ಮುಡಾ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಸಿದ್ದರಾಮಯ್ಯ
ಮುಖ್ಯಮಂತ್ರಿ ಸ್ಥಾನದ ಮೇಲೆ ಕಾಂಗ್ರೆಸ್ ನಾಯಕರ ಕಣ್ಣು
ಸತೀಶ್ ಜಾರಕಿಹೊಳಿ ದೆಹಲಿ ಪ್ರವಾಸದ ಸಿಕ್ರೇಟ್ ಏನು?
ಮುಖ್ಯಮಂತ್ರಿ ಸಿದ್ದರಾಮಯ್ಯ ಮುಡಾ ಪ್ರಕರಣದಲ್ಲಿ ಸಿಲುಕಿಕೊಂಡಿದ್ದಾರೆ. ಕಾನೂನು ಹೋರಾಟ ಎದುರಿಸುತ್ತಿರುವ ಸಿದ್ದರಾಮಯ್ಯರ ಸಿಎಂ ಸ್ಥಾನದ ಮೇಲೆ ಕಾಂಗ್ರೆಸ್ ನಾಯಕರ ಕಣ್ಣು ಬಿದ್ದಂತಿದೆ. ಸಿದ್ದರಾಮಯ್ಯ ಅವರನ್ನ ಬದಲಿಸಿ ಹೊಸ ಸಿಎಂ ಆಗುವ ಆಕಾಂಕ್ಷಿಗಳ ಪಟ್ಟಿ ದಿನೇ ದಿನೇ ಬೆಳೆಯುತ್ತಲಿದೆ.
ಮೊನ್ನೆಯಷ್ಟೇ ಮಾತನಾಡಿದ್ದ ಹಿರಿಯ ನಾಯಕ ಆರ್ವಿಡಿ, ನಾನು ಸಚಿವ ಆಗಿ ದಣಿದಿದ್ದೀನಿ. ಮುಂದೆ ಮುಖ್ಯಮಂತ್ರಿ ಆಗಬೇಕು ಎನ್ನುವ ಆಸೆ ಆಗಿದೆ. ಲೈಫ್ನಲ್ಲಿ ಎಲ್ಲರಿಗೂ ಮಹತ್ವಾಕಾಂಕ್ಷೆಗಳು ಇರುತ್ತವೆ. ನಾನು ಸಿಎಂ ಆಗಬೇಕು ಎಂದು ಆಸೆ ಆಗಿದೆ ಎಂದಿದ್ದರು. ಅವರ ಹೇಳಿಕೆ ಬೆನ್ನಲ್ಲೇ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರದ ಚರ್ಚೆ ಮುನ್ನಲೆಗೆ ಬಂದಿದೆ. ಇದರ ಜೊತೆಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸದ್ದಿಲ್ಲದೇ ದೆಹಲಿಗೆ ಹೋಗಿ ಬಂದಿರೋದು ಕೂಡ ಕಾಂಗ್ರೆಸ್ನಲ್ಲಿ ಸಂಚಲನ ಮೂಡಿಸಿದೆ.
ಇದನ್ನೂ ಓದಿ:ಮುಡಾ ಹಗರಣದಲ್ಲಿ ಓರ್ವ ಅಧಿಕಾರಿಯ ತಲೆದಂಡ; ಇತ್ತ ಚಾಮುಂಡಿ ಮೊರೆ ಹೋದ CM
ಮಾಹಿತಿಗಳ ಪ್ರಕಾರ, ಎರಡು ದಿನಗಳ ಹಿಂದೆ ಜಾರಕಿಹೊಳಿ ದೆಹಲಿಗೆ ಹೋಗಿ ಬಂದಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಜೊತೆ ರಾಹುಲ್ ಗಾಂಧಿಯನ್ನೂ ಭೇಟಿಯಾಗಿ ಬಂದಿದ್ದಾರೆ. ಬೆನ್ನಲ್ಲೇ ದೆಹಲಿ ವರಿಷ್ಠರ ಭೇಟಿ ನೀಡಿರುವ ವಿಚಾರ ಭಾರೀ ಕುತೂಹಲ ಮೂಡಿಸಿದೆ. ಮತ್ತೊಂದು ಕಡೆ ಪರಮೇಶ್ವರ್ ಕೂಡ ಭೇಟಿ ಮಾಡಿದ್ದಾರೆ.
ಇನ್ನು ದೆಹಲಿ ಭೇಟಿ ಬಳಿಕ ಸಚಿವ ಸತೀಶ್ ಜಾರಕಿಹೊಳಿ ಸೈಲೆಂಟ್ ಆಗಿದ್ದಾರೆ. ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೆ ಅಂತರ ಕಾಯ್ದುಕೊಂಡಿದ್ದಾರೆ. ಇತ್ತೀಚೆಗೆ ಪರಮೇಶ್ವರ್ ಜೊತೆ ರಹಸ್ಯ ಸಭೆ ನಡೆಸಿದ್ದರು. ಊಟದ ನೆಪದಲ್ಲಿ ತಮ್ಮ ಸರ್ಕಾರಿ ನಿವಾಸದಲ್ಲಿ ರಹಸ್ಯ ಸಮಾಲೋಚನೆ ನಡೆಸಿದ್ದರು. ಇದರ ಬೆನ್ನಲ್ಲೆ ದಿಢೀರ್ ದೆಹಲಿಗೆ ತೆರಳಿದ್ದರು.
ಸತೀಶ್ ಜಾರಕಿಹೊಳಿ-ಪರಮೇಶ್ವರ್ರಿಂದ ದೆಹಲಿ ವರಿಷ್ಠರ ಭೇಟಿ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಪರಮೇಶ್ವರ್.. ಸಿಎಂ ರೇಸ್ ಏನೂ ಇಲ್ಲ. ನಾನೇನಕ್ಕೋ ಭೇಟಿ ಮಾಡ್ತೇನೆ, ಅವರೇನಕ್ಕೋ ಭೇಟಿ ಮಾಡ್ತಾರೆ. ದೆಹಲಿಗೆ ಹೋದರೆ ಹೈಕಮಾಂಡ್ ಭೇಟಿ ಮಾಡೋದು ಸಂಪ್ರದಾಯ. ಹಾಗಾಗಿ ಅವರು ಹೋಗಿ ಭೇಟಿ ಮಾಡಿರ್ತಾರೆ. ಎಲ್ಲದಕ್ಕೂ ರಾಜಕೀಯ ಬಣ್ಣ ಹಾಕೋದು ಬೇಡ ಎಂದಿದ್ದಾರೆ.
ಇದನ್ನೂ ಓದಿ:ಅರಮನೆಯ ಗೋಡೆಯೂ ಚಿನ್ನ, ವಿಮಾನವೂ ಚಿನ್ನ.. ಮೋದಿ ಭೇಟಿಯಾಗ್ತಿರುವ ಸುಲ್ತಾನನ ಜೀವನ ಅಬ್ಬಬ್ಬಾ! Photos
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ