newsfirstkannada.com

ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್​.. DA ಹೆಚ್ಚಳ ಮಾಡಿ ಸಿಎಂ ಸಿದ್ದು ಆದೇಶ

Share :

Published March 12, 2024 at 5:05pm

    ಜನವರಿ 1ರಿಂದಲೇ ತುಟ್ಟಿ ಭತ್ಯೆ ಹೆಚ್ಚಳ ಪೂರ್ವಾನ್ವಯ ಆಗಲಿದೆ

    ರಾಜ್ಯ ಸರ್ಕಾರಕ್ಕೆ ವಾರ್ಷಿಕ 1,792 ಕೋಟಿ ರೂಪಾಯಿ ಹೊರೆ

    ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಲೋಕಸಭಾ ಎಲೆಕ್ಷನ್​ ಸಮೀಪಿಸುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ರಾಜ್ಯದ ಸರ್ಕಾರಿ ನೌಕರರಿಗೆ ತುಟ್ಟಿ (DA) ಭತ್ಯೆಯನ್ನು ಹೆಚ್ಚಳ ಮಾಡಲಾಗಿದೆ.

ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ಶೇಕಡಾ 3.75ರಷ್ಟು ಹೆಚ್ಚಳ ಮಾಡಲು ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನಿರ್ಧರಿಸಿದೆ. ಕೇಂದ್ರ ಸರ್ಕಾರದ ವೇತನ ನೀತಿಯಂತೆ ಸಂಬಳ ಪಡೆಯುವ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ.4ರಷ್ಟು ಹೆಚ್ಚಳ ಮಾಡಲಾಗಿದೆ. ಈ ತುಟ್ಟಿ ಭತ್ಯೆ ಏರಿಕೆಯಿಂದ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಪ್ರತಿ ವರ್ಷ 1,792 ಕೋಟಿ ರೂಪಾಯಿ ಹೆಚ್ಚುವರಿಯಾಗಿ ಹೊರೆಯಾಗಲಿದೆ.

ಇದನ್ನು ಓದಿ: ಮೋದಿ ಕಾಲದಲ್ಲಿ CM ಕುರ್ಚಿ ಕಳ್ಕೊಂಡ 7ನೇ ನಾಯಕ ಖಟ್ಟರ್; ಮೂರೇ ದಿನಕ್ಕೆ ಪಟ್ಟ ತ್ಯಜಿಸಿದ್ದ ಯಡಿಯೂರಪ್ಪ..!

2024ರ ಜನವರಿ 1ರಿಂದ ಪೂರ್ವಾನ್ವಯ ಆಗುವಂತೆ ತುಟ್ಟಿ ಭತ್ಯೆ ಏರಿಕೆ ಆಗುತ್ತದೆ. ಶೇ.38.75 ರಿಂದ ಶೇ.42.5ಕ್ಕೆ ಇದು ಹೆಚ್ಚಳವಾಗುತ್ತದೆ. ಇದನ್ನು ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮಾಡುವ ಮೂಲಕ ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್​.. DA ಹೆಚ್ಚಳ ಮಾಡಿ ಸಿಎಂ ಸಿದ್ದು ಆದೇಶ

https://newsfirstlive.com/wp-content/uploads/2024/03/CM_SIDDARAMAIAH-3.jpg

Load More