಿವೇಚನೆ ಬಳಸಿ ದರ್ಶನ್​​ಗೆ ಜಾಮೀನು ನೀಡಿಲ್ಲ -ಸುಪ್ರೀಂ ಕೋರ್ಟ್​ ಅತೃಪ್ತಿ

publive-image

ಕಾಲ್ತುಳಿತದ ದುರಂತದ ಬಗ್ಗೆ ತನಿಖೆ ನಡೆಸಲು ನೇಮಿಸಲಾಗಿದ್ದ ನ್ಯಾ.ಮೈಕಲ್ ಡಿ ಕುನ್ಹಾ ಆಯೋಗದ ವರದಿಯನ್ನು ಕ್ಯಾಬಿನೆಟ್ ಒಪ್ಪಿಕೊಂಡಿದೆ. ಕೆಎಸ್​ಸಿಎ ವಿರುದ್ಧವೂ ಕ್ರಿಮಿನಲ್ ಕೇಸ್ ದಾಖಲಿಸಲು ಕ್ಯಾಬಿನೆಟ್ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಪೊಲೀಸ್ ಅಧಿಕಾರಿಗಳ ನಿರ್ಲಕ್ಷ್ಯವನ್ನು ಜಸ್ಟೀಸ್ ಮೈಕೆಲ್ ಡಿ.ಕುನ್ಹಾ ವರದಿಯು ಧೃಡೀಕರಿಸಿದೆ. ಸಂಬಂಧಿಸಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ವರದಿಯಲ್ಲಿ ಶಿಫಾರಸು ಮಾಡಲಾಗಿದೆ. ಹೀಗಾಗಿ ಪೊಲೀಸ್ ಅಧಿಕಾರಿಗಳ ವಿರುದ್ಧವೂ ಕ್ರಿಮಿನಲ್ ಮೊಕದ್ದಮೆ ದಾಖಲು ಸಾಧ್ಯತೆ ಇದೆ. ಇದಕ್ಕೆ ಸಂಬಂಧಿಸಿದಂತೆ ಮತ್ತೆ ಮುಂದಿನ ಕ್ಯಾಬಿನೆಟ್​ನಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತೆ. ಕ್ಯಾಬಿನೆಟ್ ಸಭೆಯ ಬಳಿಕ ರಾಜ್ಯದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಎಚ್‌.ಕೆ.ಪಾಟೀಲ್ ಕ್ಯಾಬಿನೆಟ್ ಸಭೆಯ ತೀರ್ಮಾನಗಳ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಇನ್ನೂ, ಇಂದಿನ (ಜುಲೈ 17) ರಾಜ್ಯ ಕ್ಯಾಬಿನೆಟ್ ಸಭೆಯಲ್ಲಿ ಅನೇಕ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ರಾಯಚೂರು ತಾಲೂಕಿನಲ್ಲಿ ನೂತನ ಜವಳಿ ಪಾರ್ಕ್ ಸ್ಥಾಪನೆಗೆ ಅನುಮೋದನೆ ನೀಡಲಾಗಿದೆ. ಒಟ್ಟು ೨೪.೫೦ ಕೋಟಿಯಲ್ಲಿ ನೂತನ ಜವಳಿ ಪಾರ್ಕ್ ಅಭಿವೃದ್ಧಿಪಡಿಸಲು ಕ್ಯಾಬಿನೆಟ್ ನಲ್ಲಿ ಅನುಮೋದನೆ ನೀಡಲಾಗಿದೆ. ಜಿಲ್ಲಾ ಖನಿಜ ಪ್ರತಿಷ್ಠಾನ ತಿದ್ದುಪಡಿ ನಿಯಮಗಳು - ೨೦೨೫ ವಿವರವಾಗಿ ಕ್ಯಾಬಿನೆಟ್ ನಲ್ಲಿ ಚರ್ಚಿಸಲಾಗಿದೆ. ಕೆಲವು ತಾಂತ್ರಿಕ ವಿವರಗಳ ಅವಶ್ಯಕತೆ ಇರುವುದರಿಂದ ತೀರ್ಮಾನವನ್ನು ಮುಂದೂಡಲಾಗಿದೆ.

ರಾಜ್ಯದಲ್ಲಿ ಮತ್ತೊಂದು ಪರಮಾಣು ವಿದ್ಯುತ್ ಸ್ಥಾವರ ಸ್ಥಾಪನೆಗೆ ಒಪ್ಪಿಗೆ

ರಾಜ್ಯದಲ್ಲಿ ಕೈಗಾದಲ್ಲಿ ಪರಮಾಣ ವಿದ್ಯುತ್ ಸ್ಥಾವರ ಇದೆ. ಈಗ ಮತ್ತೊಂದು ಪರಮಾಣು ವಿದ್ಯುತ್ ಸ್ಥಾವರ ಸ್ಥಾಪನೆಗೆ ಎನ್‌ಟಿಪಿಸಿ ಮೂರು ಸ್ಥಳಗಳನ್ನು ಗುರುತಿಸಿತ್ತು. ಪರಮಾಣು ವಿದ್ಯುತ್ ಸ್ಥಾವರ ಸ್ಥಾಪನೆಗೆ ತಾತ್ವಿಕ ಅನುಮೋದನೆ ನೀಡಲಾಗಿದೆ. ಎನ್‌ಟಿಪಿಸಿ ಗುರುತಿಸಿರುವ ಸಂಭಾವ್ಯ ಸ್ಥಳಗಳ ಪರಿಶೀಲನೆಗೆ ನಿರ್ಧರಿಸಲಾಗಿದೆ. ಇಡೀ ಕರ್ನಾಟಕದಲ್ಲಿ ಎಲ್ಲೆಲ್ಲಿ ಸಾಧ್ಯವೋ ಆ ಸ್ಥಳಗಳ ಅಧ್ಯಯನ ಮಾಡಲು ಕ್ಯಾಬಿನೆಟ್ ನಿರ್ಧಾರ ಕೈಗೊಂಡಿದೆ. ೩ ಸ್ಥಳಗಳ ಪರಿಶೀಲನೆಗೆ ಎನ್‌ಟಿಪಿಸಿ ಸಲಹೆ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದೆ. ಆದರೆ ಇಡೀ ಕರ್ನಾಟಕದಲ್ಲಿ ಒಟ್ಟಾರೆ ಸ್ಥಳ ಪರಿಶೀಲನೆ ಹಾಗೂ ಅಧ್ಯಯನ ನಡೆಸಲು ಕ್ಯಾಬಿನೆಟ್ ತೀರ್ಮಾನಿಸಿದೆ. ಎನ್‌ಟಿಪಿಸಿ ಸಲಹೆ ನೀಡಿದ್ದ ಸ್ಥಳಗಳೆಂದರೇ, ಕೊಪ್ಪಳ, ರಾಯಚೂರು, ವಿಜಯಪುರ. ಆದರೇ, ಈ ಸ್ಥಳಗಳನ್ನು ರಾಜ್ಯ ಕ್ಯಾಬಿನೆಟ್ ಒಪ್ಪಿಲ್ಲ, ತನ್ನದೇ ಸ್ಥಳಗಳ ಪರಿಶೀಲನೆಗೆ ರಾಜ್ಯ ಕ್ಯಾಬಿನೆಟ್ ನಿರ್ಧಾರ ಕೈಗೊಂಡಿದೆ.

publive-image

ಮೈಸೂರು ವಿಶ್ವವಿದ್ಯಾಲಯದಲ್ಲಿ ಡಾ.ಬಿ.ಆ‌ರ್. ಅಂಬೇಡ್ಕರ್ ಸಂವಿಧಾನ ಪೀಠವನ್ನು ರೂ.10 ಕೋಟಿಗಳ ಅಂದಾಜು ಮೊತ್ತದಲ್ಲಿ ಸ್ಥಾಪಿಸಲು ಕ್ಯಾಬಿನೆಟ್ ಅನುಮೋದನೆ ನೀಡಿದೆ. ಗ್ರೇಟರ್ ಬೆಂಗಳೂರು ವ್ಯಾಪ್ತಿ ಯಲ್ಲಿನ ಪ್ರದೇಶದಲ್ಲಿ ಎ ಖಾತಾ- ಬಿ ಖಾತಾ ನೀಡುವ ಬಗ್ಗೆ ಕ್ಯಾಬಿನೆಟ್ ಅನುಮೋದನೆ ನೀಡಲಾಗಿದೆ. ಕಾನೂನು ಬಾಹಿರ ಕಟ್ಟಡ ನಿರ್ಮಾಣ, ಅನಧಿಕೃತ ಬಡಾವಣೆ ನಿರ್ಮಾಣ ಸ್ಥಾಪನೆ ತಡೆಯಲು ಎ ಖಾತಾ ಮತ್ತು ಬಿ ಖಾತಾ ನೀಡಲು ತೀರ್ಮಾನ ಕೈಗೊಂಡಿದೆ. ಉತ್ತರ ಕರ್ನಾಟಕ ಪ್ರವಾಸಿ ವೃತ್ತ ಪಿಪಿಪಿ ಮಾದರಿಯಲ್ಲಿ ೧೬೬.೨೨ ಕೋಟಿ ಅಂದಾಜು ಮೊತ್ತದಲ್ಲಿ ಅಭಿವೃದ್ಧಿ ಗೆ ಕ್ಯಾಬಿನೆಟ್ ಅನುಮೋದನೆ ನೀಡಿದೆ. ಬಾದಾಮಿ, ಐಹೊಳೆ, ಹಂಪಿ, ಪಟ್ಟದಕಲ್ಲು, ಬಿಜಾಪುರ ಒಳಗೊಂಡ ಉತ್ತರ ಕರ್ನಾಟಕ ಪ್ರವಾಸಿ ವೃತ್ತವನ್ನು ಪಿಪಿಪಿ ಮಾದರಿಯಲ್ಲಿ ಅಭಿವೃದ್ದಿಪಡಿಸಲು ಕ್ಯಾಬಿನೆಟ್ ಒಪ್ಪಿಗೆ ನೀಡಿದೆ.

publive-image

ಆಯುಷ್ ಇಲಾಖೆಯ ಆಯುರ್ವೇದ, ಸಿದ್ಧ ಮತ್ತು ಯುನಾನಿ (ASU) ಔಷಧಗಳ ಅಮಲುಜಾರಿ ವಿಭಾಗ ಹಾಗೂ ಪರೀಕ್ಷಾ ಪ್ರಯೋಗಾಲಯವನ್ನು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ (FDA) ಇಲಾಖೆಯ ಜೊತೆಗೆ ವಿಲೀನಗೊಳಿಸಲು ಕ್ಯಾಬಿನೆಟ್ ಅನುಮೋದನೆ ನೀಡಿದೆ. ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಗೊಳಪಡುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ ಸಹಾಯಕ ಪ್ರಾಧ್ಯಾಪಕ ಹುದ್ದೆಗಳ 2021ನೇ ಸಾಲಿನ ನೇರ ನೇಮಕಾತಿ ಪ್ರಕ್ರಿಯೆಯಲ್ಲಿ, ಹಿಂದುಳಿದ ವರ್ಗಗಳಿಗೆ ಮೀಸಲಿರಿಸಲಾಗಿದ್ದು ಭರ್ತಿ ಆಗದೆ ಖಾಲಿ ಉಳಿದಿರುವ ಉರ್ದು ಭಾಷಾ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ಸಾಮಾನ್ಯ ಅಭ್ಯರ್ಥಿಗಳಿಂದ ಒಂದು ಬಾರಿಯ ಕ್ರಮವಾಗಿ ಭರ್ತಿ ಮಾಡಲು ಕ್ಯಾಬಿನೆಟ್ ಅನುಮೋದನೆ ನೀಡಿದೆ.

ಇದನ್ನೂ ಓದಿ: ಮಾರ್ಡನ್ ಯುವತಿಯರೇ ನಿಮಗಾಗಿಯೇ ಸುವರ್ಣಾವಕಾಶ.. ಈ ಶೋನಲ್ಲಿ ಭಾಗವಹಿಸುವುದು ಹೇಗೆ ಗೊತ್ತಾ?

ನ್ಯಾಯ ವಿಜ್ಞಾನ ಪ್ರಯೋಗಾಲಯಗಳ 32 ನಿರ್ದೇಶನಾಲಯಕ್ಕೆ ಅವಶ್ಯವಿರುವ ಸಂಖ್ಯೆಯ ಮೊಬೈಲ್ ಪೋರೆನ್ಸಿಕ್ ವಾಹನಗಳನ್ನು (Fabrication + SOC ಗಳೊಂದಿಗೆ) 2.20.40 ಮೊತ್ತದಲ್ಲಿ ಖರೀದಿಸುವ ಬಗ್ಗೆ ಕ್ಯಾಬಿನೆಟ್ ಅನುಮೋದನೆ ಕ್ರಿಮಿನಲ್ ಕಾನೂನು ತಿದ್ದುಪಡಿ ಅಧ್ಯಾದೇಶ, 1944 (ಕರ್ನಾಟಕ ತಿದ್ದುಪಡಿ) ವಿಧೇಯಕ, 2022”ನ್ನು ಹಿಂಪಡೆಯಲಾಗಿದೆ.

ಫುಡ್ ಪಾರ್ಕ್ ಸ್ಥಾಪನೆಗೆ ಕ್ಯಾಬಿನೆಟ್ ಅನುಮೋದನೆ

ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಯಳವಟ್ಟಿ ಗ್ರಾಮದಲ್ಲಿ 28.3 ಎಕರೆ ಪ್ರದೇಶದಲ್ಲಿ ಮಾವು ಮತ್ತು ಇತರೆ ತೋಟಗಾರಿಕೆ ಬೆಳೆಗಳ ಬಹು ಉತ್ಪನ್ನಗಳ ನಿರ್ವಹಣೆ, ಸಂಗ್ರಹಣೆ, ಸಂಸ್ಕರಣೆ ಮತ್ತು ಸಂರಕ್ಷಣಾ ಘಟಕ ಸ್ಥಾಪನೆ ಸಾರ್ವಜನಿಕ ಖಾಸಗಿ ಸಹಭಾಗಿತ್ವ (PPP) ಮಾದರಿಯಡಿ 23.5 ಕೋಟಿಗಳ ಮೊತ್ತದಲ್ಲಿ ಸ್ಥಾಪಿಸಲು ಅನುಮೋದನೆ ನೀಡಲಾಗಿದೆ. ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲ್ಲೂಕಿನ ಸಿರಿವಾರ ಗ್ರಾಮದಲ್ಲಿ 194-33 ಎಕರೆ ಪ್ರದೇಶದಲ್ಲಿ ತೋಟಗಾರಿಕೆ ತಂತ್ರಜ್ಞಾನ ಪಾರ್ಕ್ ಅನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವ (PPP) ಮಾದರಿಯಡಿ ಸ್ಥಾಪಿಸಲು ಅನುಮೋದನೆ ನೀಡಲಾಗಿದೆ.

ಬೆಂಗಳೂರು ನಗರದ ಸಂಸ್ಕರಿಸಿದ ತ್ಯಾಜ್ಯ ನೀರನ್ನು ಕೋಲಾರ ಜಿಲ್ಲೆಯ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಒಟ್ಟು 126 ಕೆರೆಗಳಿಗೆ ನೀರು ತುಂಬಿಸುವ ಏತ ನೀರಾವರಿ ಯೋಜನೆಯ ಕಾಮಗಾರಿಯ 5 ವರ್ಷಗಳ ಪೋಷಣೆ ಮತ್ತು ನಿರ್ವಹಣೆ (O&M) ಕಾಮಗಾರಿಯನ್ನು ರೂ.128.00 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನಾಲ್ಕು ವಸತಿ ಶಾಲೆ/ ಕಾಲೇಜುಗಳ ಕಟ್ಟಡ ನಿರ್ಮಾಣ ಕಾಮಗಾರಿಗೆ ಒಟ್ಟು 264.00 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲ್ಲೂಕಿನ ಕಿತ್ತೂರು ಕೋಟೆ ಆವರಣದಲ್ಲಿ ಥೀಮ್ ಪಾರ್ಕ್ ನಿರ್ಮಾಣ ಕಾಮಗಾರಿಯನ್ನು ರೂ.30 ಕೋಟಿ ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆ, ಚಿಕ್ಕಬಳ್ಳಾಪುರ ತಾಲ್ಲೂಕು, ಮಂಡಿಕಲ್ಲು ಹೋಬಳಿ, ಯರಮಾರೇನಹಳ್ಳಿ ಗ್ರಾಮದಲ್ಲಿ 5-23 ಎಕರೆ/ಗುಂಟೆ ಸರ್ಕಾರಿ ಬೀಳು ಜಮೀನನ್ನು ಅಕ್ಷಯ ಪಾತ್ರೆ ಅಡುಗೆ ಮನೆ ಮತ್ತು ಆರ್ಥಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದ ಗ್ರಾಮೀಣ ಮಕ್ಕಳಿಗೆ ಶಾಲಾ ಕಟ್ಟಡ ನಿರ್ಮಾಣಕ್ಕಾಗಿ ಇಸ್ಕಾನ್ ಬೆಂಗಳೂರು ಇವರಿಗೆ ಮಂಜೂರು ಮಾಡಲು ಕ್ಯಾಬಿನೆಟ್ ಅನುಮೋದನೆ ನೀಡಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೊಡ್ಡಬಳ್ಳಾಪುರ ತಾಲ್ಲೂಕು, ವೀರಭದ್ರನ ಪಾಳ್ಯ ಗ್ರಾಮದ ಸ.ನಂ. 66ರಲ್ಲಿ 15 ಗುಂಟೆ ಖರಾಬು ಜಮೀನನ್ನು ಕಾಂಗ್ರೆಸ್ ಕಛೇರಿ ಕಟ್ಟಡ ನಿರ್ಮಾಣಕ್ಕಾಗಿ ಕಾಂಗ್ರೆಸ್ ಭವನ ಟ್ರಸ್ಟ್‌ ಇವರಿಗೆ ಗುತ್ತಿಗೆ ನೀಡಲು ಕ್ಯಾಬಿನೆಟ್ ಅನುಮೋದನೆ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಕೆಮ್ಮಿಂಜೆ ಗ್ರಾಮದ ಸ.ನಂ. 138/4ರಲ್ಲಿ 3 ಎಕರೆ ಗೋಮಾಳ ಜಮೀನನ್ನು ಬಂಟರ ಸಂಘ, ಪುತ್ತೂರು ತಾಲ್ಲೂಕು ಇವರಿಗೆ ಮಂಜೂರು ಮಾಡಲು ಕ್ಯಾಬಿನೆಟ್ ಅನುಮೋದನೆ ನೀಡಿದೆ.

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವತಿಯಿಂದ ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅಳವಡಿಸಲಾಗಿರುವ ಸಮರ್ಪಕವಾಗಿ ಕಾರ್ಯನಿರ್ವಹಿಸದ 1,530 ಟೆಲಿಮೆಟ್ರಿಕ್ ಮಳೆ ಮಾಪನ ಕೇಂದ್ರಗಳ ಉಪಕರಣಗಳನ್ನು ರೂ.19.89 ಕೋಟಿಗಳ ಅಂದಾಜು ಮೊತ್ತದಲ್ಲಿ ಬದಲಿಸಿ ಹೊಸದಾಗಿ ಸ್ಥಾಪಿಸುವ ಬಗ್ಗೆ ಕ್ಯಾಬಿನೆಟ್ ಅನುಮೋದನೆ ನೀಡಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment