newsfirstkannada.com

Rain alert: ರಾಜ್ಯದಲ್ಲಿ ಇಂದಿನಿಂದ 3 ದಿನ ಮಳೆ ಸಾಧ್ಯತೆ.. ಯಾವ್ಯಾವ ಜಿಲ್ಲೆಗಳಲ್ಲಿ ವರುಣನ ಕೃಪೆ..?

Share :

Published March 22, 2024 at 9:38am

    ರಾಜ್ಯದಲ್ಲಿ ಬಿರು ಬಿಸಿಲಿನಿಂದ ಜನರು ಬೇಸತ್ತು ಹೋಗಿದ್ದಾರೆ

    ಈ ಭಾಗದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ

    ಹವಾಮಾನ ಇಲಾಖೆ ನೀಡಿದ ಮಾಹಿತಿಯಲ್ಲಿ ಏನೇನು ಇದೆ?

ಬೆಂಗಳೂರು: ಇಂದಿನಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ 3 ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರಿನಲ್ಲಿ ಮುಂದಿನ 3 ದಿನಗಳ ಕಾಲ ಸಾಧಾರಣ ಮಳೆ ಆಗಬಹುದು ಎಂದು ಹವಮಾನ ಇಲಾಖೆ ಹೇಳಿದೆ. ಇನ್ನುಳಿದಂತೆ ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ವರುಣರಾಯ ಕೃಪೆ ತೋರಲಿದ್ದಾನೆ. ಈಗಾಗಲೇ ಬೇಸಿಗೆಯಿಂದ ಸುಸ್ತಾದ ಜನರು ಮಳೆ ಯಾವಾಗ ಬರುತ್ತೋ ಎನ್ನುತ್ತಿದ್ದಾರೆ. ಇದರ ಬೆನ್ನಲ್ಲೇ ಹವಾಮಾನ ಇಲಾಖೆ ನೀಡಿದ ಮಾಹಿತಿ ಕೊಂಚ ನೆಮ್ಮದಿ ಎನಿಸಿದೆ.

ಇವಷ್ಟೇ ಜಿಲ್ಲೆಗಳಲ್ಲ, ಜೊತೆಗೆ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಮುಂದಿನ ನಾಲ್ಕು ದಿನಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹೇಳಲಾಗಿದೆ. ಬೆಳಗಾವಿ, ಬೀದರ್, ಬಾಗಲಕೋಟೆ, ಕಲಬುರಗಿ, ರಾಯಚೂರು ಜಿಲ್ಲೆಗಳಲ್ಲಿ ಬಿಸಿಲು ಹೆಚ್ಚಾಗಿದ್ದರಿಂದ ಮಳೆ ಬೀಳುವ ಸಾಧ್ಯತೆ ಇದೆ. ಈ ಮಳೆ ಜೊತೆಗೆ ಒಣಹವೆ ಎಂದಿನಂತೆ ಮುಂದುವರೆಯಲಿದ್ದು ಬಿಸಿಲಿನ ತಾಪಮಾನದಲ್ಲಿ ಏರುಪೇರಾಗಲಿದೆ ಎಂದು ಮಾಹಿತಿ ಲಭ್ಯವಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Rain alert: ರಾಜ್ಯದಲ್ಲಿ ಇಂದಿನಿಂದ 3 ದಿನ ಮಳೆ ಸಾಧ್ಯತೆ.. ಯಾವ್ಯಾವ ಜಿಲ್ಲೆಗಳಲ್ಲಿ ವರುಣನ ಕೃಪೆ..?

https://newsfirstlive.com/wp-content/uploads/2023/11/BNG_RAIN-4.jpg

Load More