newsfirstkannada.com

PSI-545 ಹುದ್ದೆಗಳಿಗೆ ಇವತ್ತು ಮರು ಪರೀಕ್ಷೆ; ಪರೀಕ್ಷಾ ಕೇಂದ್ರದ ಸುತ್ತ 144 ಸೆಕ್ಷನ್ ಜಾರಿ

Share :

Published January 23, 2024 at 8:00am

    ಒಟ್ಟು 54 ಸಾವಿರ ಅಭ್ಯರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ

    ಬೆಂಗಳೂರಿನ 117 ಕೇಂದ್ರಗಳಲ್ಲಿ ಬಿಗಿಭದ್ರತೆ ಒದಗಿಸಲಾಗಿದೆ

    ಪರೀಕ್ಷಾ ಅಭ್ಯರ್ಥಿಗಳಿಗೆ ಏನೆಲ್ಲ ಷರತ್ತು ಇದೆ? ಗೈಡ್​ಲೈನ್ಸ್

ಬೆಂಗಳೂರು: ಪಿಎಸ್​ಐ 545 ಹುದ್ದೆಗಳಿಗೆ ಇವತ್ತು ಮರು ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರದ 100 ಮೀಟರ್​ನಲ್ಲಿ 144 ಸೆಕ್ಸನ್ ಜಾರಿ ಮಾಡಲಾಗಿದೆ. ಹಿಂದೆ ನಡೆದ ಪರೀಕ್ಷೆಯಲ್ಲಿ ಭಾರೀ ಅಕ್ರಮಗಳು ನಡೆದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಹಾಗೂ ಕೆಇಎ ನಿಗಾ ಇಟ್ಟಿದೆ.

ಒಟ್ಟು 54 ಸಾವಿರ ಅಭ್ಯರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಬೆಂಗಳೂರಿನ 117 ಕೇಂದ್ರಗಳಲ್ಲಿ ಬಿಗಿಭದ್ರತೆ ಒದಗಿಸಲಾಗಿದೆ. ಬೆಳಗ್ಗೆ 10.30ರಿಂದ ಮಧ್ಯಾಹ್ನ 12ರವರೆಗೆ ಹಾಗೂ ಮಧ್ಯಾಹ್ನ 1 ಗಂಟೆಯಿಂದ 2.30 ರವರೆಗೆ ಪರೀಕ್ಷೆ ನಡೆಯಲಿದೆ.

ಭದ್ರತೆ ಪ್ಲಾನ್ ಏನು..?

  • ಪ್ರತಿ ಪರೀಕ್ಷಾ ಕೇಂದ್ರದಲ್ಲೂ ನಾಲ್ವರು ಸಶಸ್ತ್ರ ಪೇದೆಗಳ ನಿಯೋಜನೆ
  • ಇಬ್ಬರು ಮಹಿಳಾ ಸಿಬ್ಬಂದಿ ಸೇರಿ 6 ಮಂದಿ ಭದ್ರತೆಗಾಗಿ ನಿಯೋಜನೆ
  • ಪರೀಕ್ಷಾ ಕೇಂದ್ರಗಳ ಸುತ್ತ ಓಡಾಡುವವರ ಮೇಲೆ ತೀವ್ರ ನಿಗಾ
  • ಗಾಳಿಸುದ್ದಿ ಹಬ್ಬಿಸುವವರು, ಜೆರಾಕ್ಸ್ ಅಂಗಡಿಗಳ ಮೇಲೆ ಕಣ್ಣು
  • ಅಭ್ಯರ್ಥಿಯನ್ನು ಲೋಹಶೋಧಕ ಯಂತ್ರದ ಮೂಲಕ ತಪಾಸಣೆ

ಮಾರ್ಗಸೂಚಿ ಏನ್ ಹೇಳುತ್ತದೆ..?
ಅಭ್ಯರ್ಥಿಗಳು ವಸ್ತ್ರ ಸಂಹಿತೆ ಸೂಚನೆಗಳನ್ನು ಪಾಲಿಸುವುದು ಕಡ್ಡಾಯವಾಗಿದೆ. ಮೊಬೈಲ್ ಸೇರಿ, ಎಲೆಕ್ಟ್ರಾನಿಕ್ ವಸ್ತುಗಳ ತರಲು ಅವಕಾಶ ಇಲ್ಲ. ಶರ್ಟ್, ಪ್ಯಾಂಟ್​ಗಳಿಗೆ ಜಿಪ್ ಪ್ಯಾಕೆಟ್ಸ್​, ದೊಡ್ಡ ದೊಡ್ಡ ಗುಂಡಿಗಳು ಹಾಗೂ ಹೆಚ್ಚಿನ ಡಿಸೈನ್​ಗಳು ಬಟ್ಟೆಯಲ್ಲಿ ಇರುವಂತಿಲ್ಲ. ಅಭ್ಯರ್ಥಿಗಳು ಪರೀಕ್ಷಾ ಹಾಲ್​ಗೆ ಶೂ ಹಾಕಿಕೊಂಡು ಹೋಗುವಂತಿಲ್ಲ. ಸ್ಯಾಂಡಲ್ ಅಥವಾ ತೆಳುವಾದ ಚಪ್ಪಲಿ ಬಳಕೆಗೆ ಸೂಚನೆ ನೀಡಲಾಗಿದೆ.

ಚೈನ್, ಕಿವಿಯೋಲೆ, ಉಂಗುರ, ಕೈ ಕಡಗ ಧರಿಸಲು ನಿಷೇಧ ಇದೆ. ಎಲೆಕ್ಟ್ರಾನಿಕ್ ವಸ್ತುಗಳು, ಮೊಬೈಲ್, ಪೆನ್ ಡ್ರೈವ್, ಇಯರ್ ಫೋನ್ ತರುವಂತಿಲ್ಲ. ಮೈಕ್ರೋ ಫೋನ್, ಬ್ಲೂಟೂತ್, ಗಡಿಯಾರ ಪ್ರವೇಶವಿಲ್ಲ. ಯಾವುದೇ ರೀತಿಯಾದ ಅಹಾರ, ನೀರಿನ ಬಾಟಲಿಗೆ ಅವಕಾಶ ಇಲ್ಲ. ಬದಲಿಗೆ ಪರೀಕ್ಷಾ ಕೇಂದ್ರದಲ್ಲಿಯೇ ನೀರು ಕುಡಿಯಲು ವ್ಯವಸ್ಥೆ ಮಾಡಲಾಗುತ್ತದೆ. ಪೆನ್ಸಿಲ್, ಪೇಪರ್, ಎರೇಸರ್, ಜಾಮಿಟ್ರಿ ಬಾಕ್ಸ್, ಲಾಗ್ ಟೇಬಲ್ ಗಳು ಪರೀಕ್ಷಾ ಕೇಂದ್ರಕ್ಕೆ ನಿಷೇಧ ಹೇರಲಾಗಿದೆ. ಎಲ್ಲಾ ಅಭ್ಯರ್ಥಿಗಳಿಗೆ ಹ್ಯಾಟ್, ಮಾಸ್ಕ್ ಧರಿಸದಂತೆ ಸೂಚನೆ ನೀಡಲಾಗಿದೆ. ಪ್ರವೇಶ ಪತ್ರ, ಸರ್ಕಾರದಿಂದ ಮಾನ್ಯವಾದ ಗುರುತಿನ ಚೀಟಿ ಕಡ್ಡಾಯವಾಗಿದೆ. ಕೊನೆಯ ಬೆಲ್ ಹೊಡೆಯೋವರೆಗೂ ಪರೀಕ್ಷಾ ಹಾಲ್​ನಿಂದ ಅಭ್ಯರ್ಥಿಗಳು ಹೊರ ಹೋಗುವಂತಿಲ್ಲ.

ಮಹಿಳಾ ಅಭ್ಯರ್ಥಿಗಳಿಗೆ ಪ್ರತ್ಯೇಕ ಮಾರ್ಗ ಸೂಚಿ..!

  • ದೊಡ್ಡ ದೊಡ್ಡ ಡಿಸೈನ್, ಬಟನ್ ಇರೋ, ಹೂಗಳು ಇರುವ ಬಟ್ಟೆ ಧರಿಸುವಂತಿಲ್ಲ
  • ಪೂರ್ಣ ತೋಳಿನ ಬಟ್ಟೆ ಬಳಸದಂತೆ ಸೂಚನೆ ನೀಡಲಾಗಿದೆ
  • ಮುಜುಗರವಾಗದಂತೆ ಅರ್ಧ ತೋಳಿನ‌ ಬಟ್ಟೆ, ಟಾಪ್​ ಬಳಸಲು ಸೂಚನೆ
  • ಹೈ-ಹೀಲ್ಸ್, ಶೂ ಹಾಕಿಕೊಂಡು ಪರೀಕ್ಷಾ ಕೊಠಡಿಗೆ ಬರುವಂತಿಲ್ಲ
  • ಮಹಿಳಾ ಅಭ್ಯರ್ಥಿಗಳಿಗೂ ಯಾವುದೇ ರೀತಿಯ ಲೋಹ, ಚೈನ್ ಬಳಸಂಗಿಲ್ಲ
  • ಮಂಗಳ ಸೂತ್ರ, ಕಾಲುಂಗುರ ಬಳಸಲು ಅನುಮತಿ ಇದೆ ನೀಡಲಾಗಿದೆ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

PSI-545 ಹುದ್ದೆಗಳಿಗೆ ಇವತ್ತು ಮರು ಪರೀಕ್ಷೆ; ಪರೀಕ್ಷಾ ಕೇಂದ್ರದ ಸುತ್ತ 144 ಸೆಕ್ಷನ್ ಜಾರಿ

https://newsfirstlive.com/wp-content/uploads/2024/01/PSI-Scam.jpg

Load More