ಬೆಂಗಳೂರು ಸೇರಿ ರಾಜ್ಯದ ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆ; ಮನೆಯಿಂದ ಹೊರಬರೋ ಮುನ್ನ ಎಚ್ಚರ!

author-image
Ganesh Nachikethu
Updated On
Rain Alert: ಇಂದು ಈ ಭಾಗಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ.. ಯೆಲ್ಲೋ ಅಲರ್ಟ್ ಘೋಷಣೆ
Advertisment
  • ಎರಡು ದಿನಗಳ ಕಾಲ ಇಡೀ ರಾಜ್ಯಾದ್ಯಂತ ಮಳೆ ಅಬ್ಬರ
  • ಮುಂದಿನ 48 ಗಂಟೆಗಳು ಬೆಂಗಳೂರಲ್ಲಿ ಭರ್ಜರಿ ಮಳೆ!
  • ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ವರುಣನ ಆರ್ಭಟ

ಬೆಂಗಳೂರು: ಮುಂದಿನ 48 ಗಂಟೆಗಳ ಬೆಂಗಳೂರಲ್ಲಿ ಭರ್ಜರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಎರಡು ದಿನಗಳ ಗುಡುಗು ಸಮೇತ ಮಳೆ ಬೀಳಲಿದೆ ಎಂಬ ಮುನ್ಸೂಚನೆ ಕೊಟ್ಟಿದೆ.

ಸಿಲಿಕಾನ್​ ಸಿಟಿಯಲ್ಲಿ ಬೆಂಗಳೂರಿನಲ್ಲಿ 30 ಮಿಮೀ ಮಳೆಯಾಗುವ ಸಾಧ್ಯತೆ ಇದೆ. ಕೊಡಗು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಪ್ರದೇಶಗಳಲ್ಲಿ 70 ಮಿಮೀ ಮಳೆಯಾಗುವ ನಿರೀಕ್ಷೆ ಇದೆ. ದಕ್ಷಿಣ ಒಳ ನಾಡಿನಲ್ಲೂ 30mm ಮಳೆ ಸುರಿಯಲಿದೆ ಎಂದು ಹೇಳಲಾಗುತ್ತಿದೆ.

ಕಳೆದ ತಿಂಗಳು ಬೆಂಗಳೂರಲ್ಲಿ ಬರೋಬ್ಬರಿ 60 ಮಿಮೀ ಮಳೆಯಾಗಿತ್ತು. ಈ ತಿಂಗಳ ಕೊನೆಗೆ ದಾಖಲಿಕ ಮಳೆ ಆಗುವ ಸಾಧ್ಯತೆ ಇದೆ. ಒಂದು ವಾರದಿಂದ ಮಳೆ ಆಗಲಿದೆ ಎಂದು ಭವಿಷ್ಯ ನುಡಿಯಲಾಗಿತ್ತು. ಈಗ ಚಂಡಮಾರುತ ಪರಿಚಲನೆಯಿಂದಾಗಿ ಕರಾವಳಿ ರಾಜ್ಯಗಳಲ್ಲಿ ಮಳೆಯಾಗುವುದು ಖಚಿತವಾಗಿದೆ.

ಎಲ್ಲೆಲ್ಲಿ ಮತ್ತು ಯಾವಾಗ ಮಳೆ?

ಹವಾಮಾನ ಇಲಾಖೆ ಮಾಹಿತಿ ಪ್ರಕಾರ ನವೆಂಬರ್ 12 ಮತ್ತು 13ನೇ ತಾರೀಕು ಭರ್ಜರಿ ಮಳೆ ಬೀಳಲಿದೆ. ಬೆಂಗಳೂರು, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯನಗರ, ಯಾದಗಿರಿ ಜಿಲ್ಲೆಯಲ್ಲೂ ಭಾರೀ ಮಳೆ ನಿರೀಕ್ಷೆ ಇದೆ.

ಈ ವರ್ಷ ರಾಜ್ಯದ ಹಲವು ಭಾಗಗಳಲ್ಲಿ ಹಿಂಗಾರು ಮತ್ತು ಮುಂಗಾರು ಮಳೆ ವಾಡಿಕೆಯಂತೆಯಾಗಿದೆ. ಅದರಲ್ಲೂ ಬೆಂಗಳೂರಲ್ಲಿ ಸತತವಾಗಿ ಮಳೆ ಸುರಿಯುತ್ತಲೇ ಇದೆ ಎಂದು ಹವಾಮಾನ ಕೇಂದ್ರದ ಪ್ರಾದೇಶಿಕ ನಿರ್ದೇಶಕ ಸಿ.ಎಸ್ ಪಾಟೀಲ್ ಮಾಹಿತಿ ನೀಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment