/newsfirstlive-kannada/media/post_attachments/wp-content/uploads/2025/06/rain-8.jpg)
ಕರಾವಳಿ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಮಳೆಯಾರ್ಭಟ ಮುಂದುವರಿದಿದ್ದು, ಮುಂಜಾಗ್ರತಾ ಕ್ರಮವಾಗಿ ಉಡುಪಿ, ದಕ್ಷಿಣ ಕನ್ನಡ ಹಾಗೂ ಕೊಡಗು, ಜಿಲ್ಲೆಗಳಲ್ಲಿ ಇಂದು ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆ, ಮಂಗಳೂರು, ಉಳ್ಳಾಲ, ಪುತ್ತೂರು, ಬಂಟ್ವಾಳ, ಬೆಳ್ತಂಗಡಿ ತಾಲೂಕಿನಲ್ಲಿ ಅಂಗನವಾಡಿಯಿಂದ ಪ್ರೌಢ ಶಾಲೆಗಳವರೆಗೆ ರಜೆ ಘೋಷಣೆ ಮಾಡಲಾಗಿದೆ.
ಇದನ್ನೂ ಓದಿ: ಬಾಳು ಬೆಳಗುಂದಿ ಜೊತೆ ಭರ್ಜರಿ ಹಾಡಿಗೆ ಸೊಂಟ ಬಳುಕಿಸಿದ ಮಹಾನಟಿ ಗಗನಾ.. VIDEO
ಉಡುಪಿಯಲ್ಲೂ ರಜೆ ಘೋಷಣೆ
ಇತ್ತ, ಉಡುಪಿ ಜಿಲ್ಲೆಯಲ್ಲೂ ಮಳೆ ಅಬ್ಬರ ಮುಂದುವರಿದಿದ್ದು, ಜಿಲ್ಲಾಧಿಕಾರಿ ಶಾಲೆಗಳಿಗೆ ರಜೆ ಘೋಷಿಸಿದ್ದಾರೆ. ಕೊಡಗು ಜಿಲ್ಲೆಯಲ್ಲೂ ವ್ಯಾಪಕ ಮಳೆ ಹಿನ್ನೆಲೆ ಶಾಲಾ - ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉಡುಪಿಯ ಕಾಪು, ಕುಂದಾಪುರ, ಬೈಂದೂರು, ಹೆಬ್ರಿ, ಕಾರ್ಳಲ ತಾಲೂಕುಗಳಲ್ಲಿ ನಿರಂತರ ಮಳೆಯಿಂದ ಅಂಗನವಾಡಿಯಿಂದ ಹೈಸ್ಕೂಲ್ವರೆಗಿನ ಮಕ್ಕಳಿಗೆ ರಜೆ ಘೋಷಿಸಲಾಗಿದೆ. ಹಾಗೂ ಮೀನುಗಾರರಿಗೆ ಕಡಲಿಗೆ ಇಳಿಯದಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.
ಇದನ್ನೂ ಓದಿ: ಸಿರಿಯಾ ಮೇಲೆ ಇಸ್ರೇಲ್ ಏರ್ಸ್ಟ್ರೈಕ್.. ಭಯದಿಂದ ಲೈವ್‌ನಿಂದಲೇ ಓಡಿದ ಟಿವಿ ಆಂಕರ್ -VIDEO
ಉತ್ತರ ಕನ್ನಡದಲ್ಲೂ ಮಳೆ..
ಇನ್ನು ಉತ್ತರ ಕನ್ನಡದಲ್ಲೂ ಮಳೆ ಮುಂದುವರಿದಿದ್ದು, ಅಂಗನವಾಡಿ, ಪ್ರಾಥಮಿಕ ಶಾಲಾ. ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಮಂಡ್ಯ ಜಿಲ್ಲೆಯ ಹಲವೆಡೆ ಭಾರೀ ಮಳೆಯಾಗಿದೆ. ನಿನ್ನೆ ಸಂಜೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿಯಲ್ಲಿ ಧಾರಕಾರ ಮಳೆ ಸುರಿದಿದ್ದು, ರಸ್ತೆಯ ಜಲಾವೃತವಾಗಿದೆ. ರಸ್ತೆಯಲ್ಲಿ ಮಂಡಿ ಉದ್ದಕ್ಕೂ ನೀರು ನಿಂತಿದ್ದರಿಂದ ಕೆಲ ಕಾಲ ವಾಹನ ಸಂಚಾರ ಅಸ್ತವ್ಯಸ್ತವಾಗಿದೆ.
ಇದನ್ನೂ ಓದಿ: ರೌಡಿಶೀಟರ್ ಬಿಕ್ಲು ಶಿವ ಕೇಸ್.. ಬಂಧನದ ಭೀತಿಯಲ್ಲಿ ಬಿಜೆಪಿ ಶಾಸಕ ಬೈರತಿ ಬಸವರಾಜ್..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ