newsfirstkannada.com

BREAKING: ಪಿಎಸ್‌ಐ ನೇಮಕಾತಿ ಮರು ಪರೀಕ್ಷೆಗೆ ಆದೇಶ; ಹೈಕೋರ್ಟ್ ನೀಡಿದ ಸೂಚನೆಗಳೇನು?

Share :

10-11-2023

    ಮರು ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ

    ರಾಜ್ಯ ಸರ್ಕಾರದ ಆದೇಶ ರದ್ದು ಕೋರಿ ಕಾನೂನು ಹೋರಾಟ

    ಮರು ಪರೀಕ್ಷೆಯನ್ನ ಸ್ವಾತಂತ್ರ್ಯ ಏಜೆನ್ಸಿಯಿಂದ ನಡೆಸಲು ಸೂಚನೆ

ಬೆಂಗಳೂರು: ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದ್ದ ಪಿಎಸ್‌ಐ ನೇಮಕಾತಿ ಪರೀಕ್ಷೆಯ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ವಾದ, ಪ್ರತಿವಾದ ಆಲಿಸಿದ್ದ ನ್ಯಾಯಾಲಯ ಮರು ಪರೀಕ್ಷೆ ನಡೆಸಲು ಸರ್ಕಾರಕ್ಕೆ ಸೂಚನೆ ನೀಡಿದೆ.

ರಾಜ್ಯ ಸರ್ಕಾರದ ಆದೇಶ ರದ್ದು ಕೋರಿ ಎನ್.ವಿ ಚಂದನ್ ಸೇರಿ 100 ಮಂದಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆಯ್ಕೆ ಪಟ್ಟಿಯಲ್ಲಿ ಹೆಸರಿದ್ದ 100ಕ್ಕೂ ಅಧಿಕ ಅಭ್ಯರ್ಥಿಗಳು ನ್ಯಾಯಾಲಯದ ಮೊರೆ ಹೋಗಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾ.ಪಿ.ಎಸ್ ದಿನೇಶ್ ಕುಮಾರ್ ಅವರ ನೇತೃತ್ವದ ವಿಭಾಗೀಯ ಪೀಠ ಮಹತ್ವದ ಆದೇಶ ನೀಡಿದೆ.

ರಾಜ್ಯ ಸರ್ಕಾರವು ಸ್ವತಂತ್ರ ಸಂಸ್ಥೆಯಿಂದ ಹೊಸದಾಗಿ ಲಿಖಿತ ಪರೀಕ್ಷೆ ನಡೆಸಬಹುದು. ಪಾರದರ್ಶಕವಾಗಿ ಪರೀಕ್ಷೆ ನಡೆಸುವುದನ್ನು ಸರ್ಕಾರ ಖಾತರಿ ಪಡಿಸಬೇಕು. ಮರು ಪರೀಕ್ಷೆಯನ್ನ ಸ್ವಾತಂತ್ರ್ಯ ಏಜೆನ್ಸಿಯಿಂದ ನಡೆಸಲು ಹೈಕೋರ್ಟ್‌ ಸೂಚನೆ ನೀಡಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

BREAKING: ಪಿಎಸ್‌ಐ ನೇಮಕಾತಿ ಮರು ಪರೀಕ್ಷೆಗೆ ಆದೇಶ; ಹೈಕೋರ್ಟ್ ನೀಡಿದ ಸೂಚನೆಗಳೇನು?

https://newsfirstlive.com/wp-content/uploads/2023/06/HIGHCOURT.jpg

Load More