newsfirstkannada.com

ಚುನಾವಣೆ ಹೊತ್ತಲ್ಲಿ ಉಪಮುಖ್ಯಮಂತ್ರಿ ಶಿವಕುಮಾರ್​ಗೆ ಬಿಗ್ ಶಾಕ್ ಕೊಟ್ಟ ಲೋಕಾಯುಕ್ತ..!

Share :

Published April 11, 2024 at 6:42am

Update April 11, 2024 at 6:47am

    ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಕಂಟಕ ಕಾದಿದೆಯಾ.?

    ಲೋಕಸಭಾ ಚುನಾವಣೆ ಹೊತ್ತಲ್ಲೇ ಶಿವಕುಮಾರ್​ಗೆ ಬಿಗ್ ಶಾಕ್

    ಆಸ್ತಿ ಮಾಡಿರುವುದರ ಬಗ್ಗೆ ದಾಖಲೆ ಕೇಳಿತಾ ಲೋಕಾಯುಕ್ತ.?

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಕರ್ನಾಟಕ ಲೋಕಾಯುಕ್ತ ಸಂಸ್ಥೆ ನೋಟಿಸ್ ಜಾರಿ ಮಾಡಿದೆ. 2013ರ ಏಪ್ರಿಲ್ 1ರಿಂದ 2018ರ ಏಪ್ರಿಲ್ 30ರವರೆಗೆ ಡಿ.ಕೆ.ಶಿವಕುಮಾರ್ ಅವರು ಗಳಿಸಿರುವ ಆಸ್ತಿ ವಿವರವನ್ನು ನೀಡುವಂತೆ ನೋಟಿಸ್​ನಲ್ಲಿ ಲೋಕಾಯುಕ್ತ ಉಲ್ಲೇಖಿಸಿದೆ.

ಈಗಾಗಲೇ ಡಿ.ಕೆ ಶಿವಕುಮಾರ್ ವಿರುದ್ಧ ವಿಚಾರಣೆ ಹಂತದಲ್ಲಿರುವ ಅಕ್ರಮ ಆಸ್ತಿ ಗಳಿಕೆ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಬಿಐಗೆ ಸಲ್ಲಿಸಿರುವ ದಾಖಲೆಗಳನ್ನು ತಮಗೂ ಸಲ್ಲಿಸುವಂತೆ ಡಿ.ಕೆ.ಶಿವಕುಮಾರ್ ಅವರಿಗೆ ನೀಡಲಾಗಿರುವ ನೋಟಿಸ್​ನಲ್ಲಿ ಲೋಕಾಯುಕ್ತ ತಿಳಿಸಿದೆ.

ಇದನ್ನೂ ಓದಿ: ಬಿಡದಿ ಮನೆಯ ‘ಹೊಸ ತೊಡಕು ಪಾಲಿಟಿಕ್ಸ್’​ಗೆ ಹೊಸ ತಿರುವು; ಕುಮಾರಸ್ವಾಮಿಗೆ ಬಿಗ್ ಶಾಕ್ ಕೊಟ್ಟ ಎಲೆಕ್ಷನ್ ಕಮಿಷನ್

2013ರ ಏಪ್ರಿಲ್ 1ರಿಂದ 2018ರ ಏಪ್ರಿಲ್ 30ರವರೆಗೆ ಡಿ.ಕೆ.ಶಿವಕುಮಾರ್ ಅವರು ಗಳಿಸಿರುವ ಆಸ್ತಿ ವಿವರವನ್ನು ನೀಡುವಂತೆ ನೋಟಿಸ್​ನಲ್ಲಿ ಉಲ್ಲೇಖಿಸಲಾಗಿದೆ. ಅಸಲಿಗೆ, ಇದೇ ಪ್ರಕರಣದಲ್ಲಿ ಸಿಬಿಐ, ಶಿವಕುಮಾರ್ ವಿರುದ್ಧ ದಾಖಲಿಸಿದಾಗ ಡಿ.ಕೆ ಶಿವಕುಮಾರ್ ಅವರು ಇದೇ ಅವಧಿಯಲ್ಲಿ ತಾವು ಗಳಿಸಿರುವ ಆಸ್ತಿ ವಿವರವನ್ನು ಸಿಬಿಐಗೆ ಸಲ್ಲಿಸಿದ್ದರು. ಅದೇ ದಾಖಲೆಗಳ ಬೇರೊಂದು ಪ್ರತಿಯನ್ನು ತಮಗೆ ಸಲ್ಲಿಸುವಂತೆ ಲೋಕಾಯುಕ್ತ ನ್ಯಾಯಾಲಯ ಈಗ ಸೂಚಿಸಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಚುನಾವಣೆ ಹೊತ್ತಲ್ಲಿ ಉಪಮುಖ್ಯಮಂತ್ರಿ ಶಿವಕುಮಾರ್​ಗೆ ಬಿಗ್ ಶಾಕ್ ಕೊಟ್ಟ ಲೋಕಾಯುಕ್ತ..!

https://newsfirstlive.com/wp-content/uploads/2024/03/Dkshivakumar-ED-Case.jpg

Load More