/newsfirstlive-kannada/media/post_attachments/wp-content/uploads/2023/07/KRS-Dam-1.jpg)
ಮಂಡ್ಯ: ಕೃಷ್ಣರಾಜ ಸಾಗರ ಜಲಾಶಯ ಬಹುತೇಕ ಭರ್ತಿಯಾಗಿದೆ. ಈ ಹಿನ್ನೆಲೆ ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಹೆಚ್ಚಾಗಿದೆ. ಡ್ಯಾಂನಿಂದ ನದಿಗೆ 25 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ.
ಕೆಆರ್‌ಎಸ್ ಡ್ಯಾಂನ ಒಳ ಹರಿವು ಹೆಚ್ಚಾದಂತೆ ಹೊರ ಹರಿವಿನಲ್ಲೂ ಹೆಚ್ಚಳವಾಗಿದೆ. ಸದ್ಯ ಡ್ಯಾಂ ಒಳ ಹರಿವು 69,617 ಕ್ಯೂಸೆಕ್ ಗೆ ಏರಿಕೆಕಂಡಿದೆ.
ನಿನ್ನೆ 51 ಸಾವಿರ ಕ್ಯೂಸೆಕ್ ಒಳ ಹರಿವು ಇತ್ತು. ಈಗಾಗಲೇ ಡ್ಯಾಂ 122.70 ಅಡಿ ಭರ್ತಿಯಾಗಿದೆ. 124.80 ಅಡಿ ಗರಿಷ್ಠ ಮಟ್ಟ ಹೊಂದಿರುವ ಡ್ಯಾಂ ಸದ್ಯ 25 ಸಾವಿರ ಕ್ಯೂಸೆಕ್ ನೀರು ಬಿಡುಗಡೆಯಾಗಿದೆ.
ಇದನ್ನೂ ಓದಿ: ಆಕಸ್ಮಿಕ ಬೆಂಕಿ ಅವಘಡ.. ಸುಟ್ಟು ಕರಕಲಾದ 3 ಅಂತಸ್ತಿನ ಬೇಕರಿ
ಮಧ್ಯಾಹ್ನದ ವೇಳೆಗೆ ಹೊರ ಹರಿವಿನ ಪ್ರಮಾಣ ಮತ್ತಷ್ಟು ಹೆಚ್ಚಿಸುವ ಸಾಧ್ಯತೆಯಿದೆ. ಹೊರ ಹರಿವು ಹೆಚ್ಚಾದಂತೆ ಡ್ಯಾಂ ಕೆಳಭಾಗದ ನದಿ ಪಾತ್ರದಲ್ಲಿ ನೆರೆ ಭೀತಿ ಉಂಟಾಗಿದೆ.
ಇಂದಿನ ಕೆಆರ್‌ಎಸ್ ನೀರಿನ ಮಟ್ಟ
ಗರಿಷ್ಠ ಮಟ್ಟ - 124.80 ಅಡಿ.
ಇಂದಿನ ಮಟ್ಟ - 122.70 ಅಡಿ.
ಗರಿಷ್ಠ ಸಾಮರ್ಥ್ಯ - 49.452 ಟಿಎಂಸಿ.
ಇಂದಿನ ಸಾಮರ್ಥ್ಯ - 46.567 ಟಿಎಂಸಿ
ಒಳ ಹರಿವು - 69,617 ಕ್ಯೂಸೆಕ್
ಹೊರ ಹರಿವು - 27,184 ಕ್ಯೂಸೆಕ್ (ನದಿ, ನಾಲೆ, ಕುಡಿಯುವ ನೀರು ಸೇರಿ)
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ