newsfirstkannada.com

×

Breaking: ಬಿಜೆಪಿ ಹಿರಿಯ ನಾಯಕ, ಸಂಸದ ವಿ.ಶ್ರೀನಿವಾಸ್ ಪ್ರಸಾದ್ ನಿಧನ

Share :

Published April 29, 2024 at 6:07am

Update April 29, 2024 at 6:39am

    ಮೂತ್ರಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದರು

    6 ಬಾರಿ ಸಂಸದ, 4 ಬಾರಿ ಶಾಸಕರಾಗಿದ್ದ ಶ್ರೀನಿವಾಸ್ ಪ್ರಸಾದ್

    ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ

ರಾಜ್ಯದ ಹಿರಿಯ ರಾಜಕಾರಣಿ, ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್‌ ಅವರು ನಿಧನರಾಗಿದ್ದಾರೆ. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮೂತ್ರಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ರಾತ್ರಿ 1.20ಕ್ಕೆ ನಿಧನರಾಗಿದ್ದಾರೆ.

76 ವರ್ಷ ವಯಸ್ಸಿನ ಶ್ರೀನಿವಾಸ್ ಪ್ರಸಾದ್ ಅವರು ಪೂರ್ಣ ಹೆಸರು ವೆಂಕಟಯ್ಯ ಶ್ರೀನಿವಾಸ್ ಪ್ರಸಾದ್. 1947 ಜನಿಸಿದರು. ರಾಜಕೀಯದಲ್ಲಿ ಹೆಚ್ಚು ತೊಡಗಿಸಿಕೊಂಡಿದ್ದ ಇವರು ನಂಜನಗೂಡು ಕ್ಷೇತ್ರವನ್ನು ಪ್ರತಿನಿಧಿಸುವ  ಮೂಲಕ ಕರ್ನಾಟಕ ವಿಧಾನಸಭೆಯ ಸದಸ್ಯರಾಗಿದ್ದರು.

ಚಾಮರಾಜನಗರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ ಆರು ಬಾರಿ ಸಂಸದರರಾಗಿದ್ದರು. 2008, 2013ರಲ್ಲಿ ನಂಜನಗೂಡು ವಿಧಾನಸಭೆ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ವಾಜಪೇಯಿ ಸಂಪುಟದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಆದರೆ ಅನಾರೋಗ್ಯಕ್ಕೆ ತುತ್ತಾದ ಅವರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಇವರಿಗೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನದನಪ್ಪಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Breaking: ಬಿಜೆಪಿ ಹಿರಿಯ ನಾಯಕ, ಸಂಸದ ವಿ.ಶ್ರೀನಿವಾಸ್ ಪ್ರಸಾದ್ ನಿಧನ

https://newsfirstlive.com/wp-content/uploads/2024/04/Shrinivasprasada.jpg

Load More