/newsfirstlive-kannada/media/post_attachments/wp-content/uploads/2024/08/PRIVAT_SCHOOL_1.jpg)
ಬೆಂಗಳೂರ: ಆಗಸ್ಟ್​ 15 ಸ್ವಾತಂತ್ರ್ಯ ದಿನಾಚರಣೆಯಂದು ಶಾಲೆಗಳಲ್ಲಿ ಕಪ್ಪು ಪಟ್ಟಿ ಧರಿಸಲು ಮುಂದಾಗಿರುವ ಕರ್ನಾಟಕ ಖಾಸಗಿ ಶಾಲಾ ಆಡಳಿತ ಮಂಡಳಿ ಬೋದಕ- ಬೋದಕೇತರ ಸಮನ್ವಯದ ನಿರ್ಧಾರವನ್ನ ಕರ್ನಾಟಕ ಖಾಸಗಿ ಶಾಲಾ-ಕಾಲೇಜು ಪೋಷಕ ಸಂಘಟನೆಗಳ ಸಮಿತಿ ಉಗ್ರವಾಗಿ ಖಂಡಿಸುತ್ತದೆ ಎಂದು ಬಿ.ಎನ್​ ಯೋಗಾನಂದ ಹೇಳಿದ್ದಾರೆ.
ಆಡಳಿತ ಮಂಡಳಿ ಒಕ್ಕೂಟಗಳು ತಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ಶಿಕ್ಷಣ ಸಚಿವರು ಮತ್ತು ಸರ್ಕಾರದ ಜೊತೆ ಕುಳಿತು ಮಾತಾಡಿಕೊಳ್ಳಲಿ. ಕರಾಳ ದಿನಾಚರಣೆ ಆಚರಣೆ ಮಾಡಲು ನಿಮಗೆ ಬೇರೆ ದಿನಗಳಿಲ್ಲವೇ? ಮಕ್ಕಳಿಗೆ ಸ್ವಾತಂತ್ರ್ಯ ಚಳುವಳಿಯ ಮಹತ್ವ ಸಾರುವ, ತ್ಯಾಗ ಬಲಿದಾನ ಮಾಡಿದವರಿಗೆ ಗೌರವ ಸೂಚಿಸುವ ಬದಲು ಆ ದಿನ ಕಪ್ಪುಪಟ್ಟಿ ಧರಿಸಿ ಶಾಲೆಗಳಲ್ಲಿ ಕರಾಳ ದಿನ ಆಚರಿಸುವುದು ಆ ಮಹತ್ವದ ದಿನಕ್ಕೆ ಮಾಡಿದ ಅವಮಾನವಾಗುತ್ತಿದೆ. ಹೀಗಾಗಿ ಆಡಳಿತ ಮಂಡಳಿ ಈ ನಿರ್ಧಾರ ಕೈಬಿಟ್ಟು ಎಲ್ಲ ಶಾಲೆಗಳಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಿ ಮಕ್ಕಳಲ್ಲಿ ದೇಶಭಕ್ತಿ ಮೂಡಿಸಬೇಕೆಂದು ಸಮನ್ವಯ ಸಮಿತಿ ಒತ್ತಾಯಿಸುತ್ತಿದೆ ಎಂದು ತಿಳಿಸಿದ್ದಾರೆ.
/newsfirstlive-kannada/media/post_attachments/wp-content/uploads/2024/08/PRIVAT_SCHOOL.jpg)
ಇನ್ನು ಇದಕ್ಕೆ ಸಂಬಂಧಿಸಿದಂತೆ ಸರ್ಕಾರ ಈ ಕೂಡಲೇ ಶಾಲೆಗಳಿಗೆ ಮಾರ್ಗಸೂಚಿ ಹೊರಡಿಸಬೇಕು. ಈ ಮಾರ್ಗಸೂಚಿ ಉಲ್ಲಂಘಿಸಿದ ಶಾಲೆಗಳ ವಿರುದ್ಧ ದೇಶದ್ರೋಹದ ಅಡಿಯಲ್ಲಿ ದೂರು ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಮನ್ವಯ ಸಮಿತಿ ಆಗ್ರಹ ಮಾಡುತ್ತದೆ ಎಂದು ಹೇಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us