ಮುಂದಿನ ಐದು ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ.. ಹವಾಮಾನ ಇಲಾಖೆ ಎಚ್ಚರಿಕೆ..

author-image
Ganesh
Updated On
ಮುಂದಿನ ಐದು ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ.. ಹವಾಮಾನ ಇಲಾಖೆ ಎಚ್ಚರಿಕೆ..
Advertisment
  • ರಾಜ್ಯದಲ್ಲಿ ಮಳೆಗಾಲ ನಿಧಾನವಾಗಿ ಬಿರುಸುಗೊಳ್ತಿದೆ
  • ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ
  • ಮುಂದಿನ 5 ದಿನ ಮಳೆಯ ಆರ್ಭಟ ಜೋರು ಎಂದ ತಜ್ಞರು

ಬೆಂಗಳೂರು: ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗಲಿದ್ದು, ಎಚ್ಚರದಿಂದ ಇರುವಂತೆ ಹವಾಮಾನ ಇಲಾಖೆ ಸೂಚಿಸಿದೆ. ಮಳೆಯು 5 ದಿನಗಳ ಕಾಲ ಅಬ್ಬರಿಸಿ ಬೊಬ್ಬಿರಿಯಲಿದೆ. ಬಲವಾದ ಗಾಳಿ ಜೊತೆಗೆ ಮಳೆ ಬೀಳುವ ನಿರೀಕ್ಷೆ ಇದೆ ಎಂದು ತಿಳಿಸಿದೆ.

ಹೇಗಿರುತ್ತೆ ಮಳೆಯ ಆರ್ಭಟ..?

22/06/2024: ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಚದುರಿದ ಭಾರೀ ಮಳೆ ಆಗಲಿದೆ. ಗುಡುಗು ಸಹಿತ ಮಳೆ ಸಾಧ್ಯತೆ ಇದೆ. ದಕ್ಷಿಣ ಒಳ ಕರ್ನಾಟಕದ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ ಚದುರಿದ ಭಾರೀ ಮಳೆ ಆಗಲಿದೆ. ಗುಡುಗು ಸಹಿತ ಭಾರೀ ಗಾಳಿ ಕೂಡ ಬೀಸಲಿದ್ದು, 30-40 kmph ವೇಗದಲ್ಲಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ:ಸೂರಜ್‌ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ.. ಸಂತ್ರಸ್ತ ಯುವಕನ ಆರೋಪ ಏನು..?

23/06/2024: ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಚದುರಿದ ಮಳೆ ಆಗಲಿದೆ. ಗುಡುಗು ಸಹಿತ ಭಾರೀ ಮಳೆ ಆಗಲಿದೆ. ದಕ್ಷಿಣ ಒಳ ಕರ್ನಾಟಕದ ಚಿಕ್ಕಮಗಳೂರು, ಮೈಸೂರು, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ ಚದುರಿದ ಭಾರೀ ಗಾಳಿ ಮಳೆ ಆಗಲಿದೆ. 30-40 kmph ವೇಗದಲ್ಲಿ ಗಾಳಿ ಬೀಸಲಿದೆ. ಉತ್ತರ ಒಳ ಕರ್ನಾಟಕದ ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳ ಕರ್ನಾಟಕದ ದಾವಣಗೆರೆ, ಹಾಸನ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದೆ.

ಇದನ್ನೂ ಓದಿ:ಸೆಮಿ ಫೈನಲ್​ ಎಂಟ್ರಿಗೆ ಟೀಂ ಇಂಡಿಯಾಗೆ ಇವತ್ತು ಗೆಲ್ಲಲೇಬೇಕು.. ಈ ಆಟಗಾರನಿಗೆ ಕೊಕ್..

24/06/2024: ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಭಾರೀ ಮಳೆ ಆಗಲಿದೆ. ದಕ್ಷಿಣ ಒಳನಾಡಿನ ಕರ್ನಾಟಕದ ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ ಮಳೆ ಬೀಳಲಿದೆ. ಉತ್ತರ ಒಳ ಕರ್ನಾಟಕದ ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆ ಆಗಲಿದೆ.

26/06/2024: ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ:ಸ್ನೇಹಿತನ ಮೇಲೆ ಪ್ರೀತಿಯ ವ್ಯಾಮೋಹ.. ಗುಟ್ಟಾಗಿ ಗೆಳೆಯನ ಲಿಂಗವನ್ನೇ ಬದಲಾಯಿಸಿಬಿಟ್ಟ ಪ್ರಿಯಕರ..!

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment