Advertisment

RCB ಫ್ರಾಂಚೈಸಿಗೆ ಟಿ.ಎ ನಾರಾಯಣಗೌಡ ಎಚ್ಚರಿಕೆ.. ಕರವೇ ಅಧ್ಯಕ್ಷರು ಹೇಳಿದ್ದು ಏನು?

author-image
Bheemappa
Updated On
RCB ಫ್ರಾಂಚೈಸಿಗೆ ಟಿ.ಎ ನಾರಾಯಣಗೌಡ ಎಚ್ಚರಿಕೆ.. ಕರವೇ ಅಧ್ಯಕ್ಷರು ಹೇಳಿದ್ದು ಏನು?
Advertisment
  • ಕನ್ನಡಿಗರು ಮೊದಲಿನಿಂದ ತಂಡವನ್ನ ಬೆಂಬಲಿಸಿಕೊಂಡು ಬರ್ತಿದ್ದಾರೆ
  • ಸರಣಿ ಟ್ವೀಟ್​ಗಳನ್ನು ಮಾಡಿ RCB ಫ್ರಾಂಚೈಸಿಗೆ ಎಚ್ಚರಿಕಾ ಸಂದೇಶ
  • ಪೇಜ್ ತೆರೆದಿರುವುದು ಯಾವ ಕಾರಣಕ್ಕೆ ಎಂದು ಸ್ಪಷ್ಟಪಡಿಸಬೇಕು

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಹಿಂದಿ ಭಾಷೆಯಲ್ಲಿ ಎಕ್ಸ್ ಖಾತೆ ತೆರೆದಿದ್ದಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷರಾದ ಟಿ.ಎ ನಾರಾಯಣಗೌಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisment

ರಕ್ಷಣಾ ವೇದಿಕೆ ಅಧ್ಯಕ್ಷರಾದ ಟಿ.ಎ ನಾರಾಯಣಗೌಡರು ತಮ್ಮ ಎಕ್ಸ್ ಖಾತೆಯಲ್ಲಿ ಸರಣಿ ಟ್ವೀಟ್​ಗಳನ್ನು ಮಾಡಿ ಆರ್​ಸಿಬಿ ಮ್ಯಾನೇಜ್​ಮೆಂಟ್ ನಡೆಗೆ ಗರಂ ಆಗಿದ್ದಾರೆ. ಅಲ್ಲದೇ ಪೇಜ್ ತೆರೆದಿರುವುದು ಯಾವ ಕಾರಣಕ್ಕೆ ಎಂದು ಸ್ಪಷ್ಟಪಡಿಸಬೇಕು ಎಂದು ಫ್ರಾಂಚೈಸಿಗೆ ಎಚ್ಚರಿಕೆ ನೀಡಿದ್ದಾರೆ. ಆರ್​ಸಿಬಿ ಹಿಂದಿಯಲ್ಲಿ ಪೇಜ್ ತೆರೆಯುತ್ತಿದ್ದಂತೆ ಅಭಿಮಾನಿಗಳು, ಕನ್ನಡ ಪರ ಹೋರಾಟಗಾರರು ಭಾರೀ ವಿರೋಧ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಕನ್ನಡ ಪರವಾಗಿ ಯಾವಗಲೂ ಧ್ವನಿಯಾಗಿರುವ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ ನಾರಾಯಣಗೌಡರು ಟ್ವೀಟ್ ಮಾಡುವ ಮೂಲಕ ಫ್ರಾಂಚೈಸಿಗೆ ಎಚ್ಚರಿಕಾ ಸಂದೇಶ ನೀಡಿದ್ದಾರೆ.

ಇದನ್ನೂ ಓದಿ: ಹಿಂದಿಯಲ್ಲಿ ಟ್ವೀಟ್ ಖಾತೆ ತೆರೆದ RCB.. ಕನ್ನಡಿಗರು, ಅಭಿಮಾನಿಗಳು ಆಕ್ರೋಶ

publive-image

ರಾಯಲ್ ಚಾಲೆಂಜರ್ಸ್ ಬೆಂಗಳೂರು ಕ್ರಿಕೆಟ್ ಫ್ರಾಂಚೈಸಿ ಸಾಮಾಜಿಕ ಜಾಲತಾಣಗಳಲ್ಲಿ ಹಿಂದಿಯಲ್ಲಿ ಪುಟವನ್ನು ತೆರೆದಿದೆ. ಇದು ಯಾವ ಕಾರಣಕ್ಕೆ ಎಂದು ಅವರು ಸ್ಪಷ್ಟಪಡಿಸಬೇಕು. ಕನ್ನಡಿಗರ ಮೇಲೆ ಹಿಂದಿ ಗುಲಾಮಗಿರಿ ಹೇರುವುದು ಫ್ರಾಂಚೈಸಿಯ ಉದ್ದೇಶವಾಗಿದ್ದರೆ ಕರ್ನಾಟಕ ಬಿಟ್ಟು ತೊಲಗಲಿ. ನಿಮ್ಮ ಅವಶ್ಯಕತೆ ನಮಗಿಲ್ಲ. ತಂಡವನ್ನ ಕನ್ನಡಿಗರು ಮೊದಲಿನಿಂದಲೂ ಬೆಂಬಲಿಸಿಕೊಂಡು ಬಂದಿದ್ದಾರೆ. ಆರ್ ಸಿಬಿಗೆ ಇರುವಷ್ಟು ಅಭಿಮಾನಿಗಳು ಇನ್ಯಾವ ತಂಡಕ್ಕೂ ಇಲ್ಲ ಹೀಗಾಗಿಯೇ ಅದರ ಆದಾಯ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಇದ್ದು, ಒಮ್ಮೆಯೂ ಕಪ್ ಗೆಲ್ಲದಿದ್ದರೂ 3ನೇ ಶ್ರೀಮಂತ ತಂಡವಾಗಿದೆ. ಇದಕ್ಕೆ ಕಾರಣ ಕನ್ನಡಿಗರು ಎಂಬುದನ್ನು ಅದು ಮರೆತಿದೆ ಎಂದು ಬರೆದು ಟ್ವೀಟ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

Advertisment


">November 29, 2024

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment