newsfirstkannada.com

Rain Update: ಆಗಸ್ಟ್​ 3ರವರೆಗೆ ರಾಜ್ಯಾದ್ಯಂತ ಭಾರೀ ಮಳೆಯ ಮುನ್ಸೂಚನೆ.. ಈ ಜಿಲ್ಲೆಯವರು ಜಾಗರೂಕರಾಗಿರಿ

Share :

28-07-2023

    ಆಗಸ್ಟ್ 3ವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ

    ಜುಲೈನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ

    ಸೆಪ್ಟೆಂಬರ್ ಮತ್ತೆ ಮಳೆಯಾಗುವ ನಿರೀಕ್ಷೆಯಿದೆ

ರಾಜ್ಯದಲ್ಲಿ ಮಳೆಯಾರ್ಭಟ ಮುಂದುವರಿದಿದೆ. ಕೆಲವು ಜಿಲ್ಲೆಗಳಲ್ಲಿ ನಿರಂತರ ಮಳೆಯಾಗುತ್ತಿದೆ. ಹೀಗಾಗಿ ಆಗಸ್ಟ್ 3ವರೆಗೆ ರಾಜ್ಯಾದ್ಯಂತ ಭಾರೀ ಮಳೆಯಾಗುವ ಮುನ್ಸೂಚನೆ ಸಿಕ್ಕಿದ್ದು, ಎಚ್ಚರಿಕೆ ಮಾಹಿತಿಯನ್ನು ರವಾನಿಸಲಾಗಿದೆ.

ರಾಜ್ಯದ ಜನರು ಜೂನ್ ನಲ್ಲಿ ಮಳೆ ಕೊರತೆ ಅನುಭವಿಸಿದ್ದರು. ಆದರೆ ಜುಲೈನಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಆಗಿದೆ. ಇನ್ನು ಆಗಸ್ಟ್ ಹಾಗೂ ಸೆಪ್ಟೆಂಬರ್ ತಿಂಗಳಿನಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.

ಆಗಸ್ಟ್ 3ರವರೆಗೆ ಕರಾವಳಿ, ಮಲೆನಾಡು ಭಾಗ ವಾಡಿಕೆಗಿಂತ ಪ್ರತಿದಿನ 2 cm ಮಳೆ ಸಾಧ್ಯತೆ. ಉತ್ತರ ಒಳನಾಡಿನಲ್ಲಿ ಅನೇಕ‌ ಜಿಲ್ಲೆಗಳಿಗೆ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ. ಉಳಿದ ಜಿಲ್ಲೆಯಲ್ಲಿ ವಾಡಿಕೆಗಿಂತ ತುಸು ಕಡಿಮೆ ಮಳೆಯಾಗುವ ಸಾಧ್ಯತೆ ಇದೆ.

ಇನ್ನು ಆಗಸ್ಟ್ 04ರಿಂದ ಅಗಸ್ಟ್ 10ರವರೆಗೆ ಇಡೀ ರಾಜ್ಯದಲ್ಲಿ ಮಳೆ ಪ್ರಮಾಣ ತಗ್ಗಲಿದೆ. ಆ. 11ರಿಂದ 17ರ ವರೆಗೆ ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲೂ ಮಳೆ ಮತ್ತೆ ಹೆಚ್ಚಾಗಿ ಬರಲಿದೆ. ದಕ್ಷಿಣ ಒಳನಾಡಿನ, ಕೋಲಾರ, ಚಿಕ್ಕಬಳ್ಳಾಪುರ, ಬಳ್ಳಾರಿ, ವಿಜಯನಗರ, ಚಿಕ್ಕಮಗಳೂರು ವಾಡಿಕೆ ಮಳೆ ಬೀಳಲಿದೆ ಎಂಬ ಮುನ್ಸೂಚನೆ ಹೊರಡಿಸಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Rain Update: ಆಗಸ್ಟ್​ 3ರವರೆಗೆ ರಾಜ್ಯಾದ್ಯಂತ ಭಾರೀ ಮಳೆಯ ಮುನ್ಸೂಚನೆ.. ಈ ಜಿಲ್ಲೆಯವರು ಜಾಗರೂಕರಾಗಿರಿ

https://newsfirstlive.com/wp-content/uploads/2023/07/Heavy-Rain_Karnataka.jpg

Load More