/newsfirstlive-kannada/media/post_attachments/wp-content/uploads/2025/07/Surjewala_MODI.jpg)
ಕೇಂದ್ರ ಸರ್ಕಾರದ ವಿರುದ್ಧ ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಟ್ವೀಟ್ ವಾರ್​ ನಡೆಸಿದ್ದಾರೆ. ಕರ್ನಾಟಕಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಅವರು ಬೆಳಕು ಚೆಲ್ಲಿದ್ದಾರೆ. ಜೊತೆಗೆ ಕರ್ನಾಟಕದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರನ್ನು ನೇಮಕ ಮಾಡಲು ಆಗದೇ ರಾಹುಲ್ ಗಾಂಧಿ ಅವರ ಬಗ್ಗೆ ಟೀಕರ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರ ಟ್ವೀಟ್​ನ ಸಾರಾಂಶ ಹೀಗಿದೆ. ಕರ್ನಾಟಕದಲ್ಲಿ ರಾಜ್ಯಾಧ್ಯಕ್ಷರನ್ನು ನೇಮಿಸಲಾಗದ, ರಾಷ್ಟ್ರೀಯ ಅಧ್ಯಕ್ಷರನ್ನು ಆಯ್ಕೆ ಮಾಡಲು ಹೆಣಗಾಡುತ್ತಿರುವ ಬಿಜೆಪಿ ಪಕ್ಷದ ಅಮಿತ್ ಮಾಳವೀಯ ಅವರ ವಿಕೃತ, ನೀಚ ಸ್ವಭಾವಕ್ಕೆ ಮಿತಿಯೇ ಇಲ್ಲದಂತಾಗಿದೆ.
‘ಕರ್ನಾಟಕದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರನ್ನು ನಿರ್ಧರಿಸಲಾಗದೆ ಬಿಜೆಪಿ ಸಹೋದರರ ನಡುವಿನ ಯುದ್ಧದಿಂದ (ಫ್ರಾಟ್ರಿಸಿಡಲ್) ನುಣಿಚಿಕೊಳ್ಳಲು ಅಮಿತ್ ಮಾಳವೀಯ ರಾಹುಲ್‌ಗಾಂಧಿ ಅವರ ಬಗ್ಗೆ ಟೀಕಿಸಿ ವಿಕೃತಿ ಮೆರೆದಿದ್ದಾರೆ. ಇದಕ್ಕೂ ಮೊದಲು ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಮಾಡುತ್ತಿರುವ ಅನ್ಯಾಯ ಹಾಗೂ ಕನ್ನಡಿಗರ ಮೇಲೆ ತೋರುತ್ತಿರುವ ದ್ವೇಷದ ಬಗ್ಗೆ ಉತ್ತರಿಸಲಿ.
ವಾಸ್ತವವಾಗಿ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ದೆಹಲಿಗೆ ಬಂದು 7 ಕೋಟಿ ಕನ್ನಡಿಗರ ಮೇಲಿನ ಬಿಜೆಪಿ ಸರ್ಕಾರ ಮಾಡುತ್ತಿರುವ ದ್ವೇಷ ನಿಲ್ಲಿಸುವಂತೆ ಒತ್ತಾಯಿಸಿದ್ದಾರೆ. ರಾಜಧರ್ಮದ ಬಗ್ಗೆ ನೆನಪಿಸಲು ಹಲವಾರು ಕೇಂದ್ರ ಸಚಿವರನ್ನು ಭೇಟಿಯಾಗಿದ್ದಾರೆ. ಇದನ್ನು ಮರೆಮಾಚಿ ಸುಳ್ಳು ಹೇಳುತ್ತಿರುವ ಬಿಜೆಪಿಯವರು ಕನ್ನಡಿಗರು ಕೇಳುತ್ತಿರುವ ಈ ಪ್ರಶ್ನೆಗಳಿಗೆ ಉತ್ತರಿಸಲಿ.
- ಜಿಎಸ್‌ಟಿಯಲ್ಲಿ ಕರ್ನಾಟಕದ ನ್ಯಾಯಯುತ ಪಾಲು ನೀಡದೆ 1 ರೂ ಸಂಗ್ರಹಿಸಿ ಕೇವಲ 13 ಪೈಸೆ ನೀಡುತ್ತಿರುವುದು ಯಾಕೆ?
- 2023-24ರ ಕೇಂದ್ರ ಬಜೆಟ್‌ನಲ್ಲಿ 5,300 ಕೋಟಿ ರೂ ವಿಶೇಷ ಅನುದಾನ ಭರವಸೆ ನೀಡಿ. ಒಂದು ರೂಪಾಯಿ ಕೂಡ ಯಾಕೆ ಬಿಡುಗಡೆ ಮಾಡಲಿಲ್ಲ?
- ಉತ್ತರ ಕರ್ನಾಟಕದ ಲಕ್ಷಾಂತರ ಜನರಿಗೆ ಅನುಕೂಲವಾಗುವ ಕೃಷ್ಣಾ ಜಲವಿವಾದ ನ್ಯಾಯಾಧೀಕರಣ-2 ತೀರ್ಮಾನದ ಬಗ್ಗೆ ಯಾಕೆ ಅಧಿಸೂಚನೆ ಹೊರಡಿಸಿಲ್ಲ?
- ಎತ್ತಿನಹೊಳೆ ಮತ್ತು ಕಳಸಾ-ಬಂಡೂರಿ ಯೋಜನೆಗಳಿಗೆ ಯಾಕೆ ಅನುಮೋದನೆ ನೀಡುತ್ತಿಲ್ಲ.
- ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು, ದಾವಣಗೆರೆ ಸೇರಿ ಮಧ್ಯ ಕರ್ನಾಟಕದ 2.25 ಲಕ್ಷ ಹೆಕ್ಟೇರ್‌ಗೆ ನೀರುಣಿಸಬಹುದಾದ ಭದ್ರಾ ಮೇಲ್ದಂಡೆ ಯೋಜನೆಗೆ ಯಾಕೆ ಅನುಮತಿ ನೀಡುತ್ತಿಲ್ಲ?
- ಬೆಂಗಳೂರಿಗೆ ಕುಡಿಯುವ ನೀರು ಒದಗಿಸುವ ಮೇಕೆದಾಟು ಅಣೆಕಟ್ಟು ಯೋಜನೆಗೆ ಕೇಂದ್ರ ಸರ್ಕಾರದ ಜಲಶಕ್ತಿ ಸಚಿವಾಲಯ ನಿರಾಕರಿಸಲು ಕಾರಣವೇನು?
- 15ನೇ ಹಣಕಾಸು ಆಯೋಗಕ್ಕೆ ಮೋದಿ ಸರ್ಕಾರ, ಕರ್ನಾಟಕ ರಾಜ್ಯಕ್ಕೆ ನ್ಯಾಯಯುತವಾಗಿ ಸಲ್ಲಬೇಕಾದ 1.87 ಲಕ್ಷ ಕೋಟಿ ರೂ ಯಾಕೆ ನೀಡಿಲ್ಲ.
- ನೆರೆೆ, ಬರ ನಷ್ಟಕ್ಕೆ ಕೇಂದ್ರ ವಿಪತ್ತು ಪರಿಹಾರ ನಿಧಿಯಿಂದ ಪರಿಹಾರಕ್ಕೆ ಪದೇ ಪದೇ ಗೋಗರೆದರೂ ಯಾಕೆ ಬಿಡುಗಡೆ ಮಾಡಲಿಲ್ಲ.
- ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ನಿತ್ಯವೂ ಕನ್ನಡಿಗರಿಗೆ ಅವಮಾನ ಮಾಡುತ್ತಿರುವ ಬಗ್ಗೆ ಇವೂ ಸೇರಿ ಹಲವು ನಿದರ್ಶನಗಳಿವೆ.
ಇದನ್ನೂ ಓದಿ: ಬ್ಯಾಡ್ಮಿಂಟನ್ ಸ್ಟಾರ್ ಜ್ವಾಲಾ ಗುಟ್ಟಾ ಮಗಳ ನಾಮಕರಣ ಸಂಭ್ರಮ.. ಅಮೀರ್ ಖಾನ್ ಬಂದಿದ್ದಕ್ಕೆ ಭಾವುಕ!
ಹೀಗಾಗಿ ಸುಳ್ಳುಗಳ ಮರೆಯಲ್ಲಿ ಅವಿತುಕೊಳ್ಳುವುದನ್ನು ನಿಲ್ಲಿಸಿ ಕರ್ನಾಟಕದ ಜನತೆಯ ಪ್ರಶ್ನೆಗಳಿಗೆ ಉತ್ತರಿಸಿ ಎಂದು ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಕಿಟಿ ಕಾರಿದ್ದಾರೆ. ಕೇಂದ್ರದಿಂದ ರಾಜ್ಯಕ್ಕೆ ಇಷ್ಟೊಂದು ಅನ್ಯಾಯಗಳು ಆಗುತ್ತಿದ್ದರೂ ಇವುಗಳನ್ನು ಮುಚ್ಚಿ ಹಾಕಲು ಬೇರೆ ಬೇರೆ ವಿಷಯಗಳನ್ನು ಎಳೆದು ತರಲು ಬಿಜೆಪಿ ಮುಂದಾಗುತ್ತಿದೆ ಎಂದು ಹೇಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ