/newsfirstlive-kannada/media/post_attachments/wp-content/uploads/2024/05/Bangalore-Rains-1.jpg)
ಬೆಂಗಳೂರು: ದಾಖಲೆಯ ಬಿಸಿಲಿಗೆ ಬೇಸತ್ತು ಹೋಗಿದ್ದ ಸಿಲಿಕಾನ್ ಸಿಟಿ ಈಗ ಕೂಲ್ ಸಿಟಿಯಾಗಿದೆ. ಕಳೆದ 24 ಗಂಟೆಯಿಂದ ಬೆಂಗಳೂರಿನ ವಾತಾವರಣ ತಂಪಾಗಿದ್ದು, ವರುಣ ಕೃಪೆ ತೋರಿದ್ದಾನೆ. ಇವತ್ತೂ ಕೂಡ ಬೆಂಗಳೂರಿನ ಹಲವೆಡೆ ಮಳೆ ಆಗಿದೆ.
ಭಾರತೀಯ ಹವಾಮಾನ ಇಲಾಖೆ ಬೆಂಗಳೂರಲ್ಲಿ ಇನ್ನೂ ಕೆಲವು ದಿನ ಸಾಧಾರಣ ಹಾಗೂ ಮಧ್ಯಮ ಮಳೆಯಾಗಲಿದೆ ಎನ್ನುವ ಮುನ್ಸೂಚನೆ ನೀಡಿದೆ. ಮಾರ್ಚ್​​ 14ರವರೆಗೂ ಬೆಂಗಳೂರು ನಗರಕ್ಕೆ ಹೈಅಲರ್ಟ್ ನೀಡಲಾಗಿದೆ.
/newsfirstlive-kannada/media/post_attachments/wp-content/uploads/2024/05/BNG-RAIN.jpg)
ಹಿರಿಯ ಹವಾಮಾನ ವಿಜ್ಞಾನಿ ಸಿ.ಎಸ್ ಪಾಟೀಲ್ ಅವರು ಕರ್ನಾಟಕದಲ್ಲಿ ಇನ್ನೂ ಮೂರು ದಿನ ಜೋರಾದ ಬಿರುಗಾಳಿ, ಗುಡುಗು, ಮಿಂಚು ಸಹಿತ ಮಳೆಯಾಗಲಿದೆ. ಗಾಳಿಯ ವೇಗೆ ಗಂಟೆಗೆ 30 ಕಿಲೋ ಮೀಟರ್ ವೇಗದಲ್ಲಿರಲಿದೆ. ಬೆಂಗಳೂರಲ್ಲಿ ಮುಂದಿನ ವಾರವೂ ಸಾಧಾರಣ ಮಳೆ ಮುಂದುವರಿಯಲಿದ್ದು, ವಾತಾವರಣದಲ್ಲಿ ಉಷ್ಣಾಂಶ ಕುಸಿಯಲಿದೆ ಎಂದಿದ್ದಾರೆ.
ಇನ್ನೂ 3 ದಿನ ಕಾಲ ಸಂಜೆ ವೇಳೆ ಮನೆಯಿಂದ ಹೊರಗೆ ಹೋಗುವವರು ಸ್ವಲ್ಪ ಎಚ್ಚರದಿಂದ ಇರಬೇಕು. ಮಳೆಯಿಂದ ರಕ್ಷಿಸಿಕೊಳ್ಳುವ ವ್ಯವಸ್ಥೆ ಮಾಡಿಕೊಂಡು ಮನೆಯಿಂದ ಹೊರಗೆ ಹೋದರೆ ಒಳ್ಳೆಯದು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us