newsfirstkannada.com

BREAKING: ಸಿಎಂ ಸಿದ್ದರಾಮಯ್ಯಗೆ ₹10 ಸಾವಿರ ದಂಡ ಹಾಕಿದ ಹೈಕೋರ್ಟ್; ವಿಚಾರಣೆಗೆ ಹಾಜರಾಗಲು ಆದೇಶ

Share :

Published February 6, 2024 at 12:26pm

Update February 6, 2024 at 12:29pm

    ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್‌ 10 ಸಾವಿರ ರೂಪಾಯಿ ದಂಡ

    ಮುಖ್ಯಮಂತ್ರಿ ಪರ ವಕೀಲರು ಸಲ್ಲಿಸಿದ್ದ ಮನವಿಯನ್ನು ತಿರಸ್ಕಾರ

    ಜನ ನಾಯಕರಾದವರು ಮೊದಲು ಕಾನೂನು ಪಾಲಿಸಬೇಕು

ಬೆಂಗಳೂರು: ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್‌ 10 ಸಾವಿರ ರೂಪಾಯಿ ದಂಡ ಹಾಕಿದ್ದು, ಮುಖ್ಯಮಂತ್ರಿ ಪರ ವಕೀಲರು ಸಲ್ಲಿಸಿದ್ದ ಮನವಿಯನ್ನು ತಿರಸ್ಕರಿಸಲಾಗಿದೆ. ಜನ ನಾಯಕರಾದವರು ಮೊದಲು ಕಾನೂನು ಪಾಲಿಸಬೇಕು ಎಂದಿದ್ದು, ವಿಚಾರಣೆಗೆ ಹಾಜರಾಗಲು ಮಹತ್ವದ ಆದೇಶ ನೀಡಿದೆ.

2022ರ ಏಪ್ರಿಲ್ 14ರಂದು ನಗರದ ರೇಸ್ ವ್ಯೂ ಹೋಟೆಲ್ ಬಳಿ ಕಾಂಗ್ರೆಸ್ ನಾಯಕರ ಪ್ರತಿಭಟನೆ ಹಮ್ಮಿಕೊಂಡಿದ್ದರು. ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಅಂದಿನ ಸಚಿವ ಕೆ.ಎಸ್ ‌ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಹೋರಾಟ ನಡೆಸಿದ್ದರು.

ಕಾಂಗ್ರೆಸ್ ನಾಯಕರ ಪ್ರತಿಭಟನೆಯಿಂದ ಸಾರ್ವಜನಿಕ ಮುಕ್ತ ಸಂಚಾರಕ್ಕೆ ಅಡ್ಡಿಯುಂಟಾಗಿತ್ತು. ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡಿದ ಆರೋಪದಲ್ಲಿ ಹೈಗ್ರೌಂಡ್ಸ್‌ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಆರೋಪಿಗಳ ವಿರುದ್ಧ ಜನಪ್ರತಿನಿಧಿಗಳ ಕೋರ್ಟ್ ಕೂಡ NBW ಜಾರಿ ಮಾಡಿತ್ತು. ಈ ವಾರಂಟ್ & ವಿಚಾರಣೆ ಪ್ರಕ್ರಿಯೆ ರದ್ದು ಕೋರಿ ಸಿಎಂ ಸಿದ್ದರಾಮಯ್ಯ, ಸಚಿವರಾದ ರಾಮಲಿಂಗಾ ರೆಡ್ಡಿ, ಎಂ.ಬಿ.‌ಪಾಟೀಲ್ & ಎಎಐಸಿಸಿ ಮುಖಂಡ ರಣದೀಪ್ ಸಿಂಗ್ ಸುರ್ಜೇವಾಲ ಅವರು ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ: ಬಿಜೆಪಿ ಸಂಸದರಿಗೆ ಸಿಎಂ ಸಿದ್ದರಾಮಯ್ಯ ಪತ್ರ; ‘ದೆಹಲಿ ಚಲೋ’ಗೆ ಬೆಂಬಲ ನೀಡುವಂತೆ ಮನವಿ

ಕಾಂಗ್ರೆಸ್ ನಾಯಕರ ಅರ್ಜಿಯನ್ನು ವಜಾಗೊಳಿಸಲಾಗಿದ್ದು, ಹೈಕೋರ್ಟ್‌ ತಲಾ 10 ಸಾವಿರ ರೂಪಾಯಿ ದಂಡ ಹಾಕಿ ಆದೇಶಿಸಿದೆ. ಈ ವಿಚಾರಣೆ ವೇಳೆ ಮೇಲ್ಮನವಿ ಸಲ್ಲಿಸುವವರೆಗೆ ಆದೇಶಕ್ಕೆ ತಡೆ ನೀಡಲು ಸಿದ್ದರಾಮಯ್ಯ ಪರ ವಕೀಲರ ಮನವಿ ಮಾಡಿದರು. ಇದಕ್ಕೆ ಗರಂ ಆದ ಹೈಕೋರ್ಟ್, ಜನಪ್ರತಿನಿಧಿಗಳು ಕಾನೂನು ಪಾಲಿಸಿದರೆ ಇದ್ರೆ ಜನ ಪಾಲಿಸುತ್ತಾರಾ? ಸಾರ್ವಜನಿಕ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದರೆ ಜನರಿಗೆ ಸಂಕಷ್ಟ. ಸಿಟಿ ಲೈಫ್ ಈಸ್ ಟಾರ್ಚರ್,‌ ಪ್ರತಿಭಟನೆಗಳಿಂದ‌ ಜನರಿಗೆ ಮತ್ತಷ್ಟು ಕಷ್ಟವಾಗಿದೆ. ಜನಪ್ರತಿನಿಧಿಯಾದ ಕಾರಣಕ್ಕೆ ರಸ್ತೆ ಅಡ್ಡಗಟ್ಟುವುದನ್ನು ಒಪ್ಪಲು ಸಾಧ್ಯವಿಲ್ಲ. ಜನ ನಾಯಕರಾದವರು ಮೊದಲು ಕಾನೂನು ಪಾಲಿಸಬೇಕು. ಇದೇ ಮಾರ್ಚ್‌ 6ಕ್ಕೆ ಜನಪ್ರತಿನಿಧಿಗಳ ನ್ಯಾಯಾಲಯದ ಮುಂದೆ ಹಾಜರಾಗಲು ಸೂಚನೆ ನೀಡಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

BREAKING: ಸಿಎಂ ಸಿದ್ದರಾಮಯ್ಯಗೆ ₹10 ಸಾವಿರ ದಂಡ ಹಾಕಿದ ಹೈಕೋರ್ಟ್; ವಿಚಾರಣೆಗೆ ಹಾಜರಾಗಲು ಆದೇಶ

https://newsfirstlive.com/wp-content/uploads/2024/02/SIDDARAMAIAH-19.jpg

Load More