/newsfirstlive-kannada/media/post_attachments/wp-content/uploads/2025/02/JOB_EXAM_1.jpg)
ಇವತ್ತು ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಗೊಳ್ಳಲಿದೆ. ಮಧ್ಯಾಹ್ನ 12.30ಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಲ್ಲೇಶ್ವರದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯಲ್ಲಿ ಫಲಿತಾಂಶ ಬಿಡುಗಡೆ ಮಾಡಲಿದ್ದಾರೆ.
1.30ರ ವೇಳೆಗೆ ವಿದ್ಯಾರ್ಥಿಗಳು ವೆಬ್‌ಸೈಟ್‌ನಲ್ಲಿ (https://karresults.nic.in) ತಮ್ಮ ಫಲಿತಾಂಶ ವೀಕ್ಷಿಸಬಹುದು. ಮಾರ್ಚ್1 ರಿಂದ 20ರವರೆಗೆರಾಜ್ಯಾದ್ಯಂತ 1,771 ಪರೀಕ್ಷಾ ಕೇಂದ್ರಗಳಲ್ಲಿ ಪಿಯು ಪರೀಕ್ಷೆ ನಡೆದಿತ್ತು. ಒಟ್ಟು 7 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರಾಗಿದ್ದರು.
ಇದನ್ನೂ ಓದಿ: ಭಾರತದ ಈ ಒಂದು ಏಕೈಕ ಪ್ರದೇಶದಲ್ಲಿ ಈರುಳ್ಳಿ ಬಳಸಲ್ಲ! ಮಾರಾಟ, ಖರೀದಿ ಎರಡಕ್ಕೂ ಬ್ಯಾನ್, ಯಾಕೆ?
ಪರೀಕ್ಷೆ ಮುಗಿದ ಮರುದಿನದಿಂದಲೇ 76 ಕೇಂದ್ರಗಳಲ್ಲಿ ಸುಮಾರು 25 ಸಾವಿರಕ್ಕೂ ಹೆಚ್ಚು ಮೌಲ್ಯಮಾಪಕರು ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಸಿದ್ದರು. ಏಪ್ರಿಲ್ 3 ವೇಳೆಗೆ ಮೌಲ್ಯಮಾಪನ ಪೂರ್ಣಗೊಂಡಿತ್ತು. ಇದೀಗ ಫಲಿತಾಂಶದ ಕಂಪ್ಯೂಟರೀಕರಣ ಕಾರ್ಯ ಮುಗಿಸಿ ಫಲಿತಾಂಶ ಪ್ರಕಟಣೆ ಆಗುತ್ತಿದೆ.
ರಿಸಲ್ಟ್ ನೋಡೋದು ಹೇಗೆ..?
- ಅಧಿಕೃತ ವೆಬ್‌ಸೈಟ್‌ಗೆ karresults.nic.in ಅಥವಾ kseab.karnataka.gov.in ಗೆ ಭೇಟಿ ನೀಡಬೇಕು
- ಹೋಂ ಪೇಜ್ನಲ್ಲಿ Second PU Results 2025 ಲಿಂಕ್ ಕ್ಲಿಕ್ ಮಾಡಬೇಕು
- ರಿಜಿಸ್ಟ್ರೇಷನ್ ನಂಬರ್ (ನೋಂದಣಿ ಸಂಖ್ಯೆ) ಮತ್ತು ಪಾಸ್‌ವರ್ಡ್ ನಮೂದಿಸಬೇಕು
- Second PU Results 2025 ಎಂಬುದು ಸ್ಕ್ರೀನ್ನಲ್ಲಿ ಕಾಣಿಸುತ್ತದೆ
ಇದನ್ನೂ ಓದಿ: ಅವರೇ ನಮ್ಮ ಹೀರೋ.. ಗೆಲುವಿನ ಕ್ರೆಡಿಟ್ ಯಾರಿಗೆ ಕೊಟ್ರು ರಜತ್ ಪಾಟೀದಾರ್..?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ