ಇಡೀ ರಾಜ್ಯಾದ್ಯಂತ ಕಳೆದ 24 ಗಂಟೆಯಲ್ಲಿ ಭರ್ಜರಿ ಮಳೆ
ಇಂದಿನಿಂದ 6 ದಿನಗಳ ಕಾಲ ಭರ್ಜರಿ ಮಳೆ ಎಂಬ ಎಚ್ಚರಿಕೆ
ರಾಜ್ಯ ಹವಾಮಾನ ಇಲಾಖೆಯಿಂದ ಭರ್ಜರಿ ಮುನ್ಸೂಚನೆ
ಬೆಂಗಳೂರು: ಇಡೀ ರಾಜ್ಯಾದ್ಯಂತ ಕಳೆದ 24 ಗಂಟೆಯಲ್ಲಿ ಭರ್ಜರಿ ಮಳೆ ಆಗುತ್ತಿದೆ. ಕೇವಲ ಬೆಂಗಳೂರು ಮಾತ್ರವಲ್ಲ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆ ಮಳೆಯಾಗಿದೆ. ಉತ್ತರ ಒಳನಾಡಿನಲ್ಲೂ ವರುಣನ ಆರ್ಭಟ ಜೋರಾಗಿದೆ. ಇದರ ಮಧ್ಯೆ ರಾಜ್ಯಾದ್ಯಂತ ಮುಂದಿನ 6 ದಿನಗಳ ಕಾಲ ಎಡಬಿಡದೆ ಮಳೆ ಬೀಳಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದಿನಿಂದ ಸುಮಾರು 6 ದಿನಗಳ ಕಾಲ ಬೆಂಗಳೂರು, ಕೋಲಾರ, ಮಂಡ್ಯ, ಬೆಳಗಾವಿ, ಧಾರವಾಡ, ಹಾವೇರಿ, ಕಡೂರು, ಶಿವಮೊಗ್ಗ, ಮಂಡ್ಯ, ಚಿತ್ರದುರ್ಗ ದಾವಣಗೆರೆಯಲ್ಲಿ ಭರ್ಜರಿ ಬೀಳುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಹಾಗಾಗಿ ಕೆಲವು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಇದನ್ನೂ ಓದಿ: ಬೆಂಗಳೂರಿಗರು ಗಮನಿಸಲೇಬೇಕಾದ ಸ್ಟೋರಿ; ಇಂದು ಈ ಏರಿಯಾಗಳಲ್ಲಿ ಕರೆಂಟ್ ಇರಲ್ಲ!
ಹೆಚ್ಚು ಮಳೆಯಾಗೋ ಪ್ರದೇಶಗಳಿವು!
ಈ ಸಂಬಂಧ ಮಾತಾಡಿದ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ್, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಕಡಿಮೆ ಮಳೆ ಆಗುತ್ತದೆ ಎಂದರು.
ಬೆಂಗಳೂರಲ್ಲಿ ಹೈಅಲರ್ಟ್
ಸಿಲಿಕಾನ್ ಸಿಟಿ ಮಂದಿಗೆ ಕಹಿಸುದ್ದಿ ಒಂದಿದೆ. ಮುಂದಿನ 5 ದಿನಗಳಲ್ಲಿ ಬೆಂಗಳೂರಿನಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ. ಹಾಗಾಗಿ ಹೈಅಲರ್ಟ್ ಘೋಷಿಸಲಾಗಿದ್ದು, ಶಾಲೆಗಳಿಗೆ ರಜೆ ನೀಡಲಾಗಿದೆ.
ಇದನ್ನೂ ಓದಿ: ಜನಬಲ, ಧನಬಲ ಗಟ್ಟಿಯಾಗುವ ದಿನ, ಪ್ರೇಮಿಗಳ ಮಧ್ಯೆ ಬೇಸರ; ಇಲ್ಲಿದೆ ಇಂದಿನ ಭವಿಷ್ಯ
ಕರ್ನಾಟಕದ ವಿವಿಧ ಪ್ರದೇಶಗಳಲ್ಲಿ ಮಳೆ
ಉತ್ತರ ಕನ್ನಡ, ಉಡುಪಿ, ಧಾರವಾಡ, ಬೆಳಗಾವಿ, ಹಾವೇರಿ, ಮಂಡ್ಯ, ಮೈಸೂರು, ಹಾಸನ, ಕೊಡಗು, ರಾಮನಗರ, ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸುರಿಯಲಿದೆ. ಇನ್ನು ಉತ್ತರ ಕರ್ನಾಟಕದ ಒಳನಾಡಿನ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುತ್ತೆ ಎನ್ನುವ ಮಾಹಿತಿ ಲಭ್ಯವಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ