newsfirstkannada.com

ಚಂದ್ರಯಾನ-3 ಯಶಸ್ಸಿನ ಹಿಂದಿದೆ ಕನ್ನಡಿಗನ ಶ್ರಮ; ಮಂಡ್ಯ ಮೂಲದ ಆ ವಿಜ್ಞಾನಿ ಯಾರು..?

Share :

23-08-2023

    ಚಂದ್ರನ ಅಂಗಳಕ್ಕೆ ಕಾಲಿಟ್ಟ ಭಾರತದ ಪ್ರಜ್ಞಾನ್​​ ರೋವರ್

    ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದ್ದ ಶತಕೋಟಿ ಭಾರತೀಯರು

    ಚಂದ್ರಯಾನ-3 ಯಶಸ್ಸಿನ ಹಿಂದಿದೆ ಕನ್ನಡಿಗನ ಶ್ರಮ; ಯಾರದು?

ಬೆಂಗಳೂರು: ಚಂದ್ರಯಾನ-3 ಯಶಸ್ವಿಯಾಗಿ ಪೂರೈಸಿ ಭಾರತದ ಬಗ್ಗೆ ಇಡೀ ಜಗತ್ತೇ ನಿಬ್ಬೆರಗಾಗಿದೆ. ಈ ಬೆನ್ನಲ್ಲೇ ಇದಕ್ಕೆ ಕಾರಣರಾದ ಇಸ್ರೋ ವಿಜ್ಞಾನಿಗಳನ್ನು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಹೊಗಳುತ್ತಿದ್ದಾರೆ. ಈ ಸಾಲಿಗೆ ಈಗ ಮಂಡ್ಯ ಸಂಸದೆ ಸುಮಲತಾ ಅಂಬರೀಶ್​ ಸೇರಿದ್ದಾರೆ.

ಈ ಸಂಬಂಧ ಟ್ವೀಟ್​ ಮಾಡಿರೋ ಸುಮಲತಾ ಅಂಬರೀಶ್​​, ಚಂದ್ರಯಾನ 3 ಯಶಸ್ಸು ಭಾರತೀಯರ ಹೆಮ್ಮೆ. ಇದು ಇತಿಹಾಸದ ಪುಟಗಳಲ್ಲಿ ದಾಖಲಾದ ದಿನ. ಇಂಥದ್ದೊಂದು ಸಾಧನೆಯ ಹಿಂದೆ ವಿಜ್ಞಾನಿಗಳ, ತಂತ್ರಜ್ಞರ ದಣಿವರಿಯದ ಶ್ರಮವಿದೆ. ಕೋಟಿ ಕೋಟಿ ಭಾರತೀಯರ ಪ್ರಾರ್ಥನೆಯ ಫಲವಿದೆ ಎಂದರು.

ಅದರಲ್ಲೂ ನನ್ನ ಕ್ಷೇತ್ರದ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಅಂಚೆ ಚಿಟ್ಟನಹಳ್ಳಿ ಗ್ರಾಮದ ಯುವಕ ರವಿ .ಪಿ ಗೌಡ ಅವರು ಹಿರಿಯ ವಿಜ್ಞಾನಿಯಾಗಿ ಈ ಸಾಧಕರ ತಂಡದಲ್ಲಿ ಸೇವೆ ಸಲ್ಲಿಸಿರುವುದು ಅತ್ಯಂತ ಅಭಿಮಾನ ತಂದಿದೆ. ಇಸ್ರೋ ಚಂದ್ರಯಾನ 3 ತಂಡಕ್ಕೆ ಹಾಗೂ ಸಾಧನೆಯ ಭಾಗವಾಗಿರುವ ರವಿ.ಪಿ ಗೌಡ ಅವರಿಗೆ ವಿಶೇಷ ಅಭಿನಂದನೆಗಳು ಎಂದರು.

ಕೊನೆಗೂ ಕೋಟ್ಯಾಂತರ ಭಾರತೀಯರ ಪ್ರಾರ್ಥನೆ ಫಲಿಸಿದೆ. ಚಂದ್ರನ ದಕ್ಷಿಣ ಧ್ರುವದಲ್ಲಿ ಚಂದ್ರಯಾನ 3 ಮಿಷನ್ ಯಶಸ್ವಿಯಾಗಿ ಲ್ಯಾಂಡ್ ಆಗಿದೆ. ವಿಕ್ರಮ್ ಲ್ಯಾಂಡರ್ ಸೇಫ್ ಲ್ಯಾಂಡ್ ಆಗಿದ್ದು ಇಡೀ ದೇಶಾದ್ಯಂತ ಸಂಭ್ರಮಾಚರಣೆ ಶುರುವಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಚಂದ್ರಯಾನ-3 ಯಶಸ್ಸಿನ ಹಿಂದಿದೆ ಕನ್ನಡಿಗನ ಶ್ರಮ; ಮಂಡ್ಯ ಮೂಲದ ಆ ವಿಜ್ಞಾನಿ ಯಾರು..?

https://newsfirstlive.com/wp-content/uploads/2023/08/Isro-Scientist.jpg

Load More