ಇನ್ನು 3 ದಿನ ಮಳೆ, ಮನೆಯಿಂದ ಹೊರಗೆ ಹೋಗುವಾಗ ಎಚ್ಚರ!
ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ
ಮಳೆ, ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಮೊನ್ನೆಯಷ್ಟೇ ಬೆಂಗಳೂರು ಸೇರಿದಂತೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ವರುಣರಾಯ ಆರ್ಭಟಿಸಿದ್ದನು. ಇದರಿಂದ ರೈತರಿಗೆ ಕೊಂಚ ಸಂತಸವಾಗಿತ್ತು. ದಕ್ಷಿಣ ಮತ್ತು ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಗುಡುಗು, ಮಿಂಚು ಸಮೇತ ಮಳೆ ಆಗುವುದರಿಂದ ಆದಷ್ಟು ಜನರು ಜಾಗ್ರತೆಯಿಂದ ಇರಬೇಕು ಎಂದು ಇಲಾಖೆ ಸೂಚನೆ ಕೊಟ್ಟಿದೆ. ಇನ್ನು ನಗರದಲ್ಲಿ ಸಂಜೆಯಾಗುತ್ತಲೇ ಗಾಳಿ ತಂಪಾಗಿ ಬೀಸುತ್ತಿದ್ದರಿಂದ ವಾತಾವರಣವೆಲ್ಲ ಮೈಗೆ ಚಳಿ ಹಿಡಿದಂತೆ ಆಗುವ ಅನುಭವ ಆಗುತ್ತಿದೆ. ರಾಜ್ಯದ ಹಲವೆಡೆ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಮುನ್ಸೂಚನೆಯಿದ್ದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ತಿಳಿಸಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ