newsfirstkannada.com

Anna Bhagya: 5 ಕೆಜಿ ಅಕ್ಕಿ ಬದಲು ‘ಹಣ ಭಾಗ್ಯ’ಕ್ಕೆ ಚಾಲನೆ.. ಇವತ್ತಿನಿಂದ ನಿತ್ಯ 4 ಜಿಲ್ಲೆಗಳ ಫಲಾನುಭವಿಗಳಿಗೆ ಹಣ ಸಂದಾಯ

Share :

Published July 11, 2023 at 8:01am

Update July 11, 2023 at 8:02am

    ನಿನ್ನೆ 2 ಜಿಲ್ಲೆಗಳ BPL ಕಾರ್ಡ್​​ದಾರರಿಗೆ ಹಣ ವರ್ಗಾವಣೆ

    4.42 ಕೋಟಿ ಫಲಾನುಭವಿಗಳಿಗೆ ತಲಾ 170 ರೂ. ಸಂದಾಯ

    ಕೇಂದ್ರ ಬಡವರ ವಿರೋಧಿಯಾಗಿ ಡರ್ಟಿ ಪಾಲಿಟಿಕ್ಸ್ ಮಾಡ್ತಿದೆ-CM

ಬೆಂಗಳೂರು: ರಾಜ್ಯ ಸರ್ಕಾರದ ‘ಅನ್ನಭಾಗ್ಯ’ ಯೋಜನೆ ಅಡಿಯಲ್ಲಿ 5 ಕೆಜಿ ಅಕ್ಕಿ ಬದಲಾಗಿ ಫಲಾನುಭವಿಗಳಿಗೆ ನಗದು ಹಣ ನೀಡುವ ಕಾರ್ಯಕ್ರಮಕ್ಕೆ ಚಾಲನೆ ಸಿಕ್ಕಿದೆ. ಸೋಮವಾರ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

2 ಜಿಲ್ಲೆಗಳ ಫಲಾನುಭವಿಗಳಿಗೆ ಹಣ ವರ್ಗಾವಣೆ

ಸಾಂಕೇತಿಕವಾಗಿ ಮೈಸೂರು ಮತ್ತು ಕೋಲಾರ ಜಿಲ್ಲೆಗಳ ಫಲಾನುಭವಿಗಳಿಗೆ ಡಿಬಿಟಿ (ನೇರ ನಗದು ವರ್ಗಾವಣೆ) ಮೂಲಕ ಹಣ ಸಂದಾಯ ಮಾಡಿದರು. ಇವತ್ತಿನಿಂದ ಪ್ರತಿ ದಿನ ನಾಲ್ಕು ಜಿಲ್ಲೆಗಳಂತೆ ಮುಂದಿನ 10 ದಿನಗಳಲ್ಲಿ ಎಲ್ಲಾ ಜಿಲ್ಲೆಗಳ ಫಲಾನುಭವಿಗಳಿಗೆ ಹಣ ಸಂದಾಯ ಆಗಲಿದೆ.

ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಮುಖ್ಯಮಂತ್ರಿ, ಅನ್ನಭಾಗ್ಯ ಯೋಜನೆ ಘೋಷಣೆಯಾದ ತಕ್ಷಣ ರಾಜ್ಯಕ್ಕೆ ಅಕ್ಕಿ ಕೊಡುವುದನ್ನು ಬಂದ್ ಮಾಡುವ ಮೂಲಕ ಕೇಂದ್ರದ ಬಿಜೆಪಿ ಸರ್ಕಾರ ಬಡವರ ವಿರೋಧಿಯಾಗಿ ಡರ್ಟಿ ಪಾಲಿಟಿಕ್ಸ್ ಮಾಡುತ್ತಿದೆ. ಅಕ್ಕಿಯನ್ನು ನಮಗೆ ಪುಕ್ಕಟ್ಟೆಯಾಗಿ ಕೊಡುತ್ತಿರಲಿಲ್ಲ. ಕೆ.ಜಿ ಗೆ 34 ರೂ. ನಮ್ಮಿಂದ ತೆಗೆದುಕೊಳ್ಳುತ್ತಿದ್ದರು.

ಕನ್ನಡ ನಾಡಿನ ಜನರಿಗೆ ಅಕ್ಕಿ ಕೊಡುವುದನ್ನು ಬಂದ್ ಮಾಡಿದ ಕೇಂದ್ರ ಸರ್ಕಾರ ಬಳಿಕ ಇ-ಹರಾಜು ಮೂಲಕ ಆ ಅಕ್ಕಿಯನ್ನು ಹರಾಜು ಹಾಕಲು ಮುಂದಾಯಿತು. ಆದರೆ ಈಗ ಇ-ಹರಾಜು ಮೂಲಕ ಅಕ್ಕಿ ಖರೀದಿಸಲು ಯಾರೂ ಮುಂದೆ ಬರುತ್ತಿಲ್ಲ ಎಂದು ಮಾಧ್ಯಮಗಳು ವರದಿ ಮಾಡಿವೆ. ಇದನ್ನು ನಾವು ಡರ್ಟಿ ಪಾಲಿಟಿಕ್ಸ್ ಅಂತ ಕರೆಯಬೇಕೋ ಬೇಡವೋ? ಇದನ್ನು ಕರ್ನಾಟಕದ ಜನತೆಯ ವಿರುದ್ಧದ ದ್ವೇಷದ ರಾಜಕಾರಣ ಎಂದು ಕರೆಯಬೇಕೋ ಬೇಡವೋ? ಎಂದು ಪ್ರಶ್ನೆ ಮಾಡಿದರು.

4 ಕೋಟಿ 42 ಲಕ್ಷ ಫಲಾನುಭವಿಗಳಿಗೆ ಈಗ ತಲಾ 170 ರೂ. ನೇರವಾಗಿ ಅವರ ಖಾತೆಗೆ ವರ್ಗಾವಣೆ ಆಗುತ್ತಿದೆ. ಬಡವರು, ಮಧ್ಯಮ ವರ್ಗದವರು ಎರಡು ಹೊತ್ತು ಅನ್ನ ತಿಂದರೆ ಬಿಜೆಪಿಗೆ ಯಾಕೆ ಹೊಟ್ಟೆಯುರಿ? ನಾಡಿನ ಜನತೆ ತಮ್ಮ ಖಾತೆಗೆ ಬರುವ ಹಣವನ್ನು ಊಟ, ಆಹಾರಕ್ಕಾಗಿ ಖರ್ಚು ಮಾಡಿ ನೆಮ್ಮದಿಯ ಬದುಕು ನಡೆಸಬೇಕು ಎಂದು ಮನವಿ ಮಾಡುತ್ತೇನೆ ಎಂದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Anna Bhagya: 5 ಕೆಜಿ ಅಕ್ಕಿ ಬದಲು ‘ಹಣ ಭಾಗ್ಯ’ಕ್ಕೆ ಚಾಲನೆ.. ಇವತ್ತಿನಿಂದ ನಿತ್ಯ 4 ಜಿಲ್ಲೆಗಳ ಫಲಾನುಭವಿಗಳಿಗೆ ಹಣ ಸಂದಾಯ

https://newsfirstlive.com/wp-content/uploads/2023/07/annabhaghya.jpg

Load More