5 ಗ್ಯಾರಂಟಿಗಳನ್ನು ಒಂದೊಂದಾಗಿ ಜಾರಿ ಮಾಡಲು ಮುಂದಾದ ಕಾಂಗ್ರೆಸ್..!
200 ಯೂನಿಟ್ ಉಚಿತ ವಿದ್ಯುತ್ ಯೋಜನೆಗೆ ಅರ್ಜಿ ಸಲ್ಲಿಕೆ ಮುಂದೂಡಿಕೆ
ಗೃಹಜ್ಯೋತಿ ಯೋಜನೆಗೆ ನೋಂದಣಿ ಮಾಡೋದು ಹೇಗೆ? ಈ ಸ್ಟೋರಿ ಓದಿ!
ಬೆಂಗಳೂರು: ವಿಧಾನಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್ ಸರ್ಕಾರ ನೀಡಿದ್ದ ಐದು ಗ್ಯಾರಂಟಿಗಳನ್ನು ಒಂದೊಂದಾಗಿ ಜಾರಿ ಮಾಡುತ್ತಿದೆ. ಕಾಂಗ್ರೆಸ್ ಸರ್ಕಾರವು ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಉಚಿತ ನೀಡುವ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆ ದಿನಾಂಕವನ್ನು ಮುಂದೂಡಿಕೆ ಮಾಡಲಾಗಿದೆ. ಗೃಹಜ್ಯೋತಿ ಯೋಜನೆಗೆ 18 ರಿಂದ ನೋಂದಣಿ ಪ್ರಕ್ರಿಯೆ ಶುರುವಾಗಲಿದೆ. ಫಲಾನುಭವಿಗಳು ಸೇವಾ ಸಿಂಧು ಲಿಂಕ್ ಬಳಸಿ ನೋಂದಣಿ ಮಾಡಿಕೊಳ್ಳಬಹುದಾಗಿದೆ.
https://sevasindhugs.karnataka.gov.in ಲಿಂಕ್ ಬಳಸಿ ನೋಂದಣಿ ಮಾಡಿಕೊಳ್ಳಬೇಕು. ಮೊಬೈಲ್ ಫೋನ್, ಕಂಪ್ಯೂಟರ್ಸ್, ಲ್ಯಾಪ್ ಟ್ಯಾಪ್ ಮೂಲಕ ಗೃಹಜ್ಯೋತಿ ಯೋಜನೆಗೆ ನೋಂದಣಿ ಮಾಡಬಹುದು. ಫಲಾನುಭವಿಗಳು ಆಧಾರ್ ಕಾರ್ಡ್, ಗ್ರಾಹಕರ ಐಡಿಗಳ ಮಾಹಿತಿಗಳನ್ನು ನೋಂದಣಿ ಮಾಡಬೇಕು. ಬೆಂಗಳೂರು ಒನ್, ಗ್ರಾಮ ಒನ್ ಮತ್ತು ಕರ್ನಾಟಕ ಒನ್ ಕೇಂದ್ರ, ಯಾವುದೇ ವಿದ್ಯುತ್ ಕಛೇರಿಯಲ್ಲಿ ನೋಂದಣಿ ಮಾಡಬಹುದಾಗಿದೆ. ಹೆಚ್ಚಿನ ಮಾಹಿತಿಗೆ ವಿದ್ಯುಚ್ಛಕ್ತಿ ಕಛೇರಿ ಅಥವಾ 24×7 ಸಹಾಯವಾಣಿ-1912ಗೆ ಕರೆ ಮಾಡಬಹುದು. ಈ ಯೋಜನೆಯು 2023ರ ಆಗಸ್ಟ್ 1 ರಿಂದ ಜಾರಿಗೆ ಬರಲಿದೆ.
ಜುಲೈ 1 ರಿಂದ ಅನ್ವಯವಾಗುವಂತೆ ರಾಜ್ಯದ ಪ್ರತಿ ಮನೆಗೆ ಗರಿಷ್ಠ 200 ಯುನಿಟ್ ವರೆಗೆ ವಿದ್ಯುತ್ ಅನ್ನು ಉಚಿತವಾಗಿ ನೀಡಲು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಿದ್ದೇವೆ.
ಈ ಯೋಜನೆಯ ದುರ್ಬಳಕೆ ತಡೆಯಲು ಫಲಾನುಭವಿಗಳು ಹಿಂದಿನ ಒಂದು ವರ್ಷದ ಅವಧಿಯಲ್ಲಿ ಬಳಕೆ ಮಾಡಿರುವ ವಿದ್ಯುತ್ ಸರಾಸರಿಯನ್ನು ಗಣನೆಗೆ ತೆಗೆದುಕೊಂಡು, ಅದರ ಜೊತೆಗೆ… pic.twitter.com/6uW9OWCetT
— Siddaramaiah (@siddaramaiah) June 2, 2023
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ