/newsfirstlive-kannada/media/post_attachments/wp-content/uploads/2025/06/KARNATAKA-RAIN-22.jpg)
ನೈಋತ್ಯ ಮಾನ್ಸೂನ್ ಮತ್ತೆ ಚುರುಕು ಪಡೆದುಕೊಂಡಿದ್ದು, ರಾಜ್ಯದ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ ಆಗಲಿದೆ. ಅದರಲ್ಲೂ ಪ್ರಮುಖವಾಗಿ ಆರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಎಲ್ಲೆಲ್ಲಿ ಮಳೆ ಆಗಲಿದೆ..?
ಕರ್ನಾಟಕದ ವಿವಿಧ ಭಾಗದಲ್ಲಿ ಜುಲೈ 14ರವರೆಗೆ ಮಳೆಯ ಆರ್ಭಟ ಮುಂದುವರಿಯಲಿದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆ ಅಬ್ಬರ ಮುಂದುವರಿಯಲಿದೆ. ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿಯೂ ರಣಭೀಕರ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಇದನ್ನೂ ಓದಿ: ಕನ್ನಡಿಗ ಪ್ರಸಿದ್ಧ್ಗೆ ಕೊಕ್, ಆ ಸ್ಥಾನಕ್ಕೆ ಬಲಿಷ್ಠ ಪ್ಲೇಯರ್..! ಹೇಗಿರುತ್ತೆ ಟೀಂ ಇಂಡಿಯಾ ಪ್ಲೇಯಿಂಗ್-11
ಉತ್ತರ ಕರ್ನಾಟಕದ ಬೆಳಗಾವಿ, ವಿಜಯಪುರ, ಬೀದರ್, ಧಾರವಾಡ, ಕಲಬುರಗಿ ಹಾಗೂ ಗದಗ ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ. ಹಾವೇರಿ, ಬಾಗಲಕೋಟೆ, ರಾಯಚೂರು, ಕೊಪ್ಪಳ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ವರದಿ ಉಲ್ಲೇಖಿಸಿದೆ.
ಬೆಂಗಳೂರಲ್ಲಿ ಕೈಕೊಟ್ಟ ಮಳೆ
ಬೆಂಗಳೂರಲ್ಲಿ ಜುಲೈನಲ್ಲಿ ಮಳೆ ಕೊರತೆ ಆಗಿದೆ. ಕಳೆದ ಒಂದು ವಾರದಲ್ಲಿ ಶೇ 50ರಷ್ಟು ಮಳೆ ಕೊರತೆ ಆಗಿದೆ. ವಾಡಿಕೆಯಂತೆ ಜುಲೈ1ರಿಂದ ಜುಲೈ8 ವರೆಗೆ 10 ಮಿಮಿ ಮಳೆಯಾಗಬೇಕಿತ್ತು. ಆದರೆ ಕೇವಲ 4-5ಮಿಮೀ ನಷ್ಟು ಮಾತ್ರ ಮಳೆಯಾಗಿದೆ. ಇನ್ನೂ ಒಂದು ವಾರಗಳ ಕಾಲ ಬೆಂಗಳೂರಿಗೆ ಮಳೆಯ ಮುನ್ಸೂಚನೆ ಇಲ್ಲ. ಜುಲೈ 17 ರಿಂದ ಬೆಂಗಳೂರಲ್ಲಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ: ರಾಜಕೀಯ ನಿವೃತ್ತಿ ಬಗ್ಗೆ ಮಾತನಾಡಿದ ಅಮಿತ್ ಶಾ -ಮುಂದೆ ಏನು ಮಾಡ್ತಾರಂತೆ ಗೊತ್ತಾ..?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ