/newsfirstlive-kannada/media/post_attachments/wp-content/uploads/2023/07/Heavy-Rain_Karnataka.jpg)
ಬೆಂಗಳೂರು: ರಾಜ್ಯದ್ಯಂತ ಹಿಂಗಾರು ಮಳೆ ಶುರುವಾಗಿ ಈಗಾಗಲೇ ಒಂದು ವಾರ ಕಳೆದಿದೆ. ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಈ ಮಳೆ ದೊಡ್ಡ ಅವಾಂತರಗಳನ್ನೇ ಸೃಷ್ಟಿ ಮಾಡಿದೆ. ಈಗ ಚಳಿಗಾಲ. ಇದರ ಮಧ್ಯೆ ದಿನ ಬಿಟ್ಟು ದಿನ ಮಳೆ ಬರುತ್ತಲೇ ಇದೆ. ಇನ್ನೂ 10 ದಿನಗಳ ಕಾಲ ಇಡೀ ರಾಜ್ಯಾದ್ಯಂತ ಜೋರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಲ್ಲೂ ಇಂದಿಡೀ ದಿನ ಮಳೆ ಬೀಳಲಿದೆ ಎಂದು ತಿಳಿಸಿದೆ.
ಕಳೆದ ಒಂದು ವಾರದಿಂದ ಬೆಂಗಳೂರಿನ ಹಲವೆಡೆ ಮಳೆ ಸುರಿಯುತ್ತಲೇ ಇದೆ. ಇಂದು ಬೆಳಿಗ್ಗೆಯಿಂದಲೇ ಇಡೀ ದಿನ ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಲಿದೆ. ಮುಂದಿನ ಕೆಲವು ಗಂಟೆಗಳ ಕಾಲ ವರುಣನ ಆರ್ಭಟ ಜೋರಾಗಿ ಇರಲಿದೆ. ಕೇವಲ ಬೆಂಗಳೂರು ಮಾತ್ರವಲ್ಲ ರಾಜ್ಯದ ಹಲವು ಜಿಲ್ಲಗಳಲ್ಲೂ ಇಂದು ಮಳೆಯಾಗಲಿದೆ ಎಂದು ತಿಳಿದು ಬಂದಿದೆ.
ಎಲ್ಲೆಲ್ಲಿ ಮಳೆ?
ನವೆಂಬರ್ 20 ರಿಂದ 30ನೇ ತಾರೀಕುವರೆಗೂ ಭರ್ಜರಿ ಮಳೆಯಾಗಲಿದೆ. ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು, ಹಾಸನ, ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಬೆಳಗಾವಿ, ಧಾರವಾಡ, ಉತ್ತರ ಕನ್ನಡ, ಬಳ್ಳಾರಿ, ದಾವಣಗೆರೆ, ಶಿವಮೊಗ್ಗ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಚಿತ್ರದುರ್ಗ, ವಿಜಯನಗರ, ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಬೀಳಲಿದೆ ಎಂದು ಹೇಳಲಾಗುತ್ತಿದೆ.
ಸಿಲಿಕಾನ್ ಸಿಟಿಯಲ್ಲಿ ಭರ್ಜರಿ ಟ್ರಾಫಿಕ್
ಪೋಷಕರು ಮಕ್ಕಳನ್ನು ಶಾಲೆಗಳಿಗೆ ಕಳಿಸೋ ಮುನ್ನ ಎಚ್ಚರಿಕೆ ವಹಿಸಬೇಕು. ಇಡೀ ದಿನ ಮಳೆ ಬರುವ ಕಾರಣ ಬೆಂಗಳೂರಲ್ಲಿ ಪೀಕ್ ಟ್ರಾಫಿಕ್ ಇರಲಿದೆ. ಅದರಲ್ಲೂ ಕಾರ್ಪೋರೇಷನ್ ಸರ್ಕಲ್, ಮೈಸೂರು ರೋಡ್, ಎಲೆಕ್ಟ್ರಾನಿಕ್ ಸಿಟಿ, ನೆಲಮಂಗಳ ರಸ್ತೆ, ಗೊರಗುಂಟೆ ಪಾಳ್ಯ, ಕೆ.ಆರ್ ಪುರಂ ರಸ್ತೆ, ಎಂಜಿ ರೋಡ್, ಶಿವಾಜಿ ನಗರ, ಮೆಜೆಸ್ಟಿಕ್, ಕೆ.ಆರ್ ಮಾರ್ಕೆಟ್ನಲ್ಲಿ ಫುಲ್ ಟ್ರಾಫಿಕ್ ಜಾಮ್ ಇರಲಿದೆ. ಹಾಗಾಗಿ ಮನೆಯಿಂದ ಹೊರ ಹೋಗೋರು ಆದಷ್ಟು ಪಬ್ಲಿಕ್ ಟ್ರಾನ್ಸ್ಪೋರ್ಟ್ ಬಳಸಬಹುದು. ಮರೆಯದೆ ಎಲ್ಲರೂ ಟೋಪಿ ಅಥವಾ ಛತ್ರಿ ಬಳಸಿ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ