newsfirstkannada.com

ಸಚಿವ ಜಮೀರ್ ಅಹಮದ್ ಖಾನ್‌ಗೆ ಶಾಕ್ ಕೊಟ್ಟ ಹೈಕೋರ್ಟ್; ACB ತನಿಖೆಗೆ ತಡೆಯಾಜ್ಞೆ ನೀಡಲು ನಕಾರ

Share :

20-11-2023

    ACB ತನಿಖೆ ರದ್ದು ಕೋರಿದ್ದ ಸಚಿವ ಜಮೀರ್ ಅಹಮದ್ ಖಾನ್

    ಜಮೀರ್ ಅಹಮದ್ ಖಾನ್ ಅರ್ಜಿ ವಜಾಗೊಳಿಸಿದ‌ ಹೈಕೋರ್ಟ್

    80.44 ಕೋಟಿ ಆದಾಯ ಮೀರಿ ಅಕ್ರಮ ಆಸ್ತಿ ಗಳಿಸಿರೋ ಆರೋಪ‌

ಬೆಂಗಳೂರು: ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಪ್ರಕರಣದಲ್ಲಿ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್‌ ಖಾನ್ ಅವರಿಗೆ ಭಾರೀ ಹಿನ್ನಡೆಯಾಗಿದೆ. ಸಚಿವ ಜಮೀರ್ ಅಹಮದ್ ಅರ್ಜಿ ವಜಾಗೊಳಿಸಿರೋ ಹೈಕೋರ್ಟ್ ಇಂದು ಮಹತ್ವದ ಆದೇಶ ನೀಡಿದೆ.

ಕಳೆದ 2022ರ ಮೇ ತಿಂಗಳಲ್ಲಿ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಜಮೀರ್ ಅಹ್ಮದ್ ಮನೆಯ ಮೇಲೆ ದಾಳಿ ಮಾಡಿತ್ತು. ಆದಾಯ ಮೀರಿ ಆಸ್ತಿ ಗಳಿಸಿದ ಆರೋಪದಲ್ಲಿ ಎಫ್‌ಐಆರ್ ಕೂಡ ದಾಖಲಿಸಿತ್ತು. ಎಸಿಬಿ ದೂರಿನಲ್ಲಿ 80.44 ಕೋಟಿ ಆದಾಯ ಮೀರಿ ಅಕ್ರಮ ಆಸ್ತಿ ಆರೋಪ‌ ಮಾಡಲಾಗಿದೆ. ಪ್ರಮುಖವಾಗಿ ಶೇಕಡಾ 2031ರಷ್ಟು ಅಕ್ರಮ ಆಸ್ತಿ ಗಳಿಸಿದ್ದಾರೆಂದು ಜಮೀರ್ ಅವರ ವಿರುದ್ಧ ಕೇಸ್ ದಾಖಲಿಸಲಾಗಿತ್ತು.

ಆದಾಯ ಮೀರಿ ಆಸ್ತಿ ಗಳಿಸಿದ ಈ ಪ್ರಕರಣದ ತನಿಖೆ ರದ್ದು ಕೋರಿ ಸಚಿವ ಜಮೀರ್ ಅಹಮದ್ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ಸಚಿವ ಜಮೀರ್ ಅವರ ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ.

ಸಚಿವ ಜಮೀರ್ ಅಹಮದ್‌ ವಿರುದ್ಧದ ಪ್ರಕರಣದಲ್ಲಿ ಈ ಹಿಂದೆ ಹೈಕೋರ್ಟ್ ಎಸಿಬಿ ತನಿಖೆಗೆ ತಡೆಯಾಜ್ಞೆ ನೀಡಲು ನಿರಾಕರಿಸಿತ್ತು. ಈ ಆದೇಶವನ್ನು ಜಮೀರ್ ಅಹ್ಮದ್ ಖಾನ್ ಅವರು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಬಾಕಿ ಇದೆ. ಹೀಗಾಗಿ ಹೈಕೋರ್ಟ್ ಆದೇಶ ತಡೆ ಹಿಡಿಯುವಂತೆ ಜಮೀರ್ ಪರ ವಕೀಲರು ಮನವಿ ಮಾಡಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಸಚಿವ ಜಮೀರ್ ಅವರ ಅರ್ಜಿ ವಜಾಗೊಳಿಸಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಸಚಿವ ಜಮೀರ್ ಅಹಮದ್ ಖಾನ್‌ಗೆ ಶಾಕ್ ಕೊಟ್ಟ ಹೈಕೋರ್ಟ್; ACB ತನಿಖೆಗೆ ತಡೆಯಾಜ್ಞೆ ನೀಡಲು ನಕಾರ

https://newsfirstlive.com/wp-content/uploads/2023/08/Zameer-Khan-1.jpg

Load More