/newsfirstlive-kannada/media/post_attachments/wp-content/uploads/2025/05/bangarappa-sslc.jpg)
ಬೆಂಗಳೂರು: 2024-25ನೇ ಸಾಲಿನ SSLC ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಕರ್ನಾಟಕ ಪರೀಕ್ಷಾ ಮಂಡಳಿ SSLC ಫಲಿತಾಂಶ ಪ್ರಕಟ ಮಾಡಿದೆ. ಕಳೆದ ಮಾರ್ಚ್-ಏಪ್ರಿಲ್ ತಿಂಗಳಲ್ಲಿ ರಾಜ್ಯಾದ್ಯಂತ SSLC ಪರೀಕ್ಷೆ ನಡೆದಿತ್ತು.
ಇದನ್ನೂ ಓದಿ: ಇವತ್ತೇ SSLC ಫಲಿತಾಂಶ ಪ್ರಕಟ; ಮಕ್ಕಳೇ ನಿಮ್ಮ ರಿಸಲ್ಟ್ ನೋಡೋದು ಹೇಗೆ..?
ಇನ್ನೂ, ಈ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇಂದು ಬೆಂಗಳೂರಿನ KSEAB ಕಚೇರಿಯಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ SSLC ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಿದ್ದಾರೆ. ಇದಾದ ಬಳಿಕ ಮಧ್ಯಾಹ್ನ 12-30 ಗಂಟೆಯ ನಂತರ SSLC ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ವೀಕ್ಷಿಸಬಹುದಾಗಿದೆ.
ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ಕರ್ನಾಟಕದಾದ್ಯಂತ 2,818 ಪರೀಕ್ಷಾ ಕೇಂದ್ರಗಳಲ್ಲಿ SSLC ಪರೀಕ್ಷೆ ನಡೆಸಲಾಗಿತ್ತು. ಒಟ್ಟು ಸುಮಾರು 8.96 ಲಕ್ಷ ವಿದ್ಯಾರ್ಥಿಗಳು, 4,61,563 ಬಾಲಕರು ಮತ್ತು 4,34,884 ಬಾಲಕಿಯರು ಪರೀಕ್ಷೆ ಬರೆದಿದ್ದರು. ಸುಮಾರು 75 ಸಾವಿರಕ್ಕೂ ಹೆಚ್ಚು ಮೌಲ್ಯ ಮಾಪಕರು 6 ವಿಷಯಗಳಿಗೆ ಸೇರಿದ 60 ಲಕ್ಷಕ್ಕೂ ಹೆಚ್ಚು ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮಾಡಿದ್ದಾರೆ. ಈಗಾಗಲೇ ಮೌಲ್ಯಮಾಪನ ಕಾರ್ಯ ಮುಗಿಸಿರುವ ಕರ್ನಾಟಕ ಪರೀಕ್ಷಾ ಮಂಡಳಿ ಇಂದು ಫಲಿತಾಂಶ ಪ್ರಕಟ ಮಾಡಿದೆ.
ವಿದ್ಯಾರ್ಥಿಗಳು ರಿಸಲ್ಟ್ ನೋಡೋದು ಹೇಗೆ..?
- ಸ್ಟೆಪ್ 1: https://karresults.nic.in ವೆಬ್ಸೈಟ್ಗೆ ಭೇಟಿ ನೀಡಿ
- ಸ್ಟೆಪ್ 2: ಹೋಮ್ ಪೇಜ್ನಲ್ಲಿ ಕಾಣುವ Karnataka SSLC result 2025 ಮೇಲೆ ಕ್ಲಿಕ್ ಮಾಡಿ
- ಸ್ಟೆಪ್ 3: Submit the login credentials
- ಸ್ಟೆಪ್ 4: ಅಲ್ಲಿ ತೆರೆದುಕೊಳ್ಳವ ಸ್ಕ್ರೀನ್ ಮೇಲೆ ಹಾಲ್ ಟಿಕೆಟ್ ನಂಬರ್ ಹಾಕಿ ಸಬ್ಮಿಟ್ ಮಾಡಿ
- ಸ್ಟೆಪ್ 5: ಪರದೆ ಮೇಲೆ ನೀವು ಗಳಿಸಿದ ಮಾರ್ಕ್ಸ್ ತೋರಿಸುತ್ತದೆ
- ಸ್ಟೆಪ್ 6: ಅದನ್ನು ನೋಡಿ, ಮಾರ್ಕ್ಸ್ ಶೀಟ್ ಡೌನ್ಲೋಡ್ ಮಾಡಿಕೊಳ್ಳಿ
- ಸ್ಟೆಪ್ 7: ಪಿಡಿಎಫ್ನಲ್ಲಿ ಡೌನ್ಲೋಡ್ ಆಗಲಿದೆ
- ಸ್ಟೆಪ್ 8: ಮುಂದಿನ ದಾಖಲೆಗಳಿಗಾಗಿ ಅದನ್ನು ಸುರಕ್ಷಿತವಾಗಿ ಇಟ್ಟುಕೊಳ್ಳಿ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ